AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Price Today: ಸತತ 15 ದಿನಗಳಿಂದ ಇಂಧನ ದರ ಸ್ಥಿರ; ನಿಮ್ಮ ನಗರದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟಿದೆ?

Petrol Diesel Rate Today: ಮೇ ತಿಂಗಳಿನಿಂದ ಇಂಧನ ದರದಲ್ಲಿ ನಿರಂತರವಾಗಿ ಏರಿಕೆ ಕಂಡು ಬಂದಿದೆ. 42 ದಿನಗಳಲ್ಲಿ ಪೆಟ್ರೋಲ್ ಬೆಲೆಯನ್ನು 11.52 ರೂಪಾಯಿ ಏರಿಕೆ ಮಾಡಲಾಗಿದೆ. ಬಳಿಕ ಜುಲೈ 12ರಂದು ಡೀಸೆಲ್ ದರದಲ್ಲಿ ಅಲ್ಪವೇ ಇಳಿಕೆ ಕಂಡು ಬಂದಿತು.

Petrol Price Today: ಸತತ 15 ದಿನಗಳಿಂದ ಇಂಧನ ದರ ಸ್ಥಿರ; ನಿಮ್ಮ ನಗರದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟಿದೆ?
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Aug 02, 2021 | 9:57 AM

Share

Petrol Diesel Price Today | ದೆಹಲಿ: ಸತತ 15 ದಿನಗಳಿಂದ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆಗಳು ಕಂಡು ಬಂದಿಲ್ಲ. ಇಂದು ಸಹ (ಆಗಸ್ಟ್ 1, ಸೋಮವಾರ) ಇಂಧನ ದರದಲ್ಲಿ (Fuel Price) ಯಾವುದೇ ವ್ಯತ್ಯಾಸವಾಗಿಲ್ಲ. ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ಬೆಲೆ (Petrol Price) 101.84 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ (Diesel Price) 89.87 ರೂಪಾಯಿಗೆ ಮಾರಾಟವಾಗುತ್ತಿದೆ.

ಮೇ ತಿಂಗಳಿನಿಂದ ಇಂಧನ ದರದಲ್ಲಿ ನಿರಂತರವಾಗಿ ಏರಿಕೆ ಕಂಡು ಬಂದಿದೆ. 42 ದಿನಗಳಲ್ಲಿ ಪೆಟ್ರೋಲ್ ಬೆಲೆಯನ್ನು 11.52 ರೂಪಾಯಿ ಏರಿಕೆ ಮಾಡಲಾಗಿದೆ. ಬಳಿಕ ಜುಲೈ 12ರಂದು ಡೀಸೆಲ್ ದರದಲ್ಲಿ ಅಲ್ಪವೇ ಇಳಿಕೆ ಕಂಡು ಬಂದಿತು. ಆ ಬಳಿಕ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಬದಲಾಗದೇ ಸ್ಥಿರವಾಗಿಯೇ ಉಳಿದಿದೆ. ಎಲ್ಲಾ ಮಹಾನಗರಗಳಲ್ಲಿಯೂ ಸಹ 15 ದಿನಗಳಿಂದ ಇಂಧನ ದರ ಸ್ಥಿರತವಾಗಿದೆ.

ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 101.84 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 89.87 ರೂಪಾಯಿ ಇದೆ. ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 107.83 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 97.45 ರೂಪಾಯಿ ಇದೆ.

ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 101.49 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.39 ರೂಪಾಯಿ ಇದೆ. ಭೋಪಾಲ್​ನಲ್ಲಿ ಲೀಟರ್ ಪೆಟ್ರೋಲ್ ದರ 110.08 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 98.67 ರೂಪಾಯಿ ಇದೆ.

ರಾಂಚಿಯಲ್ಲಿ ಲೀಟರ್ ಪೆಟ್ರೋಲ್ ಬೆಲೆ 96.68 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.84 ರೂಪಾಯಿ ಇದೆ. ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 105.25 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 95.26 ರೂಪಾಯಿ ಇದೆ.

ಪಾಟ್ನಾದಲ್ಲಿ ಲೀಟರ್ ಪೆಟ್ರೋಲ್ ದರ 104.25 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 95.57 ರೂಪಾಯಿ ಇದೆ. ಅದೇ ರೀತಿ ಲಕ್ನೋದಲ್ಲಿಯೂ ಸಹ ಲೀಟರ್ ಪೆಟ್ರೋಲ್ ದರ 98.92 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 90.26 ರೂಪಾಯಿ ಇದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುವ ಕೆಲಸವನ್ನು ಮಾಡುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ.

ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ಇದನ್ನೂ ಓದಿ: ವಿವಿಧ ನಗರದಲ್ಲಿ ಪೆಟ್ರೋಲ್​ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್​ಅನ್ನು ಕ್ಲಿಕ್ ಮಾಡಿ: https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್​ಅನ್ನು ಕ್ಲಿಕ್ ಮಾಡಿ: https://tv9kannada.com/business/diesel-price-today.html

Published On - 8:12 am, Mon, 2 August 21

Follow Us
TV9 Web
TV9 Web

TV9 Kannada

Read More
ಬಹಳ ದಿನಗಳ ಬಳಿಕ ಸುತ್ತೂರು ಶಕ್ತಿಪೀಠಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ
ಬಹಳ ದಿನಗಳ ಬಳಿಕ ಸುತ್ತೂರು ಶಕ್ತಿಪೀಠಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ
ಮೆಕ್ಕಾದಲ್ಲಿ ಸಿಲುಕಿದ 4,000 ಕನ್ನಡಿಗರು: ನೆರವಿಗೆ ಧಾವಿಸುವಂತೆ CMಗೆ ಮನವಿ
ಮೆಕ್ಕಾದಲ್ಲಿ ಸಿಲುಕಿದ 4,000 ಕನ್ನಡಿಗರು: ನೆರವಿಗೆ ಧಾವಿಸುವಂತೆ CMಗೆ ಮನವಿ
ತಾಂಡವ್ ರಾಮ್, ಗಗನ್ ಚಿನ್ನಪ್ಪ ಸ್ನೇಹದ ನಡುವೆ ಬಂದ ಸೌಂದರ್ಯಾ ಶೆಟ್ಟಿ
ತಾಂಡವ್ ರಾಮ್, ಗಗನ್ ಚಿನ್ನಪ್ಪ ಸ್ನೇಹದ ನಡುವೆ ಬಂದ ಸೌಂದರ್ಯಾ ಶೆಟ್ಟಿ
ನಿರುದ್ಯೋಗಿ ತರ ವರ್ತಿಸಬೇಡಿ: ಪ್ರಿಯಾಂಕ್ ಖರ್ಗೆಗೆ ಜೋಶಿ ಟಾಂಗ್
ನಿರುದ್ಯೋಗಿ ತರ ವರ್ತಿಸಬೇಡಿ: ಪ್ರಿಯಾಂಕ್ ಖರ್ಗೆಗೆ ಜೋಶಿ ಟಾಂಗ್
ಶಿಕ್ಷಕರ ಕ್ಷೇತ್ರದ ಚುನಾವಣೆ ವೇಳೆ ಗಲಾಟೆ :ಮುನಿರತ್ನ ಮೇಲೆ ಹಲ್ಲೆಗೆ ಯತ್ನ!
ಶಿಕ್ಷಕರ ಕ್ಷೇತ್ರದ ಚುನಾವಣೆ ವೇಳೆ ಗಲಾಟೆ :ಮುನಿರತ್ನ ಮೇಲೆ ಹಲ್ಲೆಗೆ ಯತ್ನ!
'ಆತನ ಬಳಿ ಒಟ್ಟು 12 ಸ್ಟಿಂಗ್ ವಿಡಿಯೋ ಇದೆಯಂತೆ': ಹೆಚ್​​.ಡಿ.ಕುಮಾರಸ್ವಾಮಿ
'ಆತನ ಬಳಿ ಒಟ್ಟು 12 ಸ್ಟಿಂಗ್ ವಿಡಿಯೋ ಇದೆಯಂತೆ': ಹೆಚ್​​.ಡಿ.ಕುಮಾರಸ್ವಾಮಿ
ಸಿದ್ದರಾಮಯ್ಯ ನಮ್ ಜೊತೆ ಇದ್ದವರೇ, ಭೇಟಿಯಾದ್ರೆ ತಪ್ಪೇನು?
ಸಿದ್ದರಾಮಯ್ಯ ನಮ್ ಜೊತೆ ಇದ್ದವರೇ, ಭೇಟಿಯಾದ್ರೆ ತಪ್ಪೇನು?
ಗದಗದಲ್ಲಿ ಎಂಎಲ್‌ಸಿ ಎಲೆಕ್ಷನ್ ಹೈಡ್ರಾಮಾ
ಗದಗದಲ್ಲಿ ಎಂಎಲ್‌ಸಿ ಎಲೆಕ್ಷನ್ ಹೈಡ್ರಾಮಾ
ಡಿಕೆಶಿಯನ್ನು ತಾನು ಸಿಎಂ ಎಂದು ಒಪ್ಪಲ್ಲ ಎಂದ ಕುಮಾರಸ್ವಾಮಿ: ಕಾರಣ ಇಲ್ಲಿದೆ
ಡಿಕೆಶಿಯನ್ನು ತಾನು ಸಿಎಂ ಎಂದು ಒಪ್ಪಲ್ಲ ಎಂದ ಕುಮಾರಸ್ವಾಮಿ: ಕಾರಣ ಇಲ್ಲಿದೆ
ಮಾಂಜಾ ದಾರ ಬಳಸದಂತೆ ಬೆಳಗಾವಿ ಎಸ್​ಪಿ ರಾಮರಾಜನ್ ಖಡಕ್ ಎಚ್ಚರಿಕೆ
ಮಾಂಜಾ ದಾರ ಬಳಸದಂತೆ ಬೆಳಗಾವಿ ಎಸ್​ಪಿ ರಾಮರಾಜನ್ ಖಡಕ್ ಎಚ್ಚರಿಕೆ