Petrol and Diesel Rate Today: ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟಾಗಿದೆ? ವಿವಿಧ ನಗರಗಳ ಇಂಧನ ದರ ಇಲ್ಲಿ ಪರಿಶೀಲಿಸಿ

Petrol and Diesel Rate Today: ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟಾಗಿದೆ? ವಿವಿಧ ನಗರಗಳ ಇಂಧನ ದರ ಇಲ್ಲಿ ಪರಿಶೀಲಿಸಿ
ಪ್ರಾತಿನಿಧಿಕ ಚಿತ್ರ

Petrol Diesel Price Today, 26-01-2022: ಭಾರತದ ತೈಲ ಕಂಪನಿಗಳು ಇಂದು (ಜನವರಿ 26, ಬುಧವಾರ) ಬೆಳಗ್ಗೆ ಪೆಟ್ರೋಲ್​-ಡೀಸೆಲ್​ ಬೆಲೆಯನ್ನು ಬಿಡುಗಡೆ ಮಾಡಿದ್ದು,ಇಂದು ಕೂಡ ಇಂಧನಗಳ ದರದಲ್ಲಿ(Fuel Price) ಯಾವುದೇ ಬದಲಾವಣೆಯಾಗಿಲ್ಲ.

TV9kannada Web Team

| Edited By: preethi shettigar

Jan 31, 2022 | 7:39 AM

Petrol Diesel Price Today| ದೆಹಲಿ: ಗಣರಾಜ್ಯೋತ್ಸವ ದಿನವಾದ ಇಂದು ಹಲವರು ವಿಶೇಷ ರೈಡ್ ಹೋಗುವ ಆಸಕ್ತರು ಇರುತ್ತಾರೆ. ಭಾರತದ ಬಾವುಟ ವಾಹನಕ್ಕೆ ಜೋಡಿಸಿಕೊಂಡು ಒಂದು ದಿನದ ಮಟ್ಟಿಗೆ ಎಲ್ಲಿಗಾದರೂ ರೈಡ್ ಹೋಗಿ ಬರುತ್ತಾರೆ. ಇಂದು ಹಲವರಿಗೆ ರಜೆ ಕೂಡ ಇರುವುದರಿಂದ ಈ ಸಂಭ್ರಮ ಹೆಚ್ಚೇ ಇರಬಹುದು. ಏನೇ ಆದರೂ ವಾಹನ ಸವಾರರಿಗೆ ಇಂಧನ ದರ (Fuel Price) ಎಷ್ಟಿದೆ ಎಂಬ ಕುತೂಹಲ ಇರುತ್ತದೆ. ಇಂದಿನ ಪೆಟ್ರೋಲ್ ಬೆಲೆ (Petrol Price) ಮತ್ತು ಡೀಸೆಲ್ ದರವನ್ನು (Diesel Price) ಇಲ್ಲಿ ತಿಳಿಸಲಾಗಿದೆ. ಭಾರತದ ತೈಲ ಕಂಪನಿಗಳು ಇಂದು (ಜನವರಿ 26, ಬುಧವಾರ) ಬೆಳಗ್ಗೆ ಪೆಟ್ರೋಲ್​-ಡೀಸೆಲ್​ ಬೆಲೆಯನ್ನು ಬಿಡುಗಡೆ ಮಾಡಿದ್ದು,ಇಂದು ಕೂಡ ಇಂಧನಗಳ ದರದಲ್ಲಿ(Fuel Price) ಯಾವುದೇ ಬದಲಾವಣೆಯಾಗಿಲ್ಲ. ಕಳೆದ ಎರಡೂವರೆ ತಿಂಗಳುಗಳಿಂದಲೂ ತೈಲಗಳ ಬೆಲೆ ಸ್ಥಿರವಾಗಿಯೇ ಇದೆ. 

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 95.41 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.67 ರೂಪಾಯಿ ದಾಖಲಾಗಿದೆ. ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 100.58 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 85.01 ರೂಪಾಯಿ ದಾಖಲಾಗಿದೆ. ವಾಣಿಜ್ಯ ನಗರಿ ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 109.98 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.14 ರೂಪಾಯಿ ಇದೆ. ಅದೇ ರೀತಿ ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 101.40 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 91.43 ರೂಪಾಯಿ ಇದೆ. ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ಬೆಲೆ 104.67 ರೂಪಾಯಿ ಹಾಗೂ ಲೀಟರ್ ಡೀಸೆಲ್ ಡೀಸೆಲ್ ದರ 89.79 ರೂಪಾಯಿ ನಿಗದಿಯಾಗಿದೆ.

ಹೈದರಾಬಾದ್ನಲ್ಲಿ ಲೀಟರ್ ಪೆಟ್ರೋಲ್ ದರ 108.20 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.62 ರೂಪಾಯಿ ನಿಗದಿಯಾಗಿದೆ. ಗುಜರಾತ್ನ ಗಾಂಧಿನಗರದಲ್ಲಿ ಲೀಟರ್ ಪೆಟ್ರೋಲ್ ದರ 95.35 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 89.33 ರೂಪಾಯಿ ನಿಗದಿಯಾಗಿದೆ. ಕೇರಳದ ತಿರುವನಂತಪುರಂನಲ್ಲಿ ಲೀಟರ್ ಪೆಟ್ರೋಲ್ಗೆ 106.36 ರೂಪಾಯಿ ಇದ್ದು, ಲೀಟರ್ ಡೀಸೆಲ್ ಬೆಲೆ 93.47 ರೂಪಾಯಿ ನಿಗದಿಯಾಗಿದೆ. ಲಕ್ನೋದಲ್ಲಿ ಲೀಟರ್ ಪೆಟ್ರೋಲ್ ದರ 95.28 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.80 ರೂಪಾಯಿ ನಿಗದಿಯಾಗಿದೆ. ಶ್ರೀಗಂಗಾನಗರದಲ್ಲಿ ಲೀಟರ್ ಪೆಟ್ರೋಲ್ಗೆ 114.01 ರೂಪಾಯಿ ಹಾಗೂ ಲೀಟರ್ ಡೀಸೆಲ್ಗೆ 98.39 ರೂಪಾಯಿ ದಾಖಲಾಗಿದೆ. ಭೋಪಾಲ್ನಲ್ಲಿ ಲೀಟರ್ ಪೆಟ್ರೋಲ್ ದರ 107.23 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 90.87 ರೂಪಾಯಿ ಇದೆ. ಗುವಾಹಟಿಯಲ್ಲಿ ಲೀಟರ್ ಪೆಟ್ರೋಲ್ ದರ 94.58 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.80 ರೂಪಾಯಿ ನಿಗದಿಯಾಗಿದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ                                                                                     ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ. ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ವಿವಿಧ ನಗರದಲ್ಲಿ ಪೆಟ್ರೋಲ್ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/diesel-price-today.htm

Follow us on

Related Stories

Most Read Stories

Click on your DTH Provider to Add TV9 Kannada