AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Price Today: ಸತತ 9 ದಿನಗಳ ಕಾಲ ಇಂಧನ ದರ ಸ್ಥಿರ; ಇನ್ನೂ ಇಳಿಯದ ಪೆಟ್ರೋಲ್​, ಡೀಸೆಲ್ ಬೆಲೆ

Petrol Rate Today: ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ಬೆಲೆ 101.84 ರೂಪಾಯಿ ಇದೆ. ಲೀಟರ್ ಡೀಸೆಲ್ ದರ 89.87 ರೂಪಾಯಿ ಇದೆ. ಜುಲೈ ತಿಂಗಳಲ್ಲಿ ಎರಡು ಬಾರಿ ಡೀಸೆಲ್ ದರ ಇಳಿಕೆ ಕಂಡಿದೆ. ಆ ಬಳಿಕ ದರದಲ್ಲಿ ಯಾವುದೇ ಕಡಿತ ಕಂಡು ಬಂದಿಲ್ಲ.

Petrol Price Today: ಸತತ 9 ದಿನಗಳ ಕಾಲ ಇಂಧನ ದರ ಸ್ಥಿರ; ಇನ್ನೂ ಇಳಿಯದ ಪೆಟ್ರೋಲ್​, ಡೀಸೆಲ್ ಬೆಲೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jul 26, 2021 | 8:17 AM

Share

Petrol Diesel Price Today | ದೆಹಲಿ: ಸತತ ಒಂಭತ್ತು ದಿನಗಳ ಕಾಲ ಪೆಟ್ರೋಲ್, ಡೀಸೆಲ್ ದರದಲ್ಲಿ ಯಾವುದೇ ಬದಲಾವಣೆಗಳು ಕಂಡು ಬಂದಿಲ್ಲ. ಏರುತ್ತಲೇ ಇರುವ ಪೆಟ್ರೋಲ್(Petrol Price), ಡೀಸೆಲ್ ದರವನ್ನು ಗಮನಿಸುತ್ತಿದ್ದ ವಾಹನ ಸವಾರರಿಗೆ ಕೊಂಚ ನಿರಾಳ ಅನಿಸಿದರೂ ಸಹ ದರ ಇಳಿಕೆಯತ್ತ ಸಾಗುತ್ತಿಲ್ಲ ಎಂಬುದೇ ಅವರ ಪ್ರಶ್ನೆ. ಇಂದು (ಜುಲೈ 26, ಸೋಮವಾರ) ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ(Diesel Rate) ಯಾವುದೇ ಬದಲಾವಣೆ ಕಂಡು ಬಂದಿಲ್ಲ. ಎಲ್ಲಾ ಮಹಾ ನಗರಗಳಲ್ಲಿಯೂ ಸಹ ಕೊನೆಯ ಏರಿಕೆಯ ನಂತರದ ಇಂಧನ ಬೆಲೆ(Fuel Price) 9 ದಿನಗಳ ಕಾಲ ಸ್ಥಿರವಾಗಿ ಉಳಿದಿದೆ.

ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ಬೆಲೆ 101.84 ರೂಪಾಯಿ ಇದೆ. ಲೀಟರ್ ಡೀಸೆಲ್ ದರ 89.87 ರೂಪಾಯಿ ಇದೆ. ಜುಲೈ ತಿಂಗಳಲ್ಲಿ ಎರಡು ಬಾರಿ ಡೀಸೆಲ್ ದರ ಇಳಿಕೆ ಕಂಡಿದೆ. ಆ ಬಳಿಕ ದರದಲ್ಲಿ ಯಾವುದೇ ಕಡಿತ ಕಂಡು ಬಂದಿಲ್ಲ.

ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 107.83 ರೂ. ಹಾಗೂ ಲೀಟರ್ ಡೀಸೆಲ್ ದರ 97.45 ರೂ. ಇದೆ. ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 101.49 ಹಾಗೂ ಲೀಟರ್ ಡೀಸೆಲ್ ದರ 94.39 ರೂ. ಇದೆ. ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ದರ 102.08 ರೂ. ಹಾಗೂ ಲೀಟರ್ ಡೀಸೆಲ್ ದರ 93.02 ರೂಪಾಯಿ ಇದೆ.

ಭೋಪಾಲ್​ನಲ್ಲಿ ಲೀಟರ್ ಪೆಟ್ರೋಲ್ ದರ 110.20 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 98.67 ರೂಪಾಯಿ ಇದೆ. ರಾಂಚಿಯಲ್ಲಿ ಲೀಟರ್ ಪೆಟ್ರೋಲ್ ದರ 96.68 ರೂ. ಹಾಗೂ ಲೀಟರ್ ಡೀಸೆಲ್ ದರ 94.84 ರೂಪಾಯಿ ಇದೆ.

ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 105.25 ರೂ. ಹಾಗೂ ಲೀಟರ್ ಡೀಸೆಲ್ ದರ 95.26 ರೂಪಾಯಿ ಇದೆ. ಪಾಟ್ನಾದಲ್ಲಿ ಲೀಟರ್ ಪೆಟ್ರೋಲ್ ದರ 104.25 ಹಾಗೂ ಲೀಟರ್ ಡೀಸೆಲ್ ದರ 95.57 ರೂಪಾಯಿ ಇದೆ. ಲಕ್ನೋದಲ್ಲಿ ಲೀಟರ್ ಪೆಟ್ರೋಲ್ ದರ 98.92 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 90.26 ರೂಪಾಯಿ ಇದೆ.

ದೇಶಾದ್ಯಂತ 19 ರಾಜ್ಯಗಳಲ್ಲಿ ಪೆಟ್ರೋಲ್ ದರ 100ರ ಗಡಿ ದಾಟಿ ಮುನ್ನುಗ್ಗಿದೆ. ಮಧ್ಯಪ್ರದೇಶ, ರಾಜಸ್ಥಾನ, ಮಹಾರಾಷ್ಟ್ರ, ಆಂಧ್ರಪ್ರದೇಶ, ತೆಲಂಗಾಣ, ಕರ್ನಾಟಕ, ಒಡಿಶಾ, ಜಮ್ಮು ಮತ್ತು ಕಾಶ್ಮೀರ, ಲಡಾಕ್ ಈ ಪಟ್ಟಿಯಲ್ಲಿವೆ. ಅದೇ ರೀತಿ ಮುಂಬೈ, ಹೈದರಾಬಾದ್ ಮತ್ತು ಬೆಂಗಳೂರಿನಲ್ಲಿಯೂ ಲೀಟರ್ ಪೆಟ್ರೋಲ್ ದರ ಶತಕ ಬಾರಿಸಿ ಮುನ್ನುಗ್ಗುತ್ತಿದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುವ ಕೆಲಸವನ್ನು ಮಾಡುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ.

ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ಇದನ್ನೂ ಓದಿ: ವಿವಿಧ ನಗರದಲ್ಲಿ ಪೆಟ್ರೋಲ್​ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್​ಅನ್ನು ಕ್ಲಿಕ್ ಮಾಡಿ: https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್​ಅನ್ನು ಕ್ಲಿಕ್ ಮಾಡಿ: https://tv9kannada.com/business/diesel-price-today.html

ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?