AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Price Today: ಬೆಂಗಳೂರು, ಮುಂಬೈ ಸೇರಿದಂತೆ ದೇಶದ ವಿವಿಧೆಡೆ ಇಂದಿನ ಪೆಟ್ರೋಲ್ ಬೆಲೆ ಹೀಗಿದೆ

ಈ ಹಿಂದೆ ಏಪ್ರಿಲ್ 6ರಂದು ಕೊನೆಯ ಬಾರಿಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಹೆಚ್ಚಿಸಲಾಗಿತ್ತು.

Petrol Price Today: ಬೆಂಗಳೂರು, ಮುಂಬೈ ಸೇರಿದಂತೆ ದೇಶದ ವಿವಿಧೆಡೆ ಇಂದಿನ ಪೆಟ್ರೋಲ್ ಬೆಲೆ ಹೀಗಿದೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Jul 06, 2022 | 8:50 AM

Share

Fuel Price Today: ಪೆಟ್ರೋಲ್ (Petrol Price) ಮತ್ತು ಡೀಸೆಲ್ ಬೆಲೆಯಲ್ಲಿ (Diesel Price) ಏರಿಳಿತವಾಗುತ್ತಲೇ ಇರುತ್ತದೆ. ದೇಶದಲ್ಲೇ ಅತಿಹೆಚ್ಚಿನ ಬೆಲೆಗೆ ಮುಂಬೈನಲ್ಲಿ ಪೆಟ್ರೋಲ್ ಡೀಸೆಲ್ ಮಾರಾಟವಾಗುತ್ತಿದೆ. ಪ್ರಸ್ತುತ ಮುಂಬೈನಲ್ಲಿ ಪ್ರತಿ ಲೀಟರ್ ಪೆಟ್ರೋಲ್​ಗೆ ₹ 111.35 ಮತ್ತು ಡೀಸೆಲ್​ಗೆ ₹ 97.28 ದರವಿದೆ. ಉಕ್ರೇನ್ ಮೇಲಿನ ರಷ್ಯಾ ದಾಳಿಯ ಇಂಧನ ಬೆಲೆಯಲ್ಲಿ ನಿರಂತರ ಏರಿಕೆಯ ನಂತರ ಕಳೆದ ಕೆಲವು ದಿನಗಳಿಂದ ಜನರಿಗೆ ಸ್ವಲ್ಪ ನಿರಾಳವಾಗಿದೆ. ಕಳೆದ ಒಂದೂವರೆ ತಿಂಗಳಿನಿಂದ ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಸುಮಾರು ಒಂದೂವರೆ ತಿಂಗಳ ಹಿಂದೆ (ಮೇ 21) ಪೆಟ್ರೋಲ್-ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಸರ್ಕಾರ ಕಡಿತಗೊಳಿಸಿತ್ತು. ಇದಾದ ನಂತರ ತೈಲ ಬೆಲೆಯಲ್ಲಿ ಭಾರೀ ಕುಸಿತ ಕಂಡಿತ್ತು. ಈ ಹಿಂದೆ ಏಪ್ರಿಲ್ 6ರಂದು ಕೊನೆಯ ಬಾರಿಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಹೆಚ್ಚಿಸಲಾಗಿತ್ತು.

ನಾಲ್ಕು ಮಹಾನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಹೀಗಿವೆ. ದೆಹಲಿ ಪೆಟ್ರೋಲ್ ಬೆಲೆ 96.72 ರೂ. ಮತ್ತು ಡೀಸೆಲ್ ಲೀಟರ್‌ಗೆ 89.62 ರೂ. ಆಗಿದೆ. ಮುಂಬೈ ಪೆಟ್ರೋಲ್ ಬೆಲೆ 111.35 ರೂ. ಮತ್ತು ಡೀಸೆಲ್ ಲೀಟರ್‌ಗೆ 97.28 ರೂ. ಆಗಿದೆ. ಚೆನ್ನೈ ಪೆಟ್ರೋಲ್ ಬೆಲೆ 102.63 ರೂ. ಮತ್ತು ಡೀಸೆಲ್ ಲೀಟರ್‌ಗೆ 94.24 ರೂ. ಆಗಿದೆ. ಕೊಲ್ಕತ್ತಾ ಪೆಟ್ರೋಲ್ ಬೆಲೆ 106.03 ರೂ. ಮತ್ತು ಡೀಸೆಲ್ ಲೀಟರ್‌ಗೆ 92.76 ರೂ. ಆಗಿದೆ.

ನೊಯ್ಡಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ 96.79 ರೂ. ಮತ್ತು ಡೀಸೆಲ್ 89.96 ರೂ ಆಗಿದೆ. ಆಗಿದೆ. ಲಕ್ನೋದಲ್ಲಿ ಪ್ರತಿ ಲೀಟರ್ ಪೆಟ್ರೋಲ್ 96.57 ರೂ ಮತ್ತು ಡೀಸೆಲ್ 89.76 ರೂ ಆಗಿದೆ. ಪಾಟ್ನಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ 107.24 ರೂ ಮತ್ತು ಡೀಸೆಲ್ 94.04 ರೂ ಆಗಿದೆ. ಇಂದು ಕೂಡ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಸ್ಥಿರವಾಗಿವೆ. ಮೇ 21ರಂದು ಸರ್ಕಾರವು ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು ಲೀಟರ್‌ಗೆ 8 ರೂ. ಮತ್ತು ಡೀಸೆಲ್ ಮೇಲೆ 6 ರೂ. ಕಡಿತಗೊಳಿಸಿದಾಗಿನಿಂದ ಒಂದು ತಿಂಗಳಿನಿಂದ ಬೆಲೆಗಳು ಬದಲಾಗದೆ ಯಥಾಸ್ಥಿತಿಯಲ್ಲಿ ಉಳಿದಿವೆ.

ಮುಂಬೈನಲ್ಲಿ ಪೆಟ್ರೋಲ್ 111.35 ರೂ. ಮತ್ತು ಡೀಸೆಲ್ 97.28 ರೂ. ಆಗಿದೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಚೆನ್ನೈನಲ್ಲಿ ರೂ.102.63 ಮತ್ತು ರೂ.94.24 ಆಗಿದ್ದರೆ, ಕೋಲ್ಕತ್ತಾದಲ್ಲಿ ಪೆಟ್ರೋಲ್ ರೂ.106.03 ಮತ್ತು ಡೀಸೆಲ್ ರೂ.92.76 ಆಗಿದೆ. ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ 101.94 ರೂ. ಆಗಿದೆ. ಡೀಸೆಲ್ ಬೆಲೆ 87.89 ರೂ. ಆಗಿದೆ.

ತೈಲ ಮಾರುಕಟ್ಟೆ ಕಂಪನಿಗಳು ದೇಶದಲ್ಲಿ ಗ್ರಾಹಕರಿಗೆ ಅಬಕಾರಿ ಸುಂಕ ಕಡಿತವನ್ನು ವರ್ಗಾಯಿಸಿದರೂ ಸಹ ಪೆಟ್ರೋಲ್ ಮೇಲೆ 13.08 ರೂ ಮತ್ತು ಡೀಸೆಲ್ ಮೇಲೆ 24.09 ರೂ. ನಷ್ಟವನ್ನು ಅನುಭವಿಸುತ್ತಿವೆ. ಭಾರತವು ತನ್ನ ಶೇ. 80ರಷ್ಟು ಇಂಧನ ಅಗತ್ಯವನ್ನು ಆಮದಿನ ಮೂಲಕ ಪೂರೈಸುತ್ತದೆ. ಅತ್ತ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿಯೂ ಕಚ್ಚಾ ತೈಲದ ಬೆಲೆ ಮೊದಲಿನ ಸ್ಥಿತಿಗೆ ಇಳಿಯುತ್ತಿಲ್ಲ, ಹಾಗಾಗಿ, ಬೆಲೆ ಏರಿಳಿತಗಳ ಈ ಕಣ್ಣಾಮುಚ್ಚಾಲೆ ಆಟ ನಡೆಯುತ್ತಲೇ ಇದೆ.

Published On - 8:48 am, Wed, 6 July 22

Follow Us
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!
ಕೊಡಗು-ಕೇರಳ ಗಡಿಯಲ್ಲಿ ಲಂಚಾವತಾರ? ಚೆಕ್‌ಪೋಸ್ಟ್‌ ವಿಡಿಯೋ ವೈರಲ್
ಕೊಡಗು-ಕೇರಳ ಗಡಿಯಲ್ಲಿ ಲಂಚಾವತಾರ? ಚೆಕ್‌ಪೋಸ್ಟ್‌ ವಿಡಿಯೋ ವೈರಲ್
ಮನೆಯ ಮುಂದೆ ಪಾರ್ಕ್ ಮಾಡಿದ್ದ ಆಟೋದ ಚಕ್ರ ಕಳವು
ಮನೆಯ ಮುಂದೆ ಪಾರ್ಕ್ ಮಾಡಿದ್ದ ಆಟೋದ ಚಕ್ರ ಕಳವು