AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Price Today: ಸತತ 12ನೇ ದಿನವೂ ಪೆಟ್ರೋಲ್, ಡೀಸೆಲ್​ ಬೆಲೆಯಲ್ಲಿ ಬದಲಾವಣೆಗಳಿಲ್ಲ!

Petrol Rate Today: ಈ ವರ್ಷದಲ್ಲಿ ಪೆಟ್ರೋಲ್ ಬೆಲೆಯನ್ನು 63 ಬಾರಿ ಹಾಗೂ ಡೀಸಲ್ ಬೆಲೆಯನ್ನು 61 ಬಾರಿ ಹೆಚ್ಚಳ ಮಾಡಲಾಗಿದೆ. ಜುಲೈ ತಿಂಗಳಿನಲ್ಲಿ ಡೀಸೆಲ್ ಬೆಲೆ ಎರಡು ಬಾರಿ ಇಳಿಕೆ ಕಂಡಿತ್ತು. ಆ ಮೂಲಕ ಇನ್ನೇನು ಇಂಧನ ದರ ಕಡಿಮೆ ಆಗಬಹುದು ಎಂದು ಗ್ರಾಹಕರು ಅಂದುಕೊಂಡಿದ್ದರು.

Petrol Price Today: ಸತತ 12ನೇ ದಿನವೂ ಪೆಟ್ರೋಲ್, ಡೀಸೆಲ್​ ಬೆಲೆಯಲ್ಲಿ ಬದಲಾವಣೆಗಳಿಲ್ಲ!
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jul 29, 2021 | 8:25 AM

Share

Petrol Diesel Price Today | ದೆಹಲಿ: ಸತತವಾಗಿ 12 ದಿನಗಳ ಕಾಲ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ(Diesel Price) ಸ್ಥಿರತೆಯನ್ನು ಕಾಯ್ದುಕೊಂಡಿದೆ. ಇದರಿಂದ ವಾಹನ ಸವಾರರು ಕೊಂಚ ಸಮಾಧಾನಗೊಂಡಿದ್ದಾರೆ. ಏರುತ್ತಲೇ ಇದ್ದ ಇಂಧನ ದರ(Fuel Price) ಗಮನಿಸುತ್ತಿದ್ದ ಗ್ರಾಹಕರು ಆಕ್ರೋಶ ಹೊರಹಾಕಿದ್ದರು. ಏರಿಕೆಯತ್ತ ಸಾಗದಿದ್ದರೂ ಸದ್ಯ, ಸ್ಥಿರತೆಯಲ್ಲಿದೆ ಎಂಬುದು ಕೊಂಚ ಸಮಾಧಾನ ತಂದಿದೆ ಎಂಬುದು ಜನರ ಅಭಿಪ್ರಾಯ. ಇತ್ತೀಚೆಗೆ ದರ ಏರಿಕೆ ಕಂಡ ನಂತರದಲ್ಲಿ ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ(Petrol Price) 101.84 ರೂಪಾಯಿ ಆಗಿದೆ. ಲೀಟರ್ ಡೀಸೆಲ್ ದರ 89.87 ರೂಪಾಯಿ ಆಗಿದೆ. ಎಲ್ಲಾ ನಗರಗಳಲ್ಲಿ ಹನ್ನೆಡರು ದಿನಗಳ ಕಾಲ ತೈಲ ದರ ಸ್ಥಿರತೆಯನ್ನು ಕಾಯ್ದುಕೊಂಡಿದೆ.

ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 107.83 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 97.45 ರೂಪಾಯಿ ಇದೆ. ಕೋಲ್ಕತ್ತಾದಲ್ಲಿ ಲೀ. ಪೆಟ್ರೋಲ್ ದರ 102.08 ರೂ. ಹಾಗೂ ಲೀ.ಡೀಸೆಲ್ ದರ 93.02 ರೂಪಾಯಿ ಇದೆ. ಅದೇ ರೀತಿ ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 102.49 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.39 ರೂಪಾಯಿ ಇದೆ.

ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 105.25 ರೂ. ಹಾಗೂ ಲೀಟರ್ ಡೀಸೆಲ್ ದರ 95.26 ರೂ. ಇದೆ. ಭೋಪಾಲ್​ನಲ್ಲಿ ಲೀಟರ್ ಪೆಟ್ರೋಲ್ ದರ 110.20 ರೂ. ಹಾಗೂ ಲೀಟರ್ ಡೀಸೆಲ್ ದರ 98. 67 ರೂಪಾಯಿ ಇದೆ. ಅದೇ ರೀತಿ ಲಕ್ನೋದಲ್ಲಿ ಲೀಟರ್ ಪೆಟ್ರೋಲ್ ದರ 98.92 ರೂ. ಹಾಗೂ ಲೀಟರ್ ಡೀಸೆಲ್ ದರ 90.26 ರೂಪಾಯಿ ಇದೆ.

ಈ ವರ್ಷದಲ್ಲಿ ಪೆಟ್ರೋಲ್ ಬೆಲೆಯನ್ನು 63 ಬಾರಿ ಹಾಗೂ ಡೀಸಲ್ ಬೆಲೆಯನ್ನು 61 ಬಾರಿ ಹೆಚ್ಚಳ ಮಾಡಲಾಗಿದೆ. ಜುಲೈ ತಿಂಗಳಿನಲ್ಲಿ ಡೀಸೆಲ್ ಬೆಲೆ ಎರಡು ಬಾರಿ ಇಳಿಕೆ ಕಂಡಿತ್ತು. ಆ ಮೂಲಕ ಇನ್ನೇನು ಇಂಧನ ದರ ಕಡಿಮೆ ಆಗಬಹುದು ಎಂದು ಗ್ರಾಹಕರು ಅಂದುಕೊಂಡಿದ್ದರು. ಆದರೆ ದಿನ ಸಾಗುತ್ತಿದ್ದಂತೆಯೇ ತೈಲ ದರ ಸ್ಥಿರತೆಯಲ್ಲಿಯೇ ಇದೆ ಹೊರತಾಗಿ ಇಳಿಕೆಯತ್ತ ಸಾಗುವ ಯಾವುದೇ ಲಕ್ಷಣಗಳು ಕಂಡುಬಂದಿಲ್ಲ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುವ ಕೆಲಸವನ್ನು ಮಾಡುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ.

ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ಇದನ್ನೂ ಓದಿ: ವಿವಿಧ ನಗರದಲ್ಲಿ ಪೆಟ್ರೋಲ್​ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್​ಅನ್ನು ಕ್ಲಿಕ್ ಮಾಡಿ: https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್​ಅನ್ನು ಕ್ಲಿಕ್ ಮಾಡಿ: https://tv9kannada.com/business/diesel-price-today.html

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು