Petrol Price Today: ವೈಮಾನಿಕ ಇಂಧನದ ತೆರಿಗೆ ಇಳಿಸಿದ ಸರ್ಕಾರ, ದೇಶದ ವಿವಿಧೆಡೆ ಪೆಟ್ರೋಲ್-ಡೀಸೆಲ್ ಬೆಲೆ ಹೀಗಿದೆ

ಚಿಲ್ಲರೆ ಮಾರಾಟಗಾರರ ಬಳಿ ಪೆಟ್ರೋಲಿಯಂ ಉತ್ಪನ್ನಗಳ ಧಾರಣೆ ಇನ್ನೂ ಕಡಿಮೆಯಾಗಿಲ್ಲ.

Petrol Price Today: ವೈಮಾನಿಕ ಇಂಧನದ ತೆರಿಗೆ ಇಳಿಸಿದ ಸರ್ಕಾರ, ದೇಶದ ವಿವಿಧೆಡೆ ಪೆಟ್ರೋಲ್-ಡೀಸೆಲ್ ಬೆಲೆ ಹೀಗಿದೆ
ಸಂಗ್ರಹ ಚಿತ್ರImage Credit source: Zee News
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Jul 23, 2022 | 8:13 AM

Fuel Price Today: ಉಕ್ರೇನ್ ಮೇಲಿನ ರಷ್ಯಾ ದಾಳಿಯ ನಂತರ ಜಾಗತಿಕ ಮಾರುಕಟ್ಟೆಯಲ್ಲಿ ಸತತ ಏರಿಕೆ ಕಂಡಿದ್ದ ಕಚ್ಚಾತೈಲ ದರವು ಇದೀಗ ಇಳಿಕೆಯ ಲಕ್ಷಣಗಳನ್ನು ತೋರಿಸುತ್ತಿದೆ. ಕೇಂದ್ರ ಸರ್ಕಾರವು ಕಳೆದ ಬುಧವಾರ (ಜುಲೈ 20) ಆಮದು ಮಾಡಿಕೊಳ್ಳುವ ಒಂದು ಲೀಟರ್ ಪೆಟ್ರೋಲ್ ಮೇಲಿನ ತೆರಿಗೆಯನ್ನು ₹ 6ರಷ್ಟು ಕಡಿಮೆ ಮಾಡಿತ್ತು. ವೈಮಾನಿಕ ಕ್ಷೇತ್ರದಲ್ಲಿ ಬಳಸುವ ಇಂಧನದ ತೆರಿಗೆಯನ್ನೂ ₹ 2 ಕಡಿಮೆ ಮಾಡಿತ್ತು. ಡೀಸೆಲ್ ಮೇಲಿನ ತೆರಿಗೆಯಲ್ಲಿಯೂ ₹ 2ರ ವಿನಾಯ್ತಿ ಸಿಗುವ ಸಾಧ್ಯತೆಗಳ ಬಗ್ಗೆ ಸಚಿವಾಲಯ ಇಣುಕುನೋಟ ನೀಡಿತ್ತು. ಭಾರತದಲ್ಲಿಯೇ ಉತ್ಪಾದನೆಯಾಗುವ ಕಚ್ಚಾತೈಲದ ಮೇಲಿನ ತೆರಿಗೆಯನ್ನು ಬ್ಯಾರೆಲ್​ಗೆ ₹ 23,250ರಿಂದ ₹ 17,000ಕ್ಕೆ ಇಳಿಸಿತ್ತು. ಚಿಲ್ಲರೆ ಮಾರಾಟಗಾರರ ಬಳಿ ಪೆಟ್ರೋಲಿಯಂ ಉತ್ಪನ್ನಗಳ ಧಾರಣೆ ಇನ್ನೂ ಕಡಿಮೆಯಾಗಿಲ್ಲ.

ಕಳೆದ ವಾರವಷ್ಟೇ ಮಹಾರಾಷ್ಟ್ರ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಮೌಲ್ಯವರ್ಧಿಕ (VAT) ತೆರಿಗೆಯನ್ನು ಕ್ರಮವಾಗಿ ₹ 5 ಮತ್ತು ₹ 3ರಷ್ಟು ಕಡಿಮೆ ಮಾಡಿತ್ತು. ಈ ಬೆಳವಣಿಗೆ ಹೊರತುಪಡಿಸಿದರೆ ಕಳೆದ ಎರಡು ತಿಂಗಳುಗಳಿಂದ ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಧಾರಣೆಯಲ್ಲಿ ವ್ಯತ್ಯಯವಾಗಿಲ್ಲ. ಎರಡು ತಿಂಗಳ ಹಿಂದೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಪೆಟ್ರೋಲ್ ಮೇಲೆ ₹ 8 ಮತ್ತು ಡೀಸೆಲ್ ಮೇಲೆ ₹ 6ರ ಅಬಕಾರಿ ಸುಂಕ ವಿನಾಯ್ತಿ ಘೋಷಿಸಿದ್ದರು.

ಪ್ರಸ್ತುತ ಬೆಂಗಳೂರಿನಲ್ಲಿ ಒಂದು ಲೀಟರ್ ಪೆಟ್ರೋಲ್ ₹ 101.94, ಡೀಸೆಲ್ ₹ 87.89ಕ್ಕೆ ಮಾರಾಟವಾಗುತ್ತಿದೆ. ದೆಹಲಿಯಲ್ಲಿ ಒಂದು ಲೀಟರ್ ಪೆಟ್ರೋಲ್ ₹ 96.72, ಡೀಸೆಲ್ ₹ 89.62ಕ್ಕೆ ಮಾರಾಟವಾಗುತ್ತಿದೆ. ಉಳಿದಂತೆ ಮುಂಬೈನಲ್ಲಿ ₹ 106.31 (ಪೆಟ್ರೋಲ್), ₹ 94.27 (ಡೀಸೆಲ್ ದರವಿದೆ). ಚೆನ್ನೈನಲ್ಲಿ ಪೆಟ್ರೋಲ್ ಬೆಲೆ 102.63 ರೂ. ಮತ್ತು ಡೀಸೆಲ್ ಲೀಟರ್‌ಗೆ 94.24 ರೂ. ಆಗಿದೆ. ಕೊಲ್ಕತ್ತಾ ಪೆಟ್ರೋಲ್ ಬೆಲೆ 106.03 ರೂ. ಮತ್ತು ಡೀಸೆಲ್ ಲೀಟರ್‌ಗೆ 92.76 ರೂ. ಆಗಿದೆ.

ತೈಲ ಮಾರುಕಟ್ಟೆ ಕಂಪನಿಗಳು ದೇಶದಲ್ಲಿ ಗ್ರಾಹಕರಿಗೆ ಅಬಕಾರಿ ಸುಂಕ ಕಡಿತವನ್ನು ವರ್ಗಾಯಿಸಿದರೂ ಸಹ ಪೆಟ್ರೋಲ್ ಮೇಲೆ 13.08 ರೂ ಮತ್ತು ಡೀಸೆಲ್ ಮೇಲೆ 24.09 ರೂ. ನಷ್ಟವನ್ನು ಅನುಭವಿಸುತ್ತಿವೆ. ಭಾರತವು ತನ್ನ ಶೇ. 80ರಷ್ಟು ಇಂಧನ ಅಗತ್ಯವನ್ನು ಆಮದಿನ ಮೂಲಕ ಪೂರೈಸುತ್ತದೆ. ಅತ್ತ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿಯೂ ಕಚ್ಚಾ ತೈಲದ ಬೆಲೆ ಮೊದಲಿನ ಸ್ಥಿತಿಗೆ ಇಳಿಯುತ್ತಿಲ್ಲ, ಹಾಗಾಗಿ, ಬೆಲೆ ಏರಿಳಿತಗಳ ಈ ಕಣ್ಣಾಮುಚ್ಚಾಲೆ ಆಟ ನಡೆಯುತ್ತಲೇ ಇದೆ. 2 ತಿಂಗಳಿಗೂ ಹೆಚ್ಚು ಕಾಲ ಪೆಟ್ರೋಲ್-ಡೀಸೆಲ್ ಬೆಲೆ ಒಂದೇ ಕಡೆ ಸ್ಥಿರವಾಗಿದೆ. ಇವುಗಳಲ್ಲಿ ಯಾವುದೇ ಬದಲಾವಣೆ ಕಂಡುಬಂದಿಲ್ಲ. ಅಬಕಾರಿ ಸುಂಕವನ್ನು ಸರ್ಕಾರವು ಮೇ 21ರಂದು ಕಡಿತಗೊಳಿಸಿದೆ. ಅನೇಕ ಮಾಧ್ಯಮ ವರದಿಗಳ ಪ್ರಕಾರ ಶೀಘ್ರದಲ್ಲೇ ತೈಲದ ಬೆಲೆಗಳು ಕಡಿಮೆಯಾಗುವ ನಿರೀಕ್ಷೆಯಿದೆ.

ಪ್ರಮುಖ ನಗರಗಳಲ್ಲಿ ಪೆಟ್ರೋಲ್ ಧಾರಣೆ

ದೆಹಲಿ ಪೆಟ್ರೋಲ್ ರೂ 96.72 ಮತ್ತು ಡೀಸೆಲ್ ರೂ 89.62 ಪ್ರತಿ ಲೀಟರ್ – ಮುಂಬೈ ಪೆಟ್ರೋಲ್ ರೂ 106.31 ಮತ್ತು ಡೀಸೆಲ್ ರೂ 9427 ಪ್ರತಿ ಲೀಟರ್ – ಚೆನ್ನೈ ಪೆಟ್ರೋಲ್ ರೂ 102.63 ಮತ್ತು ಡೀಸೆಲ್ ರೂ 94.24 ಪ್ರತಿ ಲೀಟರ್ – ಕೋಲ್ಕತ್ತಾ ಪೆಟ್ರೋಲ್ ರೂ 106.03 ಮತ್ತು ಡೀಸೆಲ್ ಪ್ರತಿ ಲೀಟರ್‌ಗೆ ರೂ 92.76 – ನೋಯ್ಡಾದಲ್ಲಿ ಪೆಟ್ರೋಲ್ 96.57 ರೂ ಮತ್ತು ಡೀಸೆಲ್ ಲೀಟರ್‌ಗೆ 89.96 ರೂ – ಲಕ್ನೋದಲ್ಲಿ ಪೆಟ್ರೋಲ್ ರೂ 96.57 ಮತ್ತು ಡೀಸೆಲ್ ಲೀಟರ್‌ಗೆ ರೂ 89.76 – ಜೈಪುರದಲ್ಲಿ ಪೆಟ್ರೋಲ್ 108.48 ರೂ ಮತ್ತು ಡೀಸೆಲ್ ಲೀಟರ್‌ಗೆ 93.72 ರೂ – ತಿರುವನಂತಪುರದಲ್ಲಿ ಪೆಟ್ರೋಲ್ ರೂ 107.71 ಮತ್ತು ಡೀಸೆಲ್ ಪ್ರತಿ ಲೀಟರ್‌ಗೆ ರೂ 96.52 – ಪೋರ್ಟ್ ಬ್ಲೇರ್‌ನಲ್ಲಿ ಪೆಟ್ರೋಲ್ ರೂ 84.10 ಮತ್ತು ಡೀಸೆಲ್ ಲೀಟರ್‌ಗೆ 79.74 ರೂ – ಪಾಟ್ನಾದಲ್ಲಿ ಪೆಟ್ರೋಲ್ ರೂ 107.24 ಮತ್ತು ಡೀಸೆಲ್ ಲೀಟರ್‌ಗೆ 94.04 ರೂ. – ಗುರುಗ್ರಾಮ್‌ನಲ್ಲಿ ಪ್ರತಿ ಲೀಟರ್‌ಗೆ 97.18 ಮತ್ತು ಡೀಸೆಲ್ 90.05 ರೂ – ಬೆಂಗಳೂರಿನಲ್ಲಿ ಪೆಟ್ರೋಲ್ 101.94 ರೂ ಮತ್ತು ಡೀಸೆಲ್ ಲೀಟರ್‌ಗೆ 87.89 ರೂ. – ಭುವನೇಶ್ವರದಲ್ಲಿ ಪೆಟ್ರೋಲ್ ರೂ 103.19 ಮತ್ತು ಡೀಸೆಲ್ ಲೀಟರ್‌ಗೆ ರೂ 94.76 – ಚಂಡೀಗಢದಲ್ಲಿ ಪೆಟ್ರೋಲ್ 96.20 ರೂ. ಮತ್ತು ಡೀಸೆಲ್ ಲೀಟರ್‌ಗೆ 84.26 ರೂ – ಹೈದರಾಬಾದ್‌ನಲ್ಲಿ ಪೆಟ್ರೋಲ್ 109.66 ರೂ ಮತ್ತು ಡೀಸೆಲ್ ಲೀಟರ್‌ಗೆ 97.82 ರೂ. ಆಗಿದೆ.

Published On - 8:13 am, Sat, 23 July 22

ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ
ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್