Petrol Price Today: ಮೆಟ್ರೋ ನಗರಗಳಲ್ಲಿ ಇಂದು ಕೂಡ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಯಥಾಸ್ಥಿತಿ
Fuel Price Today: ಒಂದು ತಿಂಗಳಿನಿಂದ ಮೆಟ್ರೋ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ 101.94 ರೂ. ಆಗಿದ್ದರೆ ಡೀಸೆಲ್ ಬೆಲೆ 87.89 ರೂ. ಆಗಿದೆ.
Fuel Price: ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾತೈಲದ ಬೆಲೆ ಏರಿಕೆಯಾಗುತ್ತಲೇ ಇದೆ. ಅದರ ಪರಿಣಾಮವಾಗಿ ಭಾರತದಲ್ಲಿ ಕೂಡ ಪೆಟ್ರೋಲ್ (Petrol Price), ಡೀಸೆಲ್ ಬೆಲೆ ಕಡಿಮೆಯಾಗುತ್ತಿಲ್ಲ. ದಿನವೂ ಕೆಲವು ಪೈಸೆಗಳ ಏರಿಳಿತ ಬಿಟ್ಟರೆ ಭಾರತದ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ (Diesel Price) ಹೆಚ್ಚೇನೂ ಬದಲಾವಣೆ ಆಗುತ್ತಿಲ್ಲ. ಸತತ 32ನೇ ದಿನವಾದ ಇಂದು (ಜೂನ್ 23) ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ಕೇಂದ್ರವು ಅಬಕಾರಿ ಸುಂಕವನ್ನು ರೂ. ಕಡಿತಗೊಳಿಸಿದ ನಂತರ ಮೇ 22ರಂದು ಕೊನೆಯ ಬಾರಿಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಕೆಯಾಗಿತ್ತು.
ಮೇ 21ರಂದು 1 ಲೀಟರ್ ಪೆಟ್ರೋಲ್‌ಗೆ 8 ರೂ. ಮತ್ತು ಡೀಸೆಲ್‌ಗೆ 6 ರೂ. ಸುಂಕವನ್ನು ಕಡಿಮೆ ಮಾಡಿತ್ತು. ರಾಜ್ಯ ಇಂಧನ ಚಿಲ್ಲರೆ ವ್ಯಾಪಾರಿಗಳ ಬೆಲೆ ಅಧಿಸೂಚನೆಯ ಪ್ರಕಾರ ದೆಹಲಿಯಲ್ಲಿ ಪೆಟ್ರೋಲ್ ದರವು ಈ ಹಿಂದೆ 105.41 ರೂ.ಗೆ ಹೋಲಿಸಿದರೆ ಈಗ ಲೀಟರ್‌ಗೆ 96.72 ರೂ. ಆಗಿದೆ. ಮತ್ತು ಡೀಸೆಲ್ ದರಗಳು ಲೀಟರ್‌ಗೆ 96.67 ರೂ.ನಿಂದ 89.62 ರೂ.ಗೆ ಇಳಿದಿದೆ.
ಒಂದು ತಿಂಗಳಿನಿಂದ ಮೆಟ್ರೋ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆ ಇಲ್ಲ. ದೆಹಲಿಯಲ್ಲಿ ಇಂದು 1 ಲೀಟರ್ ಪೆಟ್ರೋಲ್ ಬೆಲೆ 96.72 ರೂ. ಆಗಿದ್ದರೆ, ಡೀಸೆಲ್ ದರ ಲೀಟರ್‌ಗೆ 89.62 ರೂ. ಆಗಿದೆ.
ಇದನ್ನೂ ಓದಿ: ಪೆಟ್ರೋಲ್ ಹಾಕಿಸಿಕೊಂಡು ಹಣ ನೀಡದೆ ಬಂಕ್ ಸಿಬ್ಬಂದಿ ಮೇಲೆ ದಾಳಿ ನಡೆಸಿದ್ದ ಪುಂಡರ ಪೈಕಿ ಇಬ್ಬರ ಸೆರೆ
ಮುಂಬೈನಲ್ಲಿ ಪ್ರಸ್ತುತ ಪೆಟ್ರೋಲ್ ಬೆಲೆ ಪ್ರತಿ ಲೀಟರ್‌ಗೆ 111.35 ರೂ.ಗೆ ಮಾರಾಟವಾಗುತ್ತಿದ್ದು, ಡೀಸೆಲ್ ಬೆಲೆ 97.28 ರೂ.ಗೆ ಮಾರಾಟವಾಗುತ್ತಿದೆ. ಚೆನ್ನೈನಲ್ಲಿ ಈಗ ಪೆಟ್ರೋಲ್ ಬೆಲೆ 102.63 ರೂ. ಆಗಿದ್ದರೆ, ಡೀಸೆಲ್ ಬೆಲೆ 94.24 ರೂ. ಆಗಿದೆ. ಕೊಲ್ಕತ್ತಾದಲ್ಲಿ ಪೆಟ್ರೋಲ್ ಬೆಲೆ 106.03 ರೂ. ಮತ್ತು ಡೀಸೆಲ್ ಬೆಲೆ 92.76 ರೂ.ಗೆ ಮಾರಾಟವಾಗುತ್ತಿದೆ. ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ 101.94 ರೂ. ಆಗಿದ್ದರೆ ಡೀಸೆಲ್ ಬೆಲೆ 87.89 ರೂ. ಆಗಿದೆ.
ಎಲ್ಲಾ 4 ಮೆಟ್ರೋ ನಗರಗಳ ಪೈಕಿ ಮುಂಬೈನಲ್ಲಿ ಇಂಧನ ಬೆಲೆಗಳು ಅತ್ಯಧಿಕವಾಗಿದೆ. ಮೌಲ್ಯವರ್ಧಿತ ತೆರಿಗೆ (ವ್ಯಾಟ್) ಕಾರಣದಿಂದಾಗಿ ರಾಜ್ಯಗಳಾದ್ಯಂತ ದರಗಳು ಬದಲಾಗುತ್ತವೆ. ಇಂಡಿಯನ್ ಆಯಿಲ್ ಕಾರ್ಪೊರೇಷನ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂನಂತಹ ಸರ್ಕಾರಿ ಚಾಲಿತ ತೈಲ ಸಂಸ್ಕರಣಾಗಾರಗಳು ಅಂತಾರಾಷ್ಟ್ರೀಯ ಮಾರುಕಟ್ಟೆಗಳಲ್ಲಿನ ಕಚ್ಚಾ ತೈಲ ಬೆಲೆಗಳು ಮತ್ತು ರೂಪಾಯಿ-ಡಾಲರ್ ವಿನಿಮಯ ದರಗಳನ್ನು ಗಣನೆಗೆ ತೆಗೆದುಕೊಂಡು ಪ್ರತಿದಿನ ಇಂಧನ ದರಗಳನ್ನು ಪರಿಷ್ಕರಿಸುತ್ತವೆ.
ಭಾರತವು ತನ್ನ ಕಚ್ಚಾ ತೈಲದ ಶೇ. 85ರಷ್ಟನ್ನು ಆಮದು ಮಾಡಿಕೊಳ್ಳುತ್ತದೆ. ದೇಶೀಯ ಇಂಧನ ದರಗಳು ಅಂತಾರಾಷ್ಟ್ರೀಯ ದರಗಳಿಗೆ ಸಂಬಂಧಿಸಿವೆ.
ಇನ್ನಷ್ಟು ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 8:36 am, Thu, 23 June 22