Petrol and Diesel Rate Today: ಪೆಟ್ರೋಲ್, ಡೀಸೆಲ್ ದರ ಸ್ಥಿರ; ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂಧನ ಬೆಲೆ ಎಷ್ಟಿದೆ ಗೊತ್ತಾ?

Petrol Diesel Price Today, 17-01-2022: ನವೆಂಬರ್ 4ರಂದು ಕೇಂದ್ರ ಸರ್ಕಾರ ಪೆಟ್ರೋಲ್-ಡೀಸೆಲ್ ಮೇಲಿನ ಅಬಕಾರಿ ಸುಂಕ ಕಡಿತಗೊಳಿಸಿತ್ತು. ಅದಾದ ಮೇಲೆ ಹಲವು ರಾಜ್ಯ ಸರ್ಕಾರಗಳೂ ಕೂಡ ವ್ಯಾಟ್ (VAT) ಕಡಿತಗೊಳಿಸಿವೆ. ಹೀಗಾಗಿ ಅಂದಿನಿಂದಲೂ ಪೆಟ್ರೋಲ್, ಡೀಸೆಲ್ ಬೆಲೆ ಮಹಾನಗರಗಳಲ್ಲಿ ಸ್ಥಿರವಾಗಿಯೇ ಇವೆ.

Petrol and Diesel Rate Today: ಪೆಟ್ರೋಲ್, ಡೀಸೆಲ್ ದರ ಸ್ಥಿರ; ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂಧನ ಬೆಲೆ ಎಷ್ಟಿದೆ ಗೊತ್ತಾ?
ಸಾಂದರ್ಭಿಕ ಚಿತ್ರ
Follow us
TV9 Web
| Updated By: sandhya thejappa

Updated on:Jan 18, 2022 | 9:17 AM

ಸದ್ಯ ರಾಜ್ಯದಲ್ಲಿ ಕೊರೊನಾ (Coronavirus) ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಈಗಾಗಲೇ ಕರ್ನಾಟಕ ಸರ್ಕಾರ ಕೊರೊನಾ ವಿರುದ್ಧ ಹೋರಾಡಲು ಕಠಿಣ ನಿಯಮಗಳನ್ನ ಜಾರಿಗೆ ತಂದಿದೆ. ಈ ನಡುವೆ ಸರ್ಕಾರ ಮತ್ತೆ ಲಾಕ್​ಡೌನ್ ಜಾರಿಗೊಳಿಸುತ್ತಾ ಎಂಬ ಆತಂಕ ಜನರಲ್ಲಿ ಮೂಡಿದೆ. ಇದೇನೇ ಇರಲಿ. ಸದ್ಯ ರಾಜ್ಯದಲ್ಲಿ ನೈಟ್ ಕರ್ಫ್ಯೂ ಮತ್ತು ವೀಕೆಂಡ್ ಕರ್ಫ್ಯೂ ಜಾರಿಯಲ್ಲಿದೆ. ನೈಟ್ ಕರ್ಫ್ಯೂ, ವೀಕೆಂಡ್ ಕರ್ಫ್ಯೂ ಸಮಯವನ್ನು ಹೊರತುಪಡಿಸಿ ಬೇರೆ ಎಲ್ಲಾ ಸಮಯದಲ್ಲೂ ಓಡಾಡಲು ಸರ್ಕಾರ ಅನುಮತಿ ನೀಡಿದೆ. ಹೀಗಾಗಿ ವಾಹನ ಸವಾರರಿಗೆ ಪ್ರತಿದಿನ ಇಂಧನ ದರ (Fuel Price) ಎಷ್ಟಿದೆ ಅಂತ ನೋಡಲು ಕುತೂಹಲ ಇರುತ್ತದೆ. ಇಂದಿನ ಪೆಟ್ರೋಲ್ ಬೆಲೆ (Petrol Price) ಮತ್ತು ಡೀಸೆಲ್ ದರವನ್ನು (Diesel Price) ಇಲ್ಲಿ ತಿಳಿಸಲಾಗಿದೆ.

ನವೆಂಬರ್ 4ರಂದು ಕೇಂದ್ರ ಸರ್ಕಾರ ಪೆಟ್ರೋಲ್-ಡೀಸೆಲ್ ಮೇಲಿನ ಅಬಕಾರಿ ಸುಂಕ ಕಡಿತಗೊಳಿಸಿತ್ತು. ಅದಾದ ಮೇಲೆ ಹಲವು ರಾಜ್ಯ ಸರ್ಕಾರಗಳೂ ಕೂಡ ವ್ಯಾಟ್ (VAT) ಕಡಿತಗೊಳಿಸಿವೆ. ಹೀಗಾಗಿ ಅಂದಿನಿಂದಲೂ ಪೆಟ್ರೋಲ್, ಡೀಸೆಲ್ ಬೆಲೆ ಮಹಾನಗರಗಳಲ್ಲಿ ಸ್ಥಿರವಾಗಿಯೇ ಇವೆ. ಭಾರತದ ತೈಲ ಕಂಪನಿಗಳು ಇಂದು (ಜನವರಿ 17, ಸೋಮವಾರ) ಬೆಳಗ್ಗೆ ಪೆಟ್ರೋಲ್-ಡೀಸೆಲ್ ಬೆಲೆಯನ್ನು ಬಿಡುಗಡೆ ಮಾಡಿದ್ದು,ಇಂದು ಕೂಡ ಇಂಧನಗಳ ದರದಲ್ಲಿಯಾವುದೇ ಬದಲಾವಣೆಯಾಗಿಲ್ಲ. ಕಳೆದ ಎರಡೂವರೆ ತಿಂಗಳುಗಳಿಂದಲೂ ತೈಲಗಳ ಬೆಲೆ ಸ್ಥಿರವಾಗಿಯೇ ಇದೆ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 95.41 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.67 ರೂಪಾಯಿ ದಾಖಲಾಗಿದೆ. ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 100.58 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 85.01 ರೂಪಾಯಿ ದಾಖಲಾಗಿದೆ. ವಾಣಿಜ್ಯ ನಗರಿ ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 109.98 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.14 ರೂಪಾಯಿ ಇದೆ. ಅದೇ ರೀತಿ ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 101.40 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 91.43 ರೂಪಾಯಿ ಇದೆ. ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ಬೆಲೆ 104.67 ರೂಪಾಯಿ ಹಾಗೂ ಲೀಟರ್ ಡೀಸೆಲ್ ಡೀಸೆಲ್ ದರ 89.79 ರೂಪಾಯಿ ನಿಗದಿಯಾಗಿದೆ.

ಹೈದರಾಬಾದ್ನಲ್ಲಿ ಲೀಟರ್ ಪೆಟ್ರೋಲ್ ದರ 108.20 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.62 ರೂಪಾಯಿ ನಿಗದಿಯಾಗಿದೆ. ಗುಜರಾತ್ನ ಗಾಂಧಿನಗರದಲ್ಲಿ ಲೀಟರ್ ಪೆಟ್ರೋಲ್ ದರ 95.35 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 89.33 ರೂಪಾಯಿ ನಿಗದಿಯಾಗಿದೆ. ಕೇರಳದ ತಿರುವನಂತಪುರಂನಲ್ಲಿ ಲೀಟರ್ ಪೆಟ್ರೋಲ್ಗೆ 106.36 ರೂಪಾಯಿ ಇದ್ದು, ಲೀಟರ್ ಡೀಸೆಲ್ ಬೆಲೆ 93.47 ರೂಪಾಯಿ ನಿಗದಿಯಾಗಿದೆ. ಲಕ್ನೋದಲ್ಲಿ ಲೀಟರ್ ಪೆಟ್ರೋಲ್ ದರ 95.28 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.80 ರೂಪಾಯಿ ನಿಗದಿಯಾಗಿದೆ. ಶ್ರೀಗಂಗಾನಗರದಲ್ಲಿ ಲೀಟರ್ ಪೆಟ್ರೋಲ್ಗೆ 114.01 ರೂಪಾಯಿ ಹಾಗೂ ಲೀಟರ್ ಡೀಸೆಲ್ಗೆ 98.39 ರೂಪಾಯಿ ದಾಖಲಾಗಿದೆ. ಭೋಪಾಲ್ನಲ್ಲಿ ಲೀಟರ್ ಪೆಟ್ರೋಲ್ ದರ 107.23 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 90.87 ರೂಪಾಯಿ ಇದೆ. ಗುವಾಹಟಿಯಲ್ಲಿ ಲೀಟರ್ ಪೆಟ್ರೋಲ್ ದರ 94.58 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.80 ರೂಪಾಯಿ ನಿಗದಿಯಾಗಿದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ                                                                                                              ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ. ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ಇದನ್ನೂ ಓದಿ

Gold Rate: ಇಂದು ಆಭರಣ ಖರೀದಿಸುವವರು ಚಿನ್ನ, ಬೆಳ್ಳಿ ದರ ಎಷ್ಟಿದೆ ಅಂತ ನೋಡಿ

ಕೋವಿಡ್ ಲಸಿಕೆ ಅಭಿಯಾನದಡಿ ಭಾರತ ಮಾಡಿರುವ ಸಾಧನೆಯನ್ನು ಇಡೀ ವಿಶ್ವ ಬೆರಗುಗಣ್ಣುಳಿಂದ ನೋಡುತ್ತಿದೆ!!

Published On - 9:16 am, Tue, 18 January 22

ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM