Petrol Price Today: ದೇಶದಲ್ಲಿ ಇಂಧನ ದರ ಸ್ಥಿರ; ವಿವಿಧ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟಿದೆ? ಇಲ್ಲಿದೆ ನೋಡಿ
Petrol price in Bengaluru | Diesel Price on 25.05.2022: ಮೇ 21ರ ಶನಿವಾರದಂದು ಪ್ರತಿ ಲೀಟರ್ ಪೆಟ್ರೋಲ್ ಮೇಲೆ 8 ರೂಪಾಯಿ ಮತ್ತು ಪ್ರತಿ ಲೀಟರ್ ಡೀಸೆಲ್ ಮೇಲೆ 6 ರೂಪಾಯಿ ಸುಂಕವನ್ನು ಇಳಿಸಿ ಕೇಂದ್ರ ಘೋಷಿಸಿತ್ತು. ಅದರ ನಂತರ ಇಂಧನ ದರದಲ್ಲಿ ವ್ಯತ್ಯಾಸವಾಗಿಲ್ಲ.
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಶನಿವಾರದಂದು (ಮೇ.21) ಪೆಟ್ರೋಲ್ ಮೇಲಿನ ಸುಂಕವನ್ನು ಲೀಟರ್‌ಗೆ 8 ಮತ್ತು ಡೀಸೆಲ್‌ಗೆ 6 ರೂಪಾಯಿ ಕಡಿತಗೊಳಿಸುವುದಾಗಿ ಘೋಷಿಸಿದ್ದರು. ಇದರಿಂದ ದೇಶದಲ್ಲಿ ಇಂಧನ ದರ ಕಡಿಮೆಯಾಗಿತ್ತು. ನಂತರದಲ್ಲಿ ಇಂಧನ ದರದಲ್ಲಿ ವ್ಯತ್ಯಾಸಗಳು ಕಂಡುಬಂದಿಲ್ಲ. ದೇಶದ ಪ್ರಮುಖ ನಗರಗಳಲ್ಲಿ ಇಂದು (ಮೇ.25) ಪೆಟ್ರೋಲ್ (Petrol Price), ಡೀಸೆಲ್ ದರ (Diesel Price) ಸ್ಥಿರವಾಗಿದ್ದು, ದೆಹಲಿ, ಬೆಂಗಳೂರು, ಮುಂಬೈ ಮೊದಲಾದ ನಗರಗಳಲ್ಲಿ ಬೆಲೆ ಎಷ್ಟಿದೆ ಎಂಬ ಮಾಹಿತಿ ಇಲ್ಲಿದೆ. ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ಗೆ 101.94 ರೂ ಇದ್ದು, ಡೀಸೆಲ್ ಪ್ರತಿ ಲೀಟರ್‌ಗೆ 87.89 ರೂ ದಾಖಲಾಗಿದೆ. ಮುಂಬೈನಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 111.35 ರೂ ಹಾಗೂ ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 97.28 ರೂ ಇದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್‌ಗೆ ರೂ 96.72 ಇದ್ದು, ಡೀಸೆಲ್ ಪ್ರತಿ ಲೀಟರ್‌ಗೆ ರೂ 89.62 ದಾಖಲಾಗಿದೆ.
ದೇಶದ ವಿವಿಧ ನಗರಗಳಲ್ಲಿ ಇಂಧನ ದರ ಎಷ್ಟಿದೆ?
ಚೆನ್ನೈ: ಪೆಟ್ರೋಲ್: ಲೀಟರ್‌ಗೆ 102.63 ರೂ, ಡೀಸೆಲ್: ಲೀಟರ್‌ಗೆ 94.24 ರೂ
ಕೋಲ್ಕತ್ತಾ: ಪೆಟ್ರೋಲ್: ಲೀಟರ್‌ಗೆ 106.03 ರೂ, ಡೀಸೆಲ್: 92.76 ರೂ
ಲಕ್ನೋ: ಪೆಟ್ರೋಲ್: ಪ್ರತಿ ಲೀಟರ್‌ಗೆ ₹ 96.57, ಡೀಸೆಲ್: ಪ್ರತಿ ಲೀಟರ್‌ಗೆ ₹ 89.76
ನೋಯ್ಡಾ: ಪ್ರತಿ ಲೀಟರ್ ಪೆಟ್ರೋಲ್: ₹ 96.79, ಡೀಸೆಲ್: ₹ 89.96 ಪ್ರತಿ ಲೀಟರ್
ಗುರುಗ್ರಾಮ್: ಪ್ರತಿ ಲೀಟರ್ ಪೆಟ್ರೋಲ್: ₹ 97.18, ಡೀಸೆಲ್: ₹ 90.05 ಪ್ರತಿ ಲೀಟರ್
ಚಂಡೀಗಢ: ಪೆಟ್ರೋಲ್: ಪ್ರತಿ ಲೀಟರ್‌ಗೆ ₹ 96.20, ಡೀಸೆಲ್: ಪ್ರತಿ ಲೀಟರ್‌ಗೆ ₹ 84.26
ಇಂಧನ ದರದ ಕುರಿತು ಮತ್ತಷ್ಟು ಮಾಹಿತಿ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ
ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ:
ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ. ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.
ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ