Petrol Price Today: ಬೆಂಗಳೂರು, ಚೆನ್ನೈ, ದೆಹಲಿ ಸೇರಿ ವಿವಿಧ ನಗರಗಳ ಇಂದಿನ ಪೆಟ್ರೋಲ್, ಡೀಸೆಲ್ ಬೆಲೆ ಹೀಗಿದೆ

Diesel Price Today: 52 ದಿನಗಳ ಹಿಂದೆ (ಮೇ 21) ಪೆಟ್ರೋಲ್-ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಸರ್ಕಾರ ಕಡಿತಗೊಳಿಸಿತ್ತು. ಇದಾದ ನಂತರ ತೈಲ ಬೆಲೆಯಲ್ಲಿ ಭಾರೀ ಕುಸಿತ ಕಂಡಿತ್ತು.

Petrol Price Today: ಬೆಂಗಳೂರು, ಚೆನ್ನೈ, ದೆಹಲಿ ಸೇರಿ ವಿವಿಧ ನಗರಗಳ ಇಂದಿನ ಪೆಟ್ರೋಲ್, ಡೀಸೆಲ್ ಬೆಲೆ ಹೀಗಿದೆ
ಸಂಗ್ರಹ ಚಿತ್ರImage Credit source: Zee News
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Jul 12, 2022 | 8:53 AM

Fuel Price Today: ಪೆಟ್ರೋಲ್ (Petrol Price) ಮತ್ತು ಡೀಸೆಲ್ ಬೆಲೆಯಲ್ಲಿ (Diesel Price) ಏರಿಳಿತವಾಗುತ್ತಲೇ ಇರುತ್ತದೆ. ಸತತ 52ನೇ ದಿನವೂ ಪೆಟ್ರೋಲ್-ಡೀಸೆಲ್ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಆರ್ಥಿಕ ಹಿಂಜರಿತದ ನಡುವೆಯೂ ಕಚ್ಚಾ ತೈಲದ ಬೆಲೆ ಇಳಿಕೆಯಾಗಿದೆ. ಕಚ್ಚಾತೈಲದ ಬೆಲೆ ಇಳಿಕೆಯಾಗಿದ್ದರೂ, ಪೆಟ್ರೋಲ್ ಮತ್ತು ಡೀಸೆಲ್ ಹಳೆಯ ಮಟ್ಟದಲ್ಲಿಯೇ ಇದೆ. ಇತ್ತೀಚೆಗಷ್ಟೇ ತೈಲ ಕಂಪನಿಗಳು ಗೃಹಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆಯನ್ನು ಹೆಚ್ಚಿಸಿದ್ದವು.

ಇಂಧನ ಬೆಲೆಯಲ್ಲಿ ನಿರಂತರ ಏರಿಕೆಯ ನಂತರ ಕಳೆದ ಕೆಲವು ದಿನಗಳಿಂದ ಜನರಿಗೆ ಸ್ವಲ್ಪ ನಿರಾಳವಾಗಿದೆ. ಸುಮಾರು 2 ತಿಂಗಳಿನಿಂದ ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. 52 ದಿನಗಳ ಹಿಂದೆ (ಮೇ 21) ಪೆಟ್ರೋಲ್-ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಸರ್ಕಾರ ಕಡಿತಗೊಳಿಸಿತ್ತು. ಇದಾದ ನಂತರ ತೈಲ ಬೆಲೆಯಲ್ಲಿ ಭಾರೀ ಕುಸಿತ ಕಂಡಿತ್ತು. ಈ ಹಿಂದೆ ಏಪ್ರಿಲ್ 6ರಂದು ಕೊನೆಯ ಬಾರಿಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಹೆಚ್ಚಿಸಲಾಗಿತ್ತು.

ನಾಲ್ಕು ಮಹಾನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಹೀಗಿವೆ. ದೆಹಲಿ ಪೆಟ್ರೋಲ್ ಬೆಲೆ 96.72 ರೂ. ಮತ್ತು ಡೀಸೆಲ್ ಲೀಟರ್‌ಗೆ 89.62 ರೂ. ಆಗಿದೆ. ಮುಂಬೈ ಪೆಟ್ರೋಲ್ ಬೆಲೆ 109.27 ರೂ. ಮತ್ತು ಡೀಸೆಲ್ ಲೀಟರ್‌ಗೆ 95.84 ರೂ. ಆಗಿದೆ. ಚೆನ್ನೈ ಪೆಟ್ರೋಲ್ ಬೆಲೆ 102.63 ರೂ. ಮತ್ತು ಡೀಸೆಲ್ ಲೀಟರ್‌ಗೆ 94.24 ರೂ. ಆಗಿದೆ. ಕೊಲ್ಕತ್ತಾ ಪೆಟ್ರೋಲ್ ಬೆಲೆ 106.03 ರೂ. ಮತ್ತು ಡೀಸೆಲ್ ಲೀಟರ್‌ಗೆ 92.76 ರೂ. ಆಗಿದೆ.

ಇದನ್ನೂ ಓದಿ: Petrol Price Today: ಬೆಂಗಳೂರು, ಮುಂಬೈ ಸೇರಿದಂತೆ ದೇಶದ ವಿವಿಧೆಡೆ ಇಂದಿನ ಪೆಟ್ರೋಲ್ ಬೆಲೆ ಹೀಗಿದೆ

ನೊಯ್ಡಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ 96.79 ರೂ. ಮತ್ತು ಡೀಸೆಲ್ 89.96 ರೂ ಆಗಿದೆ. ಆಗಿದೆ. ಲಕ್ನೋದಲ್ಲಿ ಪ್ರತಿ ಲೀಟರ್ ಪೆಟ್ರೋಲ್ 96.57 ರೂ ಮತ್ತು ಡೀಸೆಲ್ 89.76 ರೂ ಆಗಿದೆ. ಪಾಟ್ನಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ 107.24 ರೂ ಮತ್ತು ಡೀಸೆಲ್ 94.04 ರೂ ಆಗಿದೆ. ಇಂದು ಕೂಡ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಸ್ಥಿರವಾಗಿವೆ. ಮೇ 21ರಂದು ಸರ್ಕಾರವು ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು ಲೀಟರ್‌ಗೆ 8 ರೂ. ಮತ್ತು ಡೀಸೆಲ್ ಮೇಲೆ 6 ರೂ. ಕಡಿತಗೊಳಿಸಿದಾಗಿನಿಂದ 2 ತಿಂಗಳಿನಿಂದ ಬೆಲೆಗಳು ಬದಲಾಗದೆ ಯಥಾಸ್ಥಿತಿಯಲ್ಲಿ ಉಳಿದಿವೆ.

ಮುಂಬೈನಲ್ಲಿ ಪೆಟ್ರೋಲ್ 111.35 ರೂ. ಮತ್ತು ಡೀಸೆಲ್ 97.28 ರೂ. ಆಗಿದೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಚೆನ್ನೈನಲ್ಲಿ ರೂ.102.63 ಮತ್ತು ರೂ.94.24 ಆಗಿದ್ದರೆ, ಕೋಲ್ಕತ್ತಾದಲ್ಲಿ ಪೆಟ್ರೋಲ್ ರೂ.106.03 ಮತ್ತು ಡೀಸೆಲ್ ರೂ.92.76 ಆಗಿದೆ. ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ 101.94 ರೂ. ಆಗಿದೆ. ಡೀಸೆಲ್ ಬೆಲೆ 87.89 ರೂ. ಆಗಿದೆ.

ಇದನ್ನೂ ಓದಿ: Petrol Price Today: ಬೆಂಗಳೂರು, ದೆಹಲಿ, ಮುಂಬೈನಲ್ಲಿ ಇಂದಿನ ಪೆಟ್ರೋಲ್ ಬೆಲೆ ಹೀಗಿದೆ

ತೈಲ ಮಾರುಕಟ್ಟೆ ಕಂಪನಿಗಳು ದೇಶದಲ್ಲಿ ಗ್ರಾಹಕರಿಗೆ ಅಬಕಾರಿ ಸುಂಕ ಕಡಿತವನ್ನು ವರ್ಗಾಯಿಸಿದರೂ ಸಹ ಪೆಟ್ರೋಲ್ ಮೇಲೆ 13.08 ರೂ ಮತ್ತು ಡೀಸೆಲ್ ಮೇಲೆ 24.09 ರೂ. ನಷ್ಟವನ್ನು ಅನುಭವಿಸುತ್ತಿವೆ. ಭಾರತವು ತನ್ನ ಶೇ. 80ರಷ್ಟು ಇಂಧನ ಅಗತ್ಯವನ್ನು ಆಮದಿನ ಮೂಲಕ ಪೂರೈಸುತ್ತದೆ. ಅತ್ತ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿಯೂ ಕಚ್ಚಾ ತೈಲದ ಬೆಲೆ ಮೊದಲಿನ ಸ್ಥಿತಿಗೆ ಇಳಿಯುತ್ತಿಲ್ಲ, ಹಾಗಾಗಿ, ಬೆಲೆ ಏರಿಳಿತಗಳ ಈ ಕಣ್ಣಾಮುಚ್ಚಾಲೆ ಆಟ ನಡೆಯುತ್ತಲೇ ಇದೆ.

ತೈಲ ಬೆಲೆ ಇಳಿಕೆಯಾಗುವ ಸಾಧ್ಯತೆ: ಒಂದೂವರೆ ತಿಂಗಳಿಗೂ ಹೆಚ್ಚು ಕಾಲ ಪೆಟ್ರೋಲ್-ಡೀಸೆಲ್ ಬೆಲೆ ಒಂದೇ ಕಡೆ ಸ್ಥಿರವಾಗಿದೆ. ಇವುಗಳಲ್ಲಿ ಯಾವುದೇ ಬದಲಾವಣೆ ಕಂಡುಬಂದಿಲ್ಲ. ಅಬಕಾರಿ ಸುಂಕವನ್ನು ಸರ್ಕಾರವು ಮೇ 21ರಂದು ಕಡಿತಗೊಳಿಸಿದೆ. ಅನೇಕ ಮಾಧ್ಯಮ ವರದಿಗಳ ಪ್ರಕಾರ ಶೀಘ್ರದಲ್ಲೇ ತೈಲದ ಬೆಲೆಗಳು ಕಡಿಮೆಯಾಗುವ ನಿರೀಕ್ಷೆಯಿದೆ.

ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್
ಎಂಟು ಮಂದಿ ನಾಮಿನೇಟ್; ಈ ಸ್ಪರ್ಧಿ ಮನೆಯಿಂದ ಔಟ್ ಆಗೋದು ಪಕ್ಕಾ?
ಎಂಟು ಮಂದಿ ನಾಮಿನೇಟ್; ಈ ಸ್ಪರ್ಧಿ ಮನೆಯಿಂದ ಔಟ್ ಆಗೋದು ಪಕ್ಕಾ?