Petrol Price Today: ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಕುಸಿತ; ಭಾರತದಲ್ಲಿ ಇಂದಿನ ಇಂಧನ ಧಾರಣೆ ವಿವರ ಹೀಗಿದೆ

ಚೀನಾದಲ್ಲಿ ಕೊವಿಡ್ ಪಿಡುಗು ಮತ್ತೆ ಹೆಚ್ಚಾಗುತ್ತಿರುವುದು ಹಾಗೂ ಹಲವು ದೇಶಗಳಲ್ಲಿ ಹಣದುಬ್ಬರ ನಿಯಂತ್ರಣಕ್ಕಾಗಿ ಕೇಂದ್ರೀಯ ಬ್ಯಾಂಕ್​ಗಳು ಬಡ್ಡಿದರ ಹೆಚ್ಚಿಸಬಹುದು ಎಂಬ ಆತಂಕ ಹಣಕಾಸು ವಲಯದಲ್ಲಿ ಕಾಣಿಸಿಕೊಂಡಿದೆ.

Petrol Price Today: ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಕುಸಿತ; ಭಾರತದಲ್ಲಿ ಇಂದಿನ ಇಂಧನ ಧಾರಣೆ ವಿವರ ಹೀಗಿದೆ
ಪೆಟ್ರೋಲ್ ಬೆಲೆImage Credit source: Money Control
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Sep 09, 2022 | 9:54 AM

Petrol Price | Diesel Price Today: ಬೆಂಗಳೂರು: ಚೀನಾದಲ್ಲಿ ಕೊವಿಡ್ ಪಿಡುಗು ಮತ್ತೆ ಹೆಚ್ಚಾಗುತ್ತಿರುವುದು ಹಾಗೂ ಹಲವು ದೇಶಗಳಲ್ಲಿ ಹಣದುಬ್ಬರ ನಿಯಂತ್ರಣಕ್ಕಾಗಿ ಕೇಂದ್ರೀಯ ಬ್ಯಾಂಕ್​ಗಳು ಬಡ್ಡಿದರ ಹೆಚ್ಚಿಸಬಹುದು ಎಂಬ ವಿಶ್ಲೇಷಣೆಗಳು ಚಾಲ್ತಿಗೆ ಬಂದಿರುವ ಹಿನ್ನೆಲೆಯಲ್ಲಿ ಶುಕ್ರವಾರದ ಆರಂಭಿಕ ವಹಿವಾಟಿನಲ್ಲಿ ಕಚ್ಚಾತೈಲ ಬೆಲೆಯು ಶೇ 4ರಷ್ಟು ಕುಸಿತ ಕಂಡಿದೆ. ಕಳೆದ ಎರಡು ವಾರಗಳಿಂದ ಕಚ್ಚಾತೈಲ ಬೆಲೆಯು ಸತತ ಕುಸಿತ ಕಾಣುತ್ತಿದೆ. ಮುಂದಿನ ದಿನಗಳಲ್ಲಿ ಆರ್ಥಿಕ ಹಿಂಜರಿತ ಕಂಡುಬಂದರೆ ತೈಲೋತ್ಪನ್ನಗಳ ಬೇಡಿಕೆ ಕಡಿಮೆಯಾಗಬಹುದು ಎಂಬ ಆತಂಕ ಹೂಡಿಕೆದಾರರಲ್ಲಿ ಕಂಡುಬಂದಿದೆ. ಇದೇ ಕಾರಣಕ್ಕೆ ವಾಯಿದಾ ವಹಿವಾಟಿನಲ್ಲಿ ಕಚ್ಚಾತೈಲ ಖರೀದಿಗೆ ಹಿಂಜರಿಕೆ ಕಂಡುಬರುತ್ತಿದೆ.

ಕಚ್ಚಾತೈಲದ ಬೆಂಚ್​ಮಾರ್ಕ್​ಗಳಾದ ಬ್ರೆಂಟ್​ ಕ್ರೂಡ್​ ಫ್ಯೂಚರ್ಸ್ (Brent Crude Futures)​ 12 ಸೆಂಟ್ ಅಥವಾ ಶೇ 0.1 ಕುಸಿತ ಕಂಡಿದ್ದು, 89.03 ಅಮೆರಿಕ ಡಾಲರ್​ಗೆ ಒಂದು ಬ್ಯಾರೆಲ್​ನಂತೆ ವಹಿವಾಟು ನಡೆಸುತ್ತಿದೆ. ಅಮೆರಿಕದ ವೆಸ್ಟ್​ ಟೆಕ್ಸಾಸ್ ಇಂಟರ್​ಮಿಡಿಯೇಟ್ (West Texas Intermediate – WTI) ಕ್ರೂಡ್​ ಫ್ಯೂಚರ್ಸ್​ 19 ಸೆಂಟ್ಸ್​ ಕುಸಿದಿದೆ. ಕಳೆದ ಒಂದು ವಾರದ ಸರಾಸರಿ ವಹಿವಾಟು ಅವಧಿಯಲ್ಲಿ ಎರಡೂ ಬೆಂಚ್​ಮಾರ್ಕ್​ಗಳು ಸರಾಸರಿ ಸೇ 4ರಷ್ಟು ಕುಸಿದಿವೆ. ಕಳೆದ ಜನವರಿಯಿಂದೀಚೆಗೆ ಇದು ಕಚ್ಚಾತೈಲದ ಕನಿಷ್ಠ ಇಳಿಕೆ ಮಟ್ಟಕ್ಕೆ ಬಂದಿದೆ.

ಬೆಲೆ ಇಳಿಕೆಯ ಹಿನ್ನೆಲೆಯಲ್ಲಿ ತೈಲ ಉತ್ಪಾದಕ ದೇಶಗಳ ಒಕ್ಕೂಟವಾಗಿರುವ ಒಪೆಕ್ (Organization of the Petroleum Exporting Countries – OPEC) ಉತ್ಪಾದನೆ ಕಡಿತಗೊಳಿಸುವುದಾಗಿ ಘೋಷಿಸಿದೆ. ರಷ್ಯಾ ಸಹ ಹಲವು ದೇಶಗಳಿಗೆ ಕಚ್ಚಾತೈಲ ಸರಬರಾಜಿಗೆ ಹೊಸ ಷರತ್ತು ವಿಧಿಸಿದೆ. ಈ ನಡುವೆ ಅಮೆರಿದಲ್ಲಿಯೂ ಕಚ್ಚಾ ತೈಲ ಉತ್ಪಾದನೆ ಕಡಿಮೆಯಾಗಬಹುದು ಎಂದು ಮುನ್ಸೂಚನೆ ನೀಡಲಾಗಿದೆ.

ಭಾರತದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಸ್ಥಿರ

ಭಾರತದ ದೇಶೀಯ ಮಾರುಕಟ್ಟೆಯಲ್ಲಿ ಇಂಧನ ಬೆಲೆ ಕಳೆದ ಮೂರು ತಿಂಗಳಿನಿಂದ ಸ್ಥಿರತೆ ಕಾಯ್ದುಕೊಂಡಿದೆ. ಭಾರತದ ಪ್ರಮುಖ ನಗರಗಳಲ್ಲಿ ಇಂಧನ ಬೆಲೆ ವಿವರ ಹೀಗಿದೆ. ಉಕ್ರೇನ್ ಮೇಲಿನ ರಷ್ಯಾ ದಾಳಿಯ ನಂತರ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾತೈಲ ದರವು ಸತತ ಏರಿಕೆ ಕಂಡಿತ್ತು. ಕೇಂದ್ರ ಸರ್ಕಾರವು ಕಳೆದ ಜುಲೈ 20ರಂದು ಆಮದು ಮಾಡಿಕೊಳ್ಳುವ ಒಂದು ಲೀಟರ್ ಪೆಟ್ರೋಲ್ ಮೇಲಿನ ತೆರಿಗೆಯನ್ನು ₹ 6ರಷ್ಟು ಕಡಿಮೆ ಮಾಡಿತ್ತು. ವೈಮಾನಿಕ ಕ್ಷೇತ್ರದಲ್ಲಿ ಬಳಸುವ ಇಂಧನದ ತೆರಿಗೆಯನ್ನೂ ₹ 2 ಕಡಿಮೆ ಮಾಡಿತ್ತು. ಡೀಸೆಲ್ ಮೇಲಿನ ತೆರಿಗೆಯಲ್ಲಿಯೂ ₹ 2ರ ವಿನಾಯ್ತಿ ಸಿಗುವ ಸಾಧ್ಯತೆಗಳ ಬಗ್ಗೆ ಸಚಿವಾಲಯ ಇಣುಕುನೋಟ ನೀಡಿತ್ತು. ಭಾರತದಲ್ಲಿಯೇ ಉತ್ಪಾದನೆಯಾಗುವ ಕಚ್ಚಾತೈಲದ ಮೇಲಿನ ತೆರಿಗೆಯನ್ನು ಬ್ಯಾರೆಲ್​ಗೆ ₹ 23,250ರಿಂದ ₹ 17,000ಕ್ಕೆ ಇಳಿಸಿತ್ತು. ಚಿಲ್ಲರೆ ಮಾರಾಟಗಾರರ ಬಳಿ ಪೆಟ್ರೋಲಿಯಂ ಉತ್ಪನ್ನಗಳ ಧಾರಣೆ ಇನ್ನೂ ಕಡಿಮೆಯಾಗಿಲ್ಲ.

ಮಹಾರಾಷ್ಟ್ರ ಸರ್ಕಾರವು ಇತ್ತೀಚೆಗೆ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಮೌಲ್ಯವರ್ಧಿಕ (VAT) ತೆರಿಗೆಯನ್ನು ಕ್ರಮವಾಗಿ ₹ 5 ಮತ್ತು ₹ 3ರಷ್ಟು ಕಡಿಮೆ ಮಾಡಿತ್ತು. ಈ ಬೆಳವಣಿಗೆ ಹೊರತುಪಡಿಸಿದರೆ ಕಳೆದ ಮೂರು ತಿಂಗಳುಗಳಿಂದ ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಧಾರಣೆಯಲ್ಲಿ ವ್ಯತ್ಯಯವಾಗಿಲ್ಲ. ಮೂರು ತಿಂಗಳ ಹಿಂದೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಪೆಟ್ರೋಲ್ ಮೇಲೆ ₹ 8 ಮತ್ತು ಡೀಸೆಲ್ ಮೇಲೆ ₹ 6ರ ಅಬಕಾರಿ ಸುಂಕ ವಿನಾಯ್ತಿ ಘೋಷಿಸಿದ್ದರು.

ಪ್ರಸ್ತುತ ಬೆಂಗಳೂರಿನಲ್ಲಿ ಒಂದು ಲೀಟರ್ ಪೆಟ್ರೋಲ್ ₹ 101.94, ಡೀಸೆಲ್ ₹ 87.89ಕ್ಕೆ ಮಾರಾಟವಾಗುತ್ತಿದೆ. ದೆಹಲಿಯಲ್ಲಿ ಒಂದು ಲೀಟರ್ ಪೆಟ್ರೋಲ್ ₹ 96.72, ಡೀಸೆಲ್ ₹ 89.62ಕ್ಕೆ ಮಾರಾಟವಾಗುತ್ತಿದೆ. ಉಳಿದಂತೆ ಮುಂಬೈನಲ್ಲಿ ₹ 106.31 (ಪೆಟ್ರೋಲ್), ₹ 94.27 (ಡೀಸೆಲ್ ದರವಿದೆ). ಚೆನ್ನೈನಲ್ಲಿ ಪೆಟ್ರೋಲ್ ಬೆಲೆ 102.63 ರೂ. ಮತ್ತು ಡೀಸೆಲ್ ಲೀಟರ್‌ಗೆ 94.24 ರೂ. ಆಗಿದೆ. ಕೊಲ್ಕತ್ತಾ ಪೆಟ್ರೋಲ್ ಬೆಲೆ 106.03 ರೂ. ಮತ್ತು ಡೀಸೆಲ್ ಲೀಟರ್‌ಗೆ 92.76 ರೂ. ಆಗಿದೆ.

ತೈಲ ಮಾರುಕಟ್ಟೆ ಕಂಪನಿಗಳು ದೇಶದಲ್ಲಿ ಗ್ರಾಹಕರಿಗೆ ಅಬಕಾರಿ ಸುಂಕ ಕಡಿತವನ್ನು ವರ್ಗಾಯಿಸಿದರೂ ಸಹ ಪೆಟ್ರೋಲ್ ಮೇಲೆ 13.08 ರೂ ಮತ್ತು ಡೀಸೆಲ್ ಮೇಲೆ 24.09 ರೂ. ನಷ್ಟವನ್ನು ಅನುಭವಿಸುತ್ತಿವೆ. ಭಾರತವು ತನ್ನ ಶೇ. 80ರಷ್ಟು ಇಂಧನ ಅಗತ್ಯವನ್ನು ಆಮದಿನ ಮೂಲಕ ಪೂರೈಸುತ್ತದೆ. ಅತ್ತ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿಯೂ ಕಚ್ಚಾ ತೈಲದ ಬೆಲೆ ಮೊದಲಿನ ಸ್ಥಿತಿಗೆ ಇಳಿಯುತ್ತಿಲ್ಲ, ಹಾಗಾಗಿ, ಬೆಲೆ ಏರಿಳಿತಗಳ ಈ ಕಣ್ಣಾಮುಚ್ಚಾಲೆ ಆಟ ನಡೆಯುತ್ತಲೇ ಇದೆ. 2 ತಿಂಗಳಿಗೂ ಹೆಚ್ಚು ಕಾಲ ಪೆಟ್ರೋಲ್-ಡೀಸೆಲ್ ಬೆಲೆ ಒಂದೇ ಕಡೆ ಸ್ಥಿರವಾಗಿದೆ. ಇವುಗಳಲ್ಲಿ ಯಾವುದೇ ಬದಲಾವಣೆ ಕಂಡುಬಂದಿಲ್ಲ. ಅಬಕಾರಿ ಸುಂಕವನ್ನು ಸರ್ಕಾರವು ಮೇ 21ರಂದು ಕಡಿತಗೊಳಿಸಿದೆ. ಅನೇಕ ಮಾಧ್ಯಮ ವರದಿಗಳ ಪ್ರಕಾರ ಶೀಘ್ರದಲ್ಲೇ ತೈಲದ ಬೆಲೆಗಳು ಕಡಿಮೆಯಾಗುವ ನಿರೀಕ್ಷೆಯಿದೆ.

ಪ್ರಮುಖ ನಗರಗಳಲ್ಲಿ ಪೆಟ್ರೋಲ್ ಧಾರಣೆ

ದೆಹಲಿ ಪೆಟ್ರೋಲ್ ರೂ 96.72 ಮತ್ತು ಡೀಸೆಲ್ ರೂ 89.62 ಪ್ರತಿ ಲೀಟರ್ – ಮುಂಬೈ ಪೆಟ್ರೋಲ್ ರೂ 106.31 ಮತ್ತು ಡೀಸೆಲ್ ರೂ 9427 ಪ್ರತಿ ಲೀಟರ್ – ಚೆನ್ನೈ ಪೆಟ್ರೋಲ್ ರೂ 102.63 ಮತ್ತು ಡೀಸೆಲ್ ರೂ 94.24 ಪ್ರತಿ ಲೀಟರ್ – ಕೋಲ್ಕತ್ತಾ ಪೆಟ್ರೋಲ್ ರೂ 106.03 ಮತ್ತು ಡೀಸೆಲ್ ಪ್ರತಿ ಲೀಟರ್‌ಗೆ ರೂ 92.76 – ನೋಯ್ಡಾದಲ್ಲಿ ಪೆಟ್ರೋಲ್ 96.57 ರೂ ಮತ್ತು ಡೀಸೆಲ್ ಲೀಟರ್‌ಗೆ 89.96 ರೂ – ಲಕ್ನೋದಲ್ಲಿ ಪೆಟ್ರೋಲ್ ರೂ 96.57 ಮತ್ತು ಡೀಸೆಲ್ ಲೀಟರ್‌ಗೆ ರೂ 89.76 – ಜೈಪುರದಲ್ಲಿ ಪೆಟ್ರೋಲ್ 108.48 ರೂ ಮತ್ತು ಡೀಸೆಲ್ ಲೀಟರ್‌ಗೆ 93.72 ರೂ – ತಿರುವನಂತಪುರದಲ್ಲಿ ಪೆಟ್ರೋಲ್ ರೂ 107.71 ಮತ್ತು ಡೀಸೆಲ್ ಪ್ರತಿ ಲೀಟರ್‌ಗೆ ರೂ 96.52 – ಪೋರ್ಟ್ ಬ್ಲೇರ್‌ನಲ್ಲಿ ಪೆಟ್ರೋಲ್ ರೂ 84.10 ಮತ್ತು ಡೀಸೆಲ್ ಲೀಟರ್‌ಗೆ 79.74 ರೂ – ಪಾಟ್ನಾದಲ್ಲಿ ಪೆಟ್ರೋಲ್ ರೂ 107.24 ಮತ್ತು ಡೀಸೆಲ್ ಲೀಟರ್‌ಗೆ 94.04 ರೂ. – ಗುರುಗ್ರಾಮ್‌ನಲ್ಲಿ ಪ್ರತಿ ಲೀಟರ್‌ಗೆ 97.18 ಮತ್ತು ಡೀಸೆಲ್ 90.05 ರೂ – ಬೆಂಗಳೂರಿನಲ್ಲಿ ಪೆಟ್ರೋಲ್ 101.94 ರೂ ಮತ್ತು ಡೀಸೆಲ್ ಲೀಟರ್‌ಗೆ 87.89 ರೂ. – ಭುವನೇಶ್ವರದಲ್ಲಿ ಪೆಟ್ರೋಲ್ ರೂ 103.19 ಮತ್ತು ಡೀಸೆಲ್ ಲೀಟರ್‌ಗೆ ರೂ 94.76 – ಚಂಡೀಗಢದಲ್ಲಿ ಪೆಟ್ರೋಲ್ 96.20 ರೂ. ಮತ್ತು ಡೀಸೆಲ್ ಲೀಟರ್‌ಗೆ 84.26 ರೂ – ಹೈದರಾಬಾದ್‌ನಲ್ಲಿ ಪೆಟ್ರೋಲ್ 109.66 ರೂ ಮತ್ತು ಡೀಸೆಲ್ ಲೀಟರ್‌ಗೆ 97.82 ರೂ. ಆಗಿದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ

ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ. ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್​ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು