AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol and Diesel Rate Today: ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಸ್ಥಿರ; ವಿವಿಧ ನಗರಗಳಲ್ಲಿ ದರ ಎಷ್ಟಿದೆ?

Petrol Diesel Price Today, 27-01-2022: ಭಾರತದ ತೈಲ ಕಂಪನಿಗಳು ಇಂದು (ಜನವರಿ 27, ಗುರುವಾರ) ಬೆಳಗ್ಗೆ ಪೆಟ್ರೋಲ್​-ಡೀಸೆಲ್​ ಬೆಲೆಯನ್ನು ಬಿಡುಗಡೆ ಮಾಡಿವೆ. ಇಂದು ಕೂಡ ಇಂಧನಗಳ ದರದಲ್ಲಿ(Fuel Price) ಯಾವುದೇ ಬದಲಾವಣೆಯಾಗಿಲ್ಲ.

Petrol and Diesel Rate Today: ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಸ್ಥಿರ; ವಿವಿಧ ನಗರಗಳಲ್ಲಿ ದರ ಎಷ್ಟಿದೆ?
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Jan 27, 2022 | 8:13 AM

Share

Petrol Diesel Price Today| ದೆಹಲಿ: ವಾಹನ ಸವಾರರಿಗೆ ಇಂಧನ ದರ (Fuel Price) ಇಂದು ಎಷ್ಟಿದೆ ಎಂಬ ಕುತೂಹಲ ಇರುತ್ತದೆ. ಇಂದಿನ ಪೆಟ್ರೋಲ್ ಬೆಲೆ (Petrol Price) ಮತ್ತು ಡೀಸೆಲ್ ದರವನ್ನು (Diesel Price) ಇಲ್ಲಿ ತಿಳಿಸಲಾಗಿದೆ. ಭಾರತದ ತೈಲ ಕಂಪನಿಗಳು ಇಂದು (ಜನವರಿ 27, ಗುರುವಾರ) ಬೆಳಗ್ಗೆ ಪೆಟ್ರೋಲ್​-ಡೀಸೆಲ್​ ಬೆಲೆಯನ್ನು ಬಿಡುಗಡೆ ಮಾಡಿದ್ದು,ಇಂದು ಕೂಡ ಇಂಧನಗಳ ದರದಲ್ಲಿ(Fuel Price) ಯಾವುದೇ ಬದಲಾವಣೆಯಾಗಿಲ್ಲ. ಕಳೆದ ಎರಡೂವರೆ ತಿಂಗಳುಗಳಿಂದಲೂ ತೈಲಗಳ ಬೆಲೆ ಸ್ಥಿರವಾಗಿಯೇ ಇದೆ. ದೇಶದ ವಿವಿಧ ನಗರಗಳಲ್ಲಿ ದರ ಎಷ್ಟಿದೆ ಎಂಬ ಮಾಹಿತಿ ಇಲ್ಲಿದೆ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 95.41 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.67 ರೂಪಾಯಿ ದಾಖಲಾಗಿದೆ. ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 100.58 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 85.01 ರೂಪಾಯಿ ದಾಖಲಾಗಿದೆ. ವಾಣಿಜ್ಯ ನಗರಿ ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 109.98 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.14 ರೂಪಾಯಿ ಇದೆ. ಅದೇ ರೀತಿ ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 101.40 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 91.53 ರೂಪಾಯಿ ಇದೆ. ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ಬೆಲೆ 104.67 ರೂಪಾಯಿ ಹಾಗೂ ಲೀಟರ್ ಡೀಸೆಲ್ ಡೀಸೆಲ್ ದರ 89.79 ರೂಪಾಯಿ ನಿಗದಿಯಾಗಿದೆ.

ಹೈದರಾಬಾದ್ನಲ್ಲಿ ಲೀಟರ್ ಪೆಟ್ರೋಲ್ ದರ 108.20 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.62 ರೂಪಾಯಿ ನಿಗದಿಯಾಗಿದೆ. ಗುಜರಾತ್​ನ ಗಾಂಧಿನಗರದಲ್ಲಿ ಲೀಟರ್ ಪೆಟ್ರೋಲ್ ದರ 95.35 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 89.33 ರೂಪಾಯಿ ನಿಗದಿಯಾಗಿದೆ. ಕೇರಳದ ತಿರುವನಂತಪುರಂನಲ್ಲಿ ಲೀಟರ್ ಪೆಟ್ರೋಲ್ಗೆ 106.36 ರೂಪಾಯಿ ಇದ್ದು, ಲೀಟರ್ ಡೀಸೆಲ್ ಬೆಲೆ 93.47 ರೂಪಾಯಿ ನಿಗದಿಯಾಗಿದೆ. ಲಕ್ನೋದಲ್ಲಿ ಲೀಟರ್ ಪೆಟ್ರೋಲ್ ದರ 95.28 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.80 ರೂಪಾಯಿ ನಿಗದಿಯಾಗಿದೆ.

ಶ್ರೀಗಂಗಾನಗರದಲ್ಲಿ ಲೀಟರ್ ಪೆಟ್ರೋಲ್​ಗೆ 114.01 ರೂಪಾಯಿ ಹಾಗೂ ಲೀಟರ್ ಡೀಸೆಲ್ಗೆ 98.39 ರೂಪಾಯಿ ದಾಖಲಾಗಿದೆ. ಭೋಪಾಲ್ನಲ್ಲಿ ಲೀಟರ್ ಪೆಟ್ರೋಲ್ ದರ 107.23 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 90.87 ರೂಪಾಯಿ ಇದೆ. ಗುವಾಹಟಿಯಲ್ಲಿ ಲೀಟರ್ ಪೆಟ್ರೋಲ್ ದರ 94.58 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.80 ರೂಪಾಯಿ ನಿಗದಿಯಾಗಿದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ. ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ಇದನ್ನೂ ಓದಿ:

Gold and Silver Price: ಚಿನ್ನ ಹಾಗೂ ಬೆಳ್ಳಿಯ ಬೆಲೆಯಲ್ಲಿ ಕೊಂಚ ಏರಿಕೆ; ಬೆಂಗಳೂರು ಹಾಗೂ ಇತರ ನಗರಗಳಲ್ಲಿ ದರ ಎಷ್ಟಿದೆ?

Union Budget 2022: 10 ವರ್ಷದಲ್ಲಿ ಬಜೆಟ್​ ದಿನದಂದು ಷೇರುಪೇಟೆ ಸೂಚ್ಯಂಕಗಳ ಪರ್ಫಾರ್ಮೆನ್ಸ್ ಹೇಗಿತ್ತು?

Follow Us
ರಸ್ತೆ ಬದಿ ನಿಂತಲ್ಲೇ ನಿಂತ ವಾಹನಗಳಿಗೆ ಎಷ್ಟು ದಂಡ ಗೊತ್ತಾ?
ರಸ್ತೆ ಬದಿ ನಿಂತಲ್ಲೇ ನಿಂತ ವಾಹನಗಳಿಗೆ ಎಷ್ಟು ದಂಡ ಗೊತ್ತಾ?
‘ದರ್ಶನ್ ಅಭಿಮಾನಿಗಳು ತಪ್ಪು ಮಾಡಲ್ಲ, ಅದು ಕಿಡಿಗೇಡಿಗಳ ಕೆಲಸ’
‘ದರ್ಶನ್ ಅಭಿಮಾನಿಗಳು ತಪ್ಪು ಮಾಡಲ್ಲ, ಅದು ಕಿಡಿಗೇಡಿಗಳ ಕೆಲಸ’
ಬೆಂಗಳೂರಲ್ಲಿ ಡಿಸಿಪಿ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಮಿಡ್‌ನೈಟ್ ಆಪರೇಷನ್
ಬೆಂಗಳೂರಲ್ಲಿ ಡಿಸಿಪಿ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಮಿಡ್‌ನೈಟ್ ಆಪರೇಷನ್
ಬ್ಯಾಡರಹಳ್ಳಿ ಜನರಿಗೆ ಎದುರಾಯ್ತು ಚಿರತೆ ಭಯ!
ಬ್ಯಾಡರಹಳ್ಳಿ ಜನರಿಗೆ ಎದುರಾಯ್ತು ಚಿರತೆ ಭಯ!
ವಯನಾಡು: ಸುರಂಗ ನಿರ್ಮಾಣ ಸ್ಥಳದಲ್ಲಿ ದುರ್ಘಟನೆ ಸಂಭವಿಸಿದ್ದೇಕೆ?
ವಯನಾಡು: ಸುರಂಗ ನಿರ್ಮಾಣ ಸ್ಥಳದಲ್ಲಿ ದುರ್ಘಟನೆ ಸಂಭವಿಸಿದ್ದೇಕೆ?
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು; ವಿಡಿಯೋ ವೈರಲ್!
ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು; ವಿಡಿಯೋ ವೈರಲ್!
‘ದೇವಿ’ ಸಿನಿಮಾದ ನಟ, ಯುವ ರೈತ ಚೇತನ್​ಗೆ 10 ನಿರ್ದೇಶಕರಿಂದ ಮೋಸ
‘ದೇವಿ’ ಸಿನಿಮಾದ ನಟ, ಯುವ ರೈತ ಚೇತನ್​ಗೆ 10 ನಿರ್ದೇಶಕರಿಂದ ಮೋಸ