Petrol Price Today: ಸತತ 19 ದಿನಗಳಿಂದ ಪೆಟ್ರೋಲ್​, ಡೀಸೆಲ್​ ಬೆಲೆಯಲ್ಲಿ ಏರಿಳಿತಗಳಿಲ್ಲ!

Petrol Price Today: ಸತತ 19 ದಿನಗಳಿಂದ ಪೆಟ್ರೋಲ್​, ಡೀಸೆಲ್​ ಬೆಲೆಯಲ್ಲಿ ಏರಿಳಿತಗಳಿಲ್ಲ!
ಪ್ರಾತಿನಿಧಿಕ ಚಿತ್ರ

Petrol Rate Today: ಪ್ರಮುಖ ಎಲ್ಲಾ ಮಹಾರಗಳರಗಳಲ್ಲಿಯೂ ಕೂಡಾ ಇಂಧನ ದರ ಸ್ಥಿರವಾಗಿಯೇ ಉಳಿದಿದೆ. ಆ ಮೂಲಕ ದೆಹಲಿಯಲ್ಲಿ ಲೀಟರ್ ಪೆಟ್ರೋಲ್​ಗೆ 101.84 ರೂಪಾಯಿ ಹಾಗೂ ಲೀಟರ್ ಡೀಸೆಲ್​ಗೆ 89.87 ರೂಪಾಯಿ ಕೊಟ್ಟು ಗ್ರಾಹಕರು ಕೊಳ್ಳುತ್ತಿದ್ದಾರೆ.

TV9kannada Web Team

| Edited By: shruti hegde

Aug 05, 2021 | 8:28 AM

Petrol diesel Price Today | ದೆಹಲಿ: ಕಳೆದ ಎರಡು ವಾರಗಳಿಂದಲೂ ಸಹ ಇಂಧನ ದರ ಸ್ಥಿರತೆಯನ್ನು ಕಾಯ್ದುಕೊಂಡಿದೆ. ಸತತವಾಗಿ 19 ದಿನಗಳಿಂದ ಪೆಟ್ರೋಲ್ (Petrol Price), ಡೀಸೆಲ್ ದರ (Diesel Price) ತಟಸ್ಥವಾಗಿದೆ. ಇಂದು ಸಹ (ಆಗಸ್ಟ್ 5, ಗುರುವಾರ) ತೈಲ ದರದಲ್ಲಿ ಯಾವುದೇ ಬದಲಾವಣೆಯಿಲ್ಲ. ಪ್ರಮುಖ ಎಲ್ಲಾ ಮಹಾನಗರಗಳಲ್ಲಿಯೂ ಕೂಡಾ ಇಂಧನ ದರ (Fuel Price) ಸ್ಥಿರವಾಗಿಯೇ ಉಳಿದಿದೆ. ಆ ಮೂಲಕ ದೆಹಲಿಯಲ್ಲಿ ಲೀಟರ್ ಪೆಟ್ರೋಲ್​ಗೆ 101.84 ರೂಪಾಯಿ ಹಾಗೂ ಲೀಟರ್ ಡೀಸೆಲ್​ಗೆ 89.87 ರೂಪಾಯಿ ಕೊಟ್ಟು ಗ್ರಾಹಕರು ಕೊಳ್ಳುತ್ತಿದ್ದಾರೆ.

ಪ್ರಮುಖ ಮೆಟ್ರೋ ನಗರಗಳಿಗೆ ಹೋಲಿಸಿದರೆ ಮುಂಬೈನಲ್ಲಿ ಇಂಧನ ದರ ಗರಿಷ್ಠ ಮಟ್ಟದಲ್ಲಿದಲ್ಲಿದೆ. ಲೀಟರ್ ಪೆಟ್ರೋಲ್​ಗೆ 107.83 ರೂಪಾಯಿ ಹಾಗೂ ಲೀಟರ್ ಡೀಸೆಲ್ ಬೆಲೆ 97.45 ರೂಪಾಯಿ ಇದೆ. ಅದೇ ರೀತಿ ಚೆನ್ನೈನಲ್ಲಿಯೂ ಸಹ ಇಂಧನ ದರದಲ್ಲಿ ವ್ಯತ್ಯಾಸ ಕಂಡು ಬಂದಿಲ್ಲ. ಲೀಟರ್ ಪೆಟ್ರೋಲ್ ಬೆಲೆ 102.49 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.45 ರೂಪಾಯಿ ಇದೆ. ಇನ್ನು ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ದರ 102.08 ರೂಪಾಯಿ ಹಾಗೂ ಲೀಟರ್ ಡೀಸೆಲ್ ಬೆಲೆ 93.02 ರೂಪಾಯಿ ಇದೆ.

ಭೋಪಾಲ್​ನಲ್ಲಿ ಲೀಟರ್ ಪೆಟ್ರೋಲ್ ದರ 110.20 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 98.67 ರೂಪಾಯಿ ಇದೆ. ಮೇ ತಿಂಗಳಿನಲ್ಲಿ 4ನೇ ತಾರೀಕಿನಿಂದ ಪೆಟ್ರೋಲ್ ದರ ಏರಿಕೆಯತ್ತ ಸಾಗಲು ಪ್ರಾರಂಭಿಸಿತು. ಆ ಬಳಿಕ ಇಲ್ಲಿಯವರೆಗಿನ ಹೆಚ್ಚಳದಿಂದ ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 105.25 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 95.26 ರೂಪಾಯಿ ಇದೆ. ಜುಲೈ ತಿಂಗಳಿನಲ್ಲಿ 2 ಬಾರಿ ಡೀಸೆಲ್​ ದರವನ್ನು ಕಡಿತಗೊಳಿಸಲಾಗಿದೆ. ಆ ನಂತರದಲ್ಲಿ ಪೆಟ್ರೋಲ್​, ಡೀಸೆಲ್​ ದರ ಸ್ಥಿರವಾಗಿಯೇ ಉಳಿದಿದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುವ ಕೆಲಸವನ್ನು ಮಾಡುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ.

ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ಇದನ್ನೂ ಓದಿ: ವಿವಿಧ ನಗರದಲ್ಲಿ ಪೆಟ್ರೋಲ್​ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್​ಅನ್ನು ಕ್ಲಿಕ್ ಮಾಡಿ: https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್​ಅನ್ನು ಕ್ಲಿಕ್ ಮಾಡಿ: https://tv9kannada.com/business/diesel-price-today.html

Follow us on

Related Stories

Most Read Stories

Click on your DTH Provider to Add TV9 Kannada