AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol and Diesel Rate Today: ಬೆಂಗಳೂರು ಸಹಿತ ಇತರ ನಗರಗಳ ಪೆಟ್ರೋಲ್, ಡೀಸೆಲ್ ದರ ತಿಳಿಯಲು ಇಲ್ಲಿ ನೋಡಿ

Petrol Diesel Price Today, 25-01-2022: ಭಾರತದ ತೈಲ ಕಂಪನಿಗಳು ಇಂದು (ಜನವರಿ 25, ಮಂಗಳವಾರ) ಬೆಳಗ್ಗೆ ಪೆಟ್ರೋಲ್​-ಡೀಸೆಲ್​ ಬೆಲೆಯನ್ನು ಬಿಡುಗಡೆ ಮಾಡಿದ್ದು,ಇಂದು ಕೂಡ ಇಂಧನಗಳ ದರದಲ್ಲಿ(Fuel Price) ಯಾವುದೇ ಬದಲಾವಣೆಯಾಗಿಲ್ಲ.

Petrol and Diesel Rate Today: ಬೆಂಗಳೂರು ಸಹಿತ ಇತರ ನಗರಗಳ ಪೆಟ್ರೋಲ್, ಡೀಸೆಲ್ ದರ ತಿಳಿಯಲು ಇಲ್ಲಿ ನೋಡಿ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jan 25, 2022 | 8:14 AM

Share

Petrol Diesel Price Today| ದೆಹಲಿ: ಈ ಮೊದಲು ಕೆಲವು ತಿಂಗಳುಗಳ ಕಾಲ ಏರುಗತಿಯಲ್ಲೇ ಸಾಗಿದ್ದ ಪೆಟ್ರೋಲ್, ಡೀಸೆಲ್ ದರ ದೀಪಾವಳಿ ವೇಳೆ ಇಳಿಕೆ ಕಂಡಿತ್ತು. ಸೆಂಚುರಿ ಬಾರಿಸಿ ಮುನ್ನುಗ್ಗುತ್ತಿದ್ದ ಇಂಧನ ದರಕ್ಕೆ ಸುಸ್ತಾಗಿದ್ದ ವಾಹನ ಸವಾರರು ಕೊಂಚ ನಿಟ್ಟುಸಿರು ಬಿಡುವಂತಾಗಿತ್ತು. ಆ ಬಳಿಕ, ಕೆಲವು ರಾಜ್ಯ ಸರ್ಕಾರಗಳು ಕೂಡ ಇಂಧನ ದರದಲ್ಲಿ ಇಳಿಕೆ ಮಾಡಿದ್ದವು. ಇದೀಗ ಬಹಳ ಸಮಯದಿಂದ ಯಾವುದೇ ಬದಲಾವಣೆ ಕಾಣದೆ ಪೆಟ್ರೋಲ್, ಡೀಸೆಲ್ ದರ  ಸುಸ್ಥಿತಿಯಲ್ಲಿದೆ. ವಾಹನ ಸವಾರರಿಗೆ ಇಂಧನ ದರ (Fuel Price) ಎಷ್ಟಿದೆ ಎಂಬ ಕುತೂಹಲ ಇದ್ದೇ ಇರುತ್ತದೆ. ಇಂದಿನ ಪೆಟ್ರೋಲ್ ಬೆಲೆ (Petrol Price) ಮತ್ತು ಡೀಸೆಲ್ ದರವನ್ನು (Diesel Price) ಇಲ್ಲಿ ತಿಳಿಸಲಾಗಿದೆ. ಭಾರತದ ತೈಲ ಕಂಪನಿಗಳು ಇಂದು (ಜನವರಿ 25, ಮಂಗಳವಾರ) ಬೆಳಗ್ಗೆ ಪೆಟ್ರೋಲ್​-ಡೀಸೆಲ್​ ಬೆಲೆಯನ್ನು ಬಿಡುಗಡೆ ಮಾಡಿದ್ದು,ಇಂದು ಕೂಡ ಇಂಧನಗಳ ದರದಲ್ಲಿ(Fuel Price) ಯಾವುದೇ ಬದಲಾವಣೆಯಾಗಿಲ್ಲ. ಕಳೆದ ಎರಡೂವರೆ ತಿಂಗಳುಗಳಿಂದಲೂ ತೈಲಗಳ ಬೆಲೆ ಸ್ಥಿರವಾಗಿಯೇ ಇದೆ. 

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 95.41 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.67 ರೂಪಾಯಿ ದಾಖಲಾಗಿದೆ. ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 100.58 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 85.01 ರೂಪಾಯಿ ದಾಖಲಾಗಿದೆ. ವಾಣಿಜ್ಯ ನಗರಿ ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 109.98 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.14 ರೂಪಾಯಿ ಇದೆ. ಅದೇ ರೀತಿ ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 101.40 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 91.43 ರೂಪಾಯಿ ಇದೆ. ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ಬೆಲೆ 104.67 ರೂಪಾಯಿ ಹಾಗೂ ಲೀಟರ್ ಡೀಸೆಲ್ ಡೀಸೆಲ್ ದರ 89.79 ರೂಪಾಯಿ ನಿಗದಿಯಾಗಿದೆ.

ಹೈದರಾಬಾದ್ನಲ್ಲಿ ಲೀಟರ್ ಪೆಟ್ರೋಲ್ ದರ 108.20 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.62 ರೂಪಾಯಿ ನಿಗದಿಯಾಗಿದೆ. ಗುಜರಾತ್ನ ಗಾಂಧಿನಗರದಲ್ಲಿ ಲೀಟರ್ ಪೆಟ್ರೋಲ್ ದರ 95.35 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 89.33 ರೂಪಾಯಿ ನಿಗದಿಯಾಗಿದೆ. ಕೇರಳದ ತಿರುವನಂತಪುರಂನಲ್ಲಿ ಲೀಟರ್ ಪೆಟ್ರೋಲ್ಗೆ 106.36 ರೂಪಾಯಿ ಇದ್ದು, ಲೀಟರ್ ಡೀಸೆಲ್ ಬೆಲೆ 93.47 ರೂಪಾಯಿ ನಿಗದಿಯಾಗಿದೆ. ಲಕ್ನೋದಲ್ಲಿ ಲೀಟರ್ ಪೆಟ್ರೋಲ್ ದರ 95.28 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.80 ರೂಪಾಯಿ ನಿಗದಿಯಾಗಿದೆ. ಶ್ರೀಗಂಗಾನಗರದಲ್ಲಿ ಲೀಟರ್ ಪೆಟ್ರೋಲ್ಗೆ 114.01 ರೂಪಾಯಿ ಹಾಗೂ ಲೀಟರ್ ಡೀಸೆಲ್ಗೆ 98.39 ರೂಪಾಯಿ ದಾಖಲಾಗಿದೆ. ಭೋಪಾಲ್ನಲ್ಲಿ ಲೀಟರ್ ಪೆಟ್ರೋಲ್ ದರ 107.23 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 90.87 ರೂಪಾಯಿ ಇದೆ. ಗುವಾಹಟಿಯಲ್ಲಿ ಲೀಟರ್ ಪೆಟ್ರೋಲ್ ದರ 94.58 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.80 ರೂಪಾಯಿ ನಿಗದಿಯಾಗಿದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ                                                                                                              ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ. ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ವಿವಿಧ ನಗರದಲ್ಲಿ ಪೆಟ್ರೋಲ್ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/diesel-price-today.htm

ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
RCB ಅಭಿಮಾನಿಗಳಿಗೆ ಸರ್ಕಾರದಿಂದ ಇಂದೇ ಸಿಗುತ್ತಾ ಸಿಹಿ ಸುದ್ದಿ?
RCB ಅಭಿಮಾನಿಗಳಿಗೆ ಸರ್ಕಾರದಿಂದ ಇಂದೇ ಸಿಗುತ್ತಾ ಸಿಹಿ ಸುದ್ದಿ?