AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol and Diesel Rate Today: ವಾಹನಕ್ಕೆ ಇಂಧನ ತುಂಬುವ ಮುನ್ನ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ಗಮನಿಸಿ!

Petrol Diesel Price Today, 23-01-2022: ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 101.40 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 91.43 ರೂಪಾಯಿ ಇದೆ. ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ಬೆಲೆ 104.67 ರೂಪಾಯಿ ಹಾಗೂ ಲೀಟರ್ ಡೀಸೆಲ್ ಡೀಸೆಲ್ ದರ 89.79 ರೂಪಾಯಿ ನಿಗದಿಯಾಗಿದೆ.

Petrol and Diesel Rate Today: ವಾಹನಕ್ಕೆ ಇಂಧನ ತುಂಬುವ ಮುನ್ನ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ಗಮನಿಸಿ!
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Jan 23, 2022 | 7:50 AM

Share

Petrol Diesel Price Today|ದೆಹಲಿ: ವಾರಾಂತ್ಯ ಕರ್ಫ್ಯೂ ಕರ್ನಾಟಕದಲ್ಲಿ ಹಿಂತೆಗೆದುಕೊಳ್ಳಲಾಗಿದೆ. ಆ ಬಳಿಕ ವೀಕೆಂಡ್​ನಲ್ಲಿ ಕೂಡ ಹೊರಗೆ ಓಡಾಡುವವರ ಸಂಖ್ಯೆ ಹೆಚ್ಚಾಗಿ ಇರಲಿದೆ. ವಾರಾಂತ್ಯದ ಯೋಜನೆಗಳನ್ನು ಹಾಕಿಕೊಂಡು ಜನರು ತಮ್ಮ ವಾಹನ ಹತ್ತಿ ಹೊರಟುಬಿಡುತ್ತಾರೆ. ಅಂತಹ ವಾಹನ ಸವಾರರಿಗೆ ಇಂಧನ ದರ (Fuel Price) ಎಷ್ಟಿದೆ ಎಂಬ ಕುತೂಹಲ ಇದ್ದೇ ಇರುತ್ತದೆ. ಇಂದಿನ ಪೆಟ್ರೋಲ್ ಬೆಲೆ (Petrol Price) ಮತ್ತು ಡೀಸೆಲ್ ದರವನ್ನು (Diesel Price) ಇಲ್ಲಿ ತಿಳಿಸಲಾಗಿದೆ. ಭಾರತದ ತೈಲ ಕಂಪನಿಗಳು ಇಂದು (ಜನವರಿ 23, ಭಾನುವಾರ) ಬೆಳಗ್ಗೆ ಪೆಟ್ರೋಲ್​-ಡೀಸೆಲ್​ ಬೆಲೆಯನ್ನು ಬಿಡುಗಡೆ ಮಾಡಿದ್ದು,ಇಂದು ಕೂಡ ಇಂಧನಗಳ ದರದಲ್ಲಿ(Fuel Price) ಯಾವುದೇ ಬದಲಾವಣೆಯಾಗಿಲ್ಲ. ಕಳೆದ ಎರಡೂವರೆ ತಿಂಗಳುಗಳಿಂದಲೂ ತೈಲಗಳ ಬೆಲೆ ಸ್ಥಿರವಾಗಿಯೇ ಇದೆ. 

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 95.41 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.67 ರೂಪಾಯಿ ದಾಖಲಾಗಿದೆ. ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 100.58 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 85.01 ರೂಪಾಯಿ ದಾಖಲಾಗಿದೆ. ವಾಣಿಜ್ಯ ನಗರಿ ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 109.98 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.14 ರೂಪಾಯಿ ಇದೆ. ಅದೇ ರೀತಿ ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 101.40 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 91.43 ರೂಪಾಯಿ ಇದೆ. ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ಬೆಲೆ 104.67 ರೂಪಾಯಿ ಹಾಗೂ ಲೀಟರ್ ಡೀಸೆಲ್ ಡೀಸೆಲ್ ದರ 89.79 ರೂಪಾಯಿ ನಿಗದಿಯಾಗಿದೆ.

ಹೈದರಾಬಾದ್ನಲ್ಲಿ ಲೀಟರ್ ಪೆಟ್ರೋಲ್ ದರ 108.20 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.62 ರೂಪಾಯಿ ನಿಗದಿಯಾಗಿದೆ. ಗುಜರಾತ್ನ ಗಾಂಧಿನಗರದಲ್ಲಿ ಲೀಟರ್ ಪೆಟ್ರೋಲ್ ದರ 95.35 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 89.33 ರೂಪಾಯಿ ನಿಗದಿಯಾಗಿದೆ. ಕೇರಳದ ತಿರುವನಂತಪುರಂನಲ್ಲಿ ಲೀಟರ್ ಪೆಟ್ರೋಲ್ಗೆ 106.36 ರೂಪಾಯಿ ಇದ್ದು, ಲೀಟರ್ ಡೀಸೆಲ್ ಬೆಲೆ 93.47 ರೂಪಾಯಿ ನಿಗದಿಯಾಗಿದೆ. ಲಕ್ನೋದಲ್ಲಿ ಲೀಟರ್ ಪೆಟ್ರೋಲ್ ದರ 95.28 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.80 ರೂಪಾಯಿ ನಿಗದಿಯಾಗಿದೆ. ಶ್ರೀಗಂಗಾನಗರದಲ್ಲಿ ಲೀಟರ್ ಪೆಟ್ರೋಲ್ಗೆ 114.01 ರೂಪಾಯಿ ಹಾಗೂ ಲೀಟರ್ ಡೀಸೆಲ್ಗೆ 98.39 ರೂಪಾಯಿ ದಾಖಲಾಗಿದೆ. ಭೋಪಾಲ್ನಲ್ಲಿ ಲೀಟರ್ ಪೆಟ್ರೋಲ್ ದರ 107.23 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 90.87 ರೂಪಾಯಿ ಇದೆ. ಗುವಾಹಟಿಯಲ್ಲಿ ಲೀಟರ್ ಪೆಟ್ರೋಲ್ ದರ 94.58 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.80 ರೂಪಾಯಿ ನಿಗದಿಯಾಗಿದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ                                                                                                              ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ. ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ಇದನ್ನೂ ಓದಿ:

ವಿವಿಧ ನಗರದಲ್ಲಿ ಪೆಟ್ರೋಲ್ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/diesel-price-today.htm

ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​
Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​