AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Price Today: ಬೆಂಗಳೂರು, ಮುಂಬೈ ಸೇರಿದಂತೆ ದೇಶದ ವಿವಿಧೆಡೆ ಇಂದಿನ ಪೆಟ್ರೋಲ್ ಬೆಲೆ ಹೀಗಿದೆ

ದೇಶದಲ್ಲೇ ಅತಿಹೆಚ್ಚಿನ ಬೆಲೆಗೆ ಮುಂಬೈನಲ್ಲಿ ಪೆಟ್ರೋಲ್ ಡೀಸೆಲ್ ಮಾರಾಟವಾಗುತ್ತಿದೆ.

Petrol Price Today: ಬೆಂಗಳೂರು, ಮುಂಬೈ ಸೇರಿದಂತೆ ದೇಶದ ವಿವಿಧೆಡೆ ಇಂದಿನ ಪೆಟ್ರೋಲ್ ಬೆಲೆ ಹೀಗಿದೆ
ಪೆಟ್ರೋಲ್ ಬೆಲೆImage Credit source: Money Control
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on:Jul 10, 2022 | 8:57 AM

Share

Fuel Price Today: ಪೆಟ್ರೋಲ್ (Petrol Price) ಮತ್ತು ಡೀಸೆಲ್ ಬೆಲೆಯಲ್ಲಿ (Diesel Price) ಏರಿಳಿತವಾಗುತ್ತಲೇ ಇರುತ್ತದೆ. ದೇಶದಲ್ಲೇ ಅತಿಹೆಚ್ಚಿನ ಬೆಲೆಗೆ ಮುಂಬೈನಲ್ಲಿ ಪೆಟ್ರೋಲ್ ಡೀಸೆಲ್ ಮಾರಾಟವಾಗುತ್ತಿದೆ. ಪ್ರಸ್ತುತ ಮುಂಬೈನಲ್ಲಿ ಪ್ರತಿ ಲೀಟರ್ ಪೆಟ್ರೋಲ್​ಗೆ ₹ 111.35 ಮತ್ತು ಡೀಸೆಲ್​ಗೆ ₹ 97.28 ದರವಿದೆ. ಉಕ್ರೇನ್ ಮೇಲಿನ ರಷ್ಯಾ ದಾಳಿಯ ಇಂಧನ ಬೆಲೆಯಲ್ಲಿ ನಿರಂತರ ಏರಿಕೆಯ ನಂತರ ಕಳೆದ ಕೆಲವು ದಿನಗಳಿಂದ ಜನರಿಗೆ ಸ್ವಲ್ಪ ನಿರಾಳವಾಗಿದೆ. ಕಳೆದ ಒಂದೂವರೆ ತಿಂಗಳಿನಿಂದ ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಸುಮಾರು ಒಂದೂವರೆ ತಿಂಗಳ ಹಿಂದೆ (ಮೇ 21) ಪೆಟ್ರೋಲ್-ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಸರ್ಕಾರ ಕಡಿತಗೊಳಿಸಿತ್ತು. ಇದಾದ ನಂತರ ತೈಲ ಬೆಲೆಯಲ್ಲಿ ಭಾರೀ ಕುಸಿತ ಕಂಡಿತ್ತು. ಈ ಹಿಂದೆ ಏಪ್ರಿಲ್ 6ರಂದು ಕೊನೆಯ ಬಾರಿಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಹೆಚ್ಚಿಸಲಾಗಿತ್ತು.

ನಾಲ್ಕು ಮಹಾನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಹೀಗಿವೆ. ದೆಹಲಿ ಪೆಟ್ರೋಲ್ ಬೆಲೆ 96.72 ರೂ. ಮತ್ತು ಡೀಸೆಲ್ ಲೀಟರ್‌ಗೆ 89.62 ರೂ. ಆಗಿದೆ. ಮುಂಬೈ ಪೆಟ್ರೋಲ್ ಬೆಲೆ 111.35 ರೂ. ಮತ್ತು ಡೀಸೆಲ್ ಲೀಟರ್‌ಗೆ 97.28 ರೂ. ಆಗಿದೆ. ಚೆನ್ನೈ ಪೆಟ್ರೋಲ್ ಬೆಲೆ 102.63 ರೂ. ಮತ್ತು ಡೀಸೆಲ್ ಲೀಟರ್‌ಗೆ 94.24 ರೂ. ಆಗಿದೆ. ಕೊಲ್ಕತ್ತಾ ಪೆಟ್ರೋಲ್ ಬೆಲೆ 106.03 ರೂ. ಮತ್ತು ಡೀಸೆಲ್ ಲೀಟರ್‌ಗೆ 92.76 ರೂ. ಆಗಿದೆ.

ನೊಯ್ಡಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ 96.79 ರೂ. ಮತ್ತು ಡೀಸೆಲ್ 89.96 ರೂ ಆಗಿದೆ. ಆಗಿದೆ. ಲಕ್ನೋದಲ್ಲಿ ಪ್ರತಿ ಲೀಟರ್ ಪೆಟ್ರೋಲ್ 96.57 ರೂ ಮತ್ತು ಡೀಸೆಲ್ 89.76 ರೂ ಆಗಿದೆ. ಪಾಟ್ನಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ 107.24 ರೂ ಮತ್ತು ಡೀಸೆಲ್ 94.04 ರೂ ಆಗಿದೆ. ಇಂದು ಕೂಡ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಸ್ಥಿರವಾಗಿವೆ. ಮೇ 21ರಂದು ಸರ್ಕಾರವು ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು ಲೀಟರ್‌ಗೆ 8 ರೂ. ಮತ್ತು ಡೀಸೆಲ್ ಮೇಲೆ 6 ರೂ. ಕಡಿತಗೊಳಿಸಿದಾಗಿನಿಂದ ಒಂದು ತಿಂಗಳಿನಿಂದ ಬೆಲೆಗಳು ಬದಲಾಗದೆ ಯಥಾಸ್ಥಿತಿಯಲ್ಲಿ ಉಳಿದಿವೆ.

ಮುಂಬೈನಲ್ಲಿ ಪೆಟ್ರೋಲ್ 111.35 ರೂ. ಮತ್ತು ಡೀಸೆಲ್ 97.28 ರೂ. ಆಗಿದೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಚೆನ್ನೈನಲ್ಲಿ ರೂ.102.63 ಮತ್ತು ರೂ.94.24 ಆಗಿದ್ದರೆ, ಕೋಲ್ಕತ್ತಾದಲ್ಲಿ ಪೆಟ್ರೋಲ್ ರೂ.106.03 ಮತ್ತು ಡೀಸೆಲ್ ರೂ.92.76 ಆಗಿದೆ. ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ 101.94 ರೂ. ಆಗಿದೆ. ಡೀಸೆಲ್ ಬೆಲೆ 87.89 ರೂ. ಆಗಿದೆ.

ತೈಲ ಮಾರುಕಟ್ಟೆ ಕಂಪನಿಗಳು ದೇಶದಲ್ಲಿ ಗ್ರಾಹಕರಿಗೆ ಅಬಕಾರಿ ಸುಂಕ ಕಡಿತವನ್ನು ವರ್ಗಾಯಿಸಿದರೂ ಸಹ ಪೆಟ್ರೋಲ್ ಮೇಲೆ 13.08 ರೂ ಮತ್ತು ಡೀಸೆಲ್ ಮೇಲೆ 24.09 ರೂ. ನಷ್ಟವನ್ನು ಅನುಭವಿಸುತ್ತಿವೆ. ಭಾರತವು ತನ್ನ ಶೇ. 80ರಷ್ಟು ಇಂಧನ ಅಗತ್ಯವನ್ನು ಆಮದಿನ ಮೂಲಕ ಪೂರೈಸುತ್ತದೆ. ಅತ್ತ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿಯೂ ಕಚ್ಚಾ ತೈಲದ ಬೆಲೆ ಮೊದಲಿನ ಸ್ಥಿತಿಗೆ ಇಳಿಯುತ್ತಿಲ್ಲ, ಹಾಗಾಗಿ, ಬೆಲೆ ಏರಿಳಿತಗಳ ಈ ಕಣ್ಣಾಮುಚ್ಚಾಲೆ ಆಟ ನಡೆಯುತ್ತಲೇ ಇದೆ.

Published On - 8:57 am, Sun, 10 July 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ