Petrol Price: ಭಾರತದ ವಿವಿಧ ನಗರಗಳ ಪೆಟ್ರೋಲ್, ಡೀಸೆಲ್ ಧಾರಣೆ ಹೀಗಿದೆ

ಹಲವು ತಿಂಗಳುಗಳಿಂದ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಬದಲಾವಣೆಯಾಗಿಲ್ಲ.

Petrol Price: ಭಾರತದ ವಿವಿಧ ನಗರಗಳ ಪೆಟ್ರೋಲ್, ಡೀಸೆಲ್ ಧಾರಣೆ ಹೀಗಿದೆ
ಪೆಟ್ರೋಲ್ ಬೆಲೆ (ಪ್ರಾತಿನಿಧಿಕ ಚಿತ್ರ)Image Credit source: Money Control
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Aug 23, 2022 | 8:21 AM

Fuel Price Today: ಸರ್ಕಾರಿ ತೈಲ ಕಂಪನಿಗಳು ಪ್ರತಿದಿನ ಮುಂಜಾನೆ ಪೆಟ್ರೋಲ್ ಹಾಗೂ ಡೀಸೆಲ್ ದರವನ್ನು ಅಪ್​ಡೇಟ್ ಮಾಡುತ್ತವೆ. ಕಳೆದ ಹಲವು ತಿಂಗಳುಗಳಿಂದ ಸಮಯಗಳಿಂದ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಬದಲಾವಣೆಯಾಗಿಲ್ಲ. ದೆಹಲಿಯಲ್ಲಿ ಒಂದು ಲೀಟರ್ ಪೆಟ್ರೋಲ್​ಗೆ 96.72 ರೂ., ಡೀಸೆಲ್​ ಬೆಲೆ 89.62 ರೂ.ನಷ್ಟಿದೆ. ದೇಶದ ಯಾವುದೇ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ವ್ಯತ್ಯಾಸವಾಗಿಲ್ಲ. ಮುಂಬೈನಲ್ಲಿ ಪೆಟ್ರೋಲ್​ ಬೆಲೆ 106.31 ರೂ, ಡೀಸೆಲ್ ಬೆಲೆ 94.27ರಷ್ಟಿದೆ. ಕೋಲ್ಕತ್ತಾದಲ್ಲಿ ಪೆಟ್ರೋಲ್ ಬೆಲೆ 106.03 ರೂ, ಡೀಸೆಲ್​ ಬೆಲೆ 92.76 ರೂ. ಇದೆ.

ಚೆನ್ನೈನಲ್ಲಿ ಪೆಟ್ರೋಲ್ ಬೆಲೆ 102.63 ರೂ.ನಷ್ಟಿದ್ದು ಸ್ಥಿರವಾಗಿದೆ, ಡೀಸೆಲ್ ಬೆಲೆ 94.24 ರೂ. ಇದೆ. ಕೇಂದ್ರ ಸರ್ಕಾರವು ಮೇ 21ರಂದು ಪೆಟ್ರೋಲ್ ಡೀಸೆಲ್ ಮೇಲೆ ಹಾಕುವ ಅಬಕಾರಿ ಸುಂಕವನ್ನು ಕಡಿಮೆ ಮಾಡಿವೆ. ಸರ್ಕಾರವು ಪೆಟ್ರೋಲ್​ ದರನ್ನು 8 ರೂ.ನಷ್ಟು ಇಳಿಕೆ ಮಾಡಿತ್ತು, ಹಾಗೂ ಡೀಸೆಲ್ ದರವನ್ನು 6 ರೂ. ಇಳಿಸಿತ್ತು. ಬೆಂಗಳೂರಿನಲ್ಲಿ ಪೆಟ್ರೋಲ್ 101.94 ರೂ. ಇದೆ, ಡೀಸೆಲ್ ದರ 87.87 ರೂ. ಇದೆ.

ನಿಮ್ಮ ನಗರದ ಪೆಟ್ರೋಲ್, ಡೀಸೆಲ್ ದರವನ್ನು ತಿಳಿಯುವುದು ಹೇಗೆ?

ನಿಮ್ಮ ನಗರದ ಪೆಟ್ರೋಲ್ ಮತ್ತು ಡೀಸೆಲ್ ದರಗಳನ್ನು ಪ್ರತಿದಿನ SMS ಮೂಲಕ ಪರಿಶೀಲಿಸಬಹುದು. ನೀವು ಇಂಡಿಯನ್ ಆಯಿಲ್‌ನ ಗ್ರಾಹಕರಾಗಿದ್ದರೆ, ನೀವು RSP ಡೀಲರ್ ಕೋಡ್ ಅನ್ನು ಬರೆಯುವ ಮೂಲಕ 9224992249 ಸಂಖ್ಯೆಗೆ SMS ಕಳುಹಿಸಬಹುದು ಮತ್ತು ನೀವು HPCL ಗ್ರಾಹಕರಾಗಿದ್ದರೆ ನೀವು HPPRICE ಡೀಲರ್ ಕೋಡ್ ಅನ್ನು ಟೈಪ್ ಮಾಡುವ ಮೂಲಕ 9222201122 ಸಂಖ್ಯೆಗೆ SMS ಕಳುಹಿಸಬಹುದು. BPCL ಗ್ರಾಹಕರು ಡೀಲರ್ ಕೋಡ್ ಅನ್ನು ನಮೂದಿಸುವ ಮೂಲಕ 9223112222 ಗೆ RSP ಅನ್ನು ಕಳುಹಿಸಬಹುದು.

ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಹೆಚ್ಚಾಗಿ ಡಾಲರ್ ದರದಿಂದ ಪ್ರಭಾವಿತವಾಗಿರುತ್ತದೆ. ಡಾಲರ್ ದುಬಾರಿಯಾಗಿದ್ದರೆ, ಕಚ್ಚಾ ತೈಲವನ್ನು ಖರೀದಿಸುವುದು ಹೆಚ್ಚು ದುಬಾರಿಯಾಗಬಹುದು ಮತ್ತು ಇದು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಹೆಚ್ಚಿಸುತ್ತದೆ. ಈ ಆಧಾರದಲ್ಲಿ ದೇಶದಲ್ಲಿ ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಪರಿಶೀಲಿಸಲಾಗುತ್ತದೆ ಮತ್ತು ಅದರ ನಂತರ ದರಗಳನ್ನು ಹೊಸದಾಗಿ ನಿಗದಿಪಡಿಸಲಾಗುತ್ತದೆ. ಈ ಕೆಲಸವನ್ನು ದೇಶದ ಪೆಟ್ರೋಲಿಯಂ ಕಂಪನಿಗಳು ಮಾಡುತ್ತವೆ.

ಪೆಟ್ರೋಲ್‌ನಲ್ಲಿ ತೆರಿಗೆಯ ಪಾಲು ಎಷ್ಟು

ಮಾರುಕಟ್ಟೆಯಲ್ಲಿ ಮಾರಾಟವಾಗುವ ಪೆಟ್ರೋಲ್ ಮತ್ತು ಡೀಸೆಲ್‌ಗೆ ಜನರು ಪಾವತಿಸುವ ಅರ್ಧಕ್ಕಿಂತ ಹೆಚ್ಚು ಹಣವು ಕೇಂದ್ರ ಸರ್ಕಾರ ಮತ್ತು ರಾಜ್ಯಗಳಿಂದ ತೆರಿಗೆ ರೂಪದಲ್ಲಿದೆ. ಜನರಿಂದ ಪೆಟ್ರೋಲ್ ಮೇಲೆ ಶೇ.55.5 ಮತ್ತು ಡೀಸೆಲ್ ಮೇಲೆ ಶೇ.47.3 ತೆರಿಗೆ ಸಂಗ್ರಹವಾಗಿದೆ ಎಂದು ಅಂದಾಜಿಸಲಾಗಿದೆ.

ದೇಶದ ಪೆಟ್ರೋಲ್ ಪಂಪ್ ಡೀಲರ್‌ಗಳು ಪ್ರತಿ ಲೀಟರ್‌ಗೆ ಪೆಟ್ರೋಲ್ ಮತ್ತು ಡೀಸೆಲ್‌ಗೆ ಕಮಿಷನ್ ವಿಧಿಸುತ್ತಾರೆ. ಇದರ ಬೆಲೆಯೂ ಪೆಟ್ರೋಲ್ ಮತ್ತು ಡೀಸೆಲ್ ದರಕ್ಕೆ ಸೇರುತ್ತದೆ, ಅದು ದುಬಾರಿಯಾಗುತ್ತದೆ.

Published On - 8:21 am, Tue, 23 August 22

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ