Petrol Price Today: ಏಪ್ರಿಲ್ 13ನೇ ತಾರೀಕು ವಿವಿಧ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ದರ!
Petrol Diesel Price Today: ವಿವಿಧ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ಎಂಬುದರ ವಿವರ ಇಲ್ಲಿದೆ. ಸತತ 14 ದಿನದಿಂದ ಇಂಧನ ದರ ಸ್ಥಿರತೆಯನ್ನು ಕಾಪಾಡಿಕೊಂಡು ಬಂದಿದೆ.
ಬೆಂಗಳೂರು: ದೇಶದ ತೈಲ ಮಾರುಕಟ್ಟೆ ಕಂಪನಿಗಳು ಇಂದು ಮಂಗಳವಾರ ಇಂಧನ ದರವನ್ನು ಬದಲಾಯಿಸಿಲ್ಲ. ಸತತವಾಗಿ 14ನೇ ದಿನವೂ ಪೆಟ್ರೋಲ್, ಡೀಸೆಲ್ ದರದಲ್ಲಿ ಯಾವುದೇ ಬದಲಾವಣೆ ಕಂಡು ಬಂದಿಲ್ಲ. ಹಾಗಾಗಿ ದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 90 ರೂಪಾಯಿ 56 ಪೈಸೆ ಇದೆ. ಹಾಗೂ ಪ್ರತಿ ಲೀಟರ್ ಡೀಸೆಲ್ ದರ 80 ರೂಪಾಯಿ 87 ಪೈಸೆ ಇದೆ.
ಅಂತೆಯೇ ವಿವಿಧ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಹೇಗಿದೆ ಎಂಬುದನ್ನು ಗಮನಿಸಿದಾಗ ಮುಂಬೈನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 96 ರೂಪಾಯಿ 98 ಪೈಸೆ ಇದೆ ಹಾಗೂ ಪ್ರತಿ ಲೀಟರ್ ಡೀಸೆಲ್ ದರ 87 ರೂಪಾಯಿ 96 ಪೈಸೆ ಇದೆ. ಚೆನ್ನೈನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 92 ರೂಪಾಯಿ 58 ಪೈಸೆ ಇದೆ. ಹಾಗೂ ಪ್ರತಿ ಲೀಟರ್ ಡೀಸೆಲ್ 85 ರೂಪಾಯಿ 88 ಪೈಸೆಗೆ ಮಾರಾಟವಾಗುತ್ತಿದೆ.
ಕೋಲ್ಕತ್ತಾದಲ್ಲಿ ಇಂಧನ ದರವನ್ನು ಪರಿಶೀಲಿಸಿದಾಗ ಪ್ರತಿ ಲೀಟರ್ ಪೆಟ್ರೋಲ್ ದರ 90 ರೂಪಾಯಿ 77 ಪೈಸೆ ಇದೆ. ಹಾಗೂ ಪ್ರತಿ ಲೀಟರ್ ಡೀಸೆಲ್ ದರ 85 ರೂಪಾಯಿ 75 ಪೈಸೆ ಇದೆ. ಇನ್ನು ನೋಯ್ಡಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 88 ರೂಪಾಯಿ 91 ಪೈಸೆ ಇದೆ. ಹಾಗೆಯೇ ಪ್ರತಿ ಲೀಟರ್ ಡೀಸೆಲ್ ದರ 81 ರೂಪಾಯಿ 33 ಪೈಸೆ ಇದೆ.
ವಿದೇಶಿ ಮಿನಿಮಯ ದರದ ಜೊತೆಗೆ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯನ್ನು ಆಧರಿಸಿ ಪೆಟ್ರೋಲ್, ಡೀಸೆಲ್ ದರವನ್ನು ನಿಗದಿ ಮಾಡಲಾಗುತ್ತದೆ. ಕಳೆದ ಮಾರ್ಚ್ ತಿಂಗಳಿನಲ್ಲಿ ಮೂರು ಬಾರಿ ಪೆಟ್ರೋಲ್, ಡೀಸೆಲ್ ದರ ಏರಿಕೆಯಾಗಿದೆ. ಕಳೆದ ಫೆಬ್ರವರಿ ತಿಂಗಳಿನಲ್ಲಿ ಪೆಟ್ರೋಲ್ ದರವನ್ನು 16 ಬಾರಿ ಹೆಚ್ಚಿಸಲಾಗಿದೆ. ಜೊತೆಗೆ ಕಳೆದ ಜನವರಿ ತಿಂಗಳಿನಲ್ಲಿ ಇಂಧನ ದರವನ್ನು 10 ಬಾರಿ ಹೆಚ್ಚಿಸಲಾಗಿತ್ತು. ಒಟ್ಟು ಇಲ್ಲಿಯವರೆಗೆ ಪೆಟ್ರೋಲ್, ಡೀಸೆಲ್ ದರವನ್ನು 26 ದಿನ ಹೆಚ್ಚಿಸಲಾಗಿದೆ.
ಇಂದು ಬೆಂಗಳೂರಿನಲ್ಲಿ ಪ್ರತಿ ಲೀಟರ್ ಡೀಸೆಲ್ ದರ 85.75 ರೂಪಾಯಿ ಇದೆ. ಹೈದರಾಬಾದ್ನಲ್ಲಿ ಪೆಟ್ರೋಲ್, ಡೀಸೆಲ್ ದರ ಗಮನಿಸಿದರೆ ಪ್ರತಿ ಲೀಟರ್ ಪೆಟ್ರೋಲ್ ದರ 94.16 ರೂಪಾಯಿ ಹಾಗೂ ಪ್ರತಿ ಲೀಟರ್ ಡೀಸೆಲ್ ದರ 88.20 ರೂಪಾಯಿ ಇದೆ.
ವಿವಿಧ ನಗರದ ಪೆಟ್ರೋಲ್ ದರ ಎಷ್ಟಿದೆ ಎಂಬ ಕುತೂಹಲವಿದ್ದರೆ ದರದ ಮಾಹಿತಿ ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ
https://tv9kannada.com/business/petrol-price-today.html
ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ