ಜುಲೈ 8ರಂದು ದೇಶದ ವಿವಿಧ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಹೇಗಿದೆ?

ಆರ್ಥಿಕ ಹಿಂಜರಿತದ ನಡುವೆ, ಕಚ್ಚಾ ತೈಲದ ಬೆಲೆಯಲ್ಲಿ ಇಳಿಕೆ ಕಂಡುಬರುತ್ತಿದೆ. ಆದರೆ ಕಚ್ಚಾ ತೈಲದ ಬೆಲೆ ಇಳಿಕೆಯ ನಂತರವೂ ದೇಶೀಯ ಮಾರುಕಟ್ಟೆಯಲ್ಲಿ ಪೆಟ್ರೋಲ್-ಡೀಸೆಲ್ ದರ ಸ್ಥಿರವಾಗಿದೆ.

ಜುಲೈ 8ರಂದು ದೇಶದ ವಿವಿಧ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಹೇಗಿದೆ?
Petrol And Diesel Price
TV9kannada Web Team

| Edited By: Nayana Rajeev

Jul 08, 2022 | 10:21 AM

ಆರ್ಥಿಕ ಹಿಂಜರಿತದ ನಡುವೆ, ಕಚ್ಚಾ ತೈಲದ ಬೆಲೆಯಲ್ಲಿ ಇಳಿಕೆ ಕಂಡುಬರುತ್ತಿದೆ. ಆದರೆ ಕಚ್ಚಾ ತೈಲದ ಬೆಲೆ ಇಳಿಕೆಯ ನಂತರವೂ ದೇಶೀಯ ಮಾರುಕಟ್ಟೆಯಲ್ಲಿ ಪೆಟ್ರೋಲ್-ಡೀಸೆಲ್ ದರ ಸ್ಥಿರವಾಗಿದೆ. ಒಂದು ದಿನ ಮುಂಚಿತವಾಗಿ ತೈಲ ಕಂಪನಿಗಳು ದೇಶೀಯ ಗ್ಯಾಸ್ ಸಿಲಿಂಡರ್‌ಗಳ ಬೆಲೆಯನ್ನು ಬುಧವಾರ ಹೆಚ್ಚಿಸಿವೆ. ಈಗ 14.2 ಕೆಜಿ ಗ್ಯಾಸ್ ಸಿಲಿಂಡರ್ ಬೆಲೆ 50 ರೂ. ಆಗಿದೆ.

ಆದರೆ, ಕಳೆದ ಒಂದೂವರೆ ತಿಂಗಳಿನಿಂದ ಪೆಟ್ರೋಲ್‌-ಡೀಸೆಲ್‌ ದರ ಒಂದೇ ಮಟ್ಟವನ್ನು ಕಾಯ್ದುಕೊಂಡಿದೆ. ಅಬಕಾರಿ ಸುಂಕವನ್ನು ಮೇ 21 ರಂದು ಸರ್ಕಾರ ಕಡಿತಗೊಳಿಸಿದೆ.

ಆ ಬಳಿಕ ದರದಲ್ಲಿ ಯಾವುದೇ ಬದಲಾವಣೆ ಆಗಿರಲಿಲ್ಲ. ಆದರೆ, ತೈಲ ಬೆಲೆ ಇಳಿಕೆಯಾಗುವ ಸಾಧ್ಯತೆಗಳು ವ್ಯಕ್ತವಾಗುತ್ತಿವೆ. ಗುರುವಾರ, ಪ್ರತಿ ಬ್ಯಾರೆಲ್‌ಗೆ 100 ಡಾಲರ್‌ಗಿಂತ ಕೆಳಗಿನ ಕಚ್ಚಾ ತೈಲ ಬೆಲೆಯಲ್ಲಿ ಸ್ವಲ್ಪ ಏರಿಕೆಯಾಗಿದೆ. WTI ಕಚ್ಚಾ ಬೆಲೆ ಪ್ರತಿ ಬ್ಯಾರೆಲ್‌ಗೆ 102.5 ರೂ. ತಲುಪಿದೆ.

ಅದೇ ಸಮಯದಲ್ಲಿ, ಬ್ರೆಂಟ್ ಕಚ್ಚಾ ತೈಲ ಪ್ರತಿ ಬ್ಯಾರೆಲ್ಗೆ 104.4 ರೂ.ತಲುಪಿತು. ಸರ್ಕಾರವು ಅಬಕಾರಿ ಸುಂಕವನ್ನು ಕಡಿತಗೊಳಿಸಿದ ನಂತರ ಕೆಲವು ರಾಜ್ಯಗಳು ವ್ಯಾಟ್ ಅನ್ನು ಕಡಿಮೆಗೊಳಿಸಿದವು. ಸರ್ಕಾರದ ಕ್ರಮದಿಂದಾಗಿ ಪೆಟ್ರೋಲ್ ಮೇಲೆ 8 ರೂ., ಡೀಸೆಲ್ ಮೇಲೆ 6 ರೂ. ಆಗಿದೆ.

– ಪೋರ್ಟ್ ಬ್ಲೇರ್‌ನಲ್ಲಿ ಪೆಟ್ರೋಲ್ ರೂ 84.10 ಮತ್ತು ಡೀಸೆಲ್ ಲೀಟರ್‌ಗೆ 79.74 ರೂ. ಇದೆ.

-ದೆಹಲಿ ಪೆಟ್ರೋಲ್ 96.72 ರೂ ಮತ್ತು ಡೀಸೆಲ್ ಲೀಟರ್‌ಗೆ 89.62 ರೂ ಇದೆ.

-ಮುಂಬೈ ಪೆಟ್ರೋಲ್ 111.35 ರೂ ಮತ್ತು ಡೀಸೆಲ್ ಲೀಟರ್‌ಗೆ 97.28 ರೂ ಇದೆ.

-ಚೆನ್ನೈ ಪೆಟ್ರೋಲ್ 102.63 ರೂ ಮತ್ತು ಡೀಸೆಲ್ ಲೀಟರ್‌ಗೆ 94.24 ರೂ ಇದೆ.

-ಕೋಲ್ಕತ್ತಾ ಪೆಟ್ರೋಲ್ 106.03 ರೂ ಮತ್ತು ಡೀಸೆಲ್ ಲೀಟರ್‌ಗೆ 92.76 ರೂ ಇದೆ.

– ನೋಯ್ಡಾದಲ್ಲಿ ಪೆಟ್ರೋಲ್ 96.57 ರೂ ಮತ್ತು ಡೀಸೆಲ್ ಲೀಟರ್‌ಗೆ 89.96 ರೂ

– ಲಕ್ನೋದಲ್ಲಿ ಪೆಟ್ರೋಲ್ 96.57 ರೂ ಮತ್ತು ಡೀಸೆಲ್ ಲೀಟರ್‌ಗೆ 89.76 ರೂ. ಇದೆ.

– ಜೈಪುರದಲ್ಲಿ ಪೆಟ್ರೋಲ್ 108.48 ರೂ ಮತ್ತು ಡೀಸೆಲ್ ಲೀಟರ್‌ಗೆ 93.72 ರೂ ಇದೆ.

-ತಿರುವನಂತಪುರದಲ್ಲಿ ಪೆಟ್ರೋಲ್ 107.71 ರೂ ಮತ್ತು ಡೀಸೆಲ್ ಲೀಟರ್‌ಗೆ 96.52 ರೂ. ಇದೆ.

-ಪಾಟ್ನಾದಲ್ಲಿ ಪೆಟ್ರೋಲ್ ರೂ 107.24 ಮತ್ತು ಡೀಸೆಲ್ ಲೀಟರ್‌ಗೆ ರೂ 94.04 ಇದೆ.

-ಗುರುಗ್ರಾಮದಲ್ಲಿ 97.18 ರೂ. ಮತ್ತು ಪ್ರತಿ ಲೀಟರ್ ಡೀಸೆಲ್‌ಗೆ 90.05 ರೂ

– ಬೆಂಗಳೂರಿನಲ್ಲಿ ಪೆಟ್ರೋಲ್ 101.94 ರೂ ಮತ್ತು ಡೀಸೆಲ್ ಲೀಟರ್‌ಗೆ 87.89 ರೂ.

– ಭುವನೇಶ್ವರದಲ್ಲಿ ಪೆಟ್ರೋಲ್ ರೂ 103.19 ಮತ್ತು ಡೀಸೆಲ್ ಲೀಟರ್‌ಗೆ 94.76 ರೂ. ಇದೆ.

-ಚಂಡೀಗಢದಲ್ಲಿ ಪೆಟ್ರೋಲ್ 96.20 ರೂ ಮತ್ತು ಡೀಸೆಲ್ ಲೀಟರ್‌ಗೆ 84.26 ರೂ ಇದೆ.

-ಹೈದರಾಬಾದ್‌ನಲ್ಲಿ ಪೆಟ್ರೋಲ್ 109.66 ರೂ ಮತ್ತು ಡೀಸೆಲ್ ಲೀಟರ್‌ಗೆ 97.82 ರೂ ಇದೆ.

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada