Petrol Price Today: ಬೆಂಗಳೂರು, ಮುಂಬೈ ಸೇರಿ ವಿವಿಧೆಡೆ ಇಂದು ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟಿದೆ?
ಮೇ 21ರಂದು ಸರ್ಕಾರವು ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು ಲೀಟರ್‌ಗೆ 8 ರೂ. ಮತ್ತು ಡೀಸೆಲ್ ಮೇಲೆ 6 ರೂ. ಕಡಿತಗೊಳಿಸಿದಾಗಿನಿಂದ ಒಂದು ತಿಂಗಳಿನಿಂದ ಬೆಲೆಗಳು ಬದಲಾಗದೆ ಉಳಿದಿವೆ.
Fuel Price Today: ಪೆಟ್ರೋಲ್ (Petrol Rate) ಮತ್ತು ಡೀಸೆಲ್ ಬೆಲೆ (Diesel Price) ಕಳೆದ ನಾಲ್ಕೈದು ತಿಂಗಳಿನಿಂದ ಗಗನಕ್ಕೇರಿದೆ. ಆದರೆ, ಕಳೆದೊಂದು ತಿಂಗಳಿನಿಂದ ಈ ಬೆಲೆಯಲ್ಲಿ ಹೆಚ್ಚು ಬದಲಾವಣೆಯಾಗಿಲ್ಲ. ಇಂಧನ ಚಿಲ್ಲರೆ ವ್ಯಾಪಾರಿಗಳು ಹೊರಡಿಸಿದ ಬೆಲೆ ಅಧಿಸೂಚನೆಯ ಪ್ರಕಾರ, ಇಂದು (ಜುಲೈ 1) ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಸ್ಥಿರವಾಗಿವೆ. ಮೇ 21ರಂದು ಸರ್ಕಾರವು ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು ಲೀಟರ್‌ಗೆ 8 ರೂ. ಮತ್ತು ಡೀಸೆಲ್ ಮೇಲೆ 6 ರೂ. ಕಡಿತಗೊಳಿಸಿದಾಗಿನಿಂದ ಒಂದು ತಿಂಗಳಿನಿಂದ ಬೆಲೆಗಳು ಬದಲಾಗದೆ ಯಥಾಸ್ಥಿತಿಯಲ್ಲಿ ಉಳಿದಿವೆ.
ಸುಂಕ ಕಡಿತದಿಂದ ದೆಹಲಿಯಲ್ಲಿ ಪೆಟ್ರೋಲ್ ಬೆಲೆ 1 ಲೀಟರ್‌ಗೆ 9.5 ರೂ. ಮತ್ತು ಡೀಸೆಲ್‌ಗೆ 7 ರೂ. ಕಡಿಮೆಯಾಗಿದೆ. ಈ ಮೂಲಕ ದೆಹಲಿಯಲ್ಲಿ ಪೆಟ್ರೋಲ್ ಬೆಲೆ 96.72 ರೂ. ಮತ್ತು ಡೀಸೆಲ್ ಬೆಲೆ 89.62 ರೂ. ಆಗಿದೆ. ಮುಂಬೈನಲ್ಲಿ ಪ್ರತಿ ಲೀಟರ್ ಪೆಟ್ರೋಲ್ 111.35 ರೂ ಮತ್ತು ಡೀಸೆಲ್ 97.28 ರೂ.ಗೆ ಮಾರಾಟವಾಗುತ್ತಿದೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಚೆನ್ನೈನಲ್ಲಿ ಲೀಟರ್‌ಗೆ 102.63 ಮತ್ತು 94.24 ಆಗಿದ್ದರೆ, ಕೊಲ್ಕತ್ತಾದಲ್ಲಿ ಪೆಟ್ರೋಲ್ 106.03 ರೂ. ಮತ್ತು ಡೀಸೆಲ್ ಲೀಟರ್‌ಗೆ 92.76 ರೂ. ಆಗಿದೆ.
ಇದನ್ನೂ ಓದಿ: Petrol Price Today: ತಿಂಗಳಿನಿಂದ ಬದಲಾಗಿಲ್ಲ ಪೆಟ್ರೋಲ್, ಡೀಸೆಲ್ ಬೆಲೆ; ದೇಶದ ವಿವಿಧ ನಗರಗಳಲ್ಲಿ ಇಷ್ಟಿದೆ ನೋಡಿ ದರ
ಬೆಂಗಳೂರಿನಲ್ಲಿ ಇಂದು ಪೆಟ್ರೋಲ್ ಬೆಲೆ 101.94 ರೂ., ಡೀಸೆಲ್ ಬೆಲೆ 87.89 ರೂ. ಆಗಿದೆ. ತೈಲ ಮಾರುಕಟ್ಟೆ ಕಂಪನಿಗಳು ಪೆಟ್ರೋಲ್ ಮೇಲೆ ಪ್ರತಿ ಲೀಟರ್‌ಗೆ 13.08 ರೂ ಮತ್ತು ಡೀಸೆಲ್ ಮೇಲೆ 24.09 ರೂ. ನಷ್ಟವನ್ನು ಅನುಭವಿಸುತ್ತಿವೆ.
ಎಲ್ಲಾ 4 ಮೆಟ್ರೋ ನಗರಗಳ ಪೈಕಿ ಮುಂಬೈನಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಅತ್ಯಧಿಕವಾಗಿದೆ. ಮೌಲ್ಯವರ್ಧಿತ ತೆರಿಗೆ (ವ್ಯಾಟ್) ಕಾರಣದಿಂದಾಗಿ ರಾಜ್ಯಗಳಾದ್ಯಂತ ದರಗಳು ಬದಲಾಗುತ್ತವೆ. ಇಂಡಿಯನ್ ಆಯಿಲ್ ಕಾರ್ಪೊರೇಷನ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂನಂತಹ ಸರ್ಕಾರಿ ಚಾಲಿತ ತೈಲ ಸಂಸ್ಕರಣಾಗಾರಗಳು ಅಂತಾರಾಷ್ಟ್ರೀಯ ಮಾರುಕಟ್ಟೆಗಳಲ್ಲಿನ ಕಚ್ಚಾ ತೈಲ ಬೆಲೆಗಳು ಮತ್ತು ರೂಪಾಯಿ-ಡಾಲರ್ ವಿನಿಮಯ ದರಗಳನ್ನು ಗಣನೆಗೆ ತೆಗೆದುಕೊಂಡು ಪ್ರತಿದಿನ ಇಂಧನ ದರಗಳನ್ನು ಪರಿಷ್ಕರಿಸುತ್ತವೆ.