Petrol Price Today: ಸತತ 27 ದಿನಗಳಿಂದ ಪೆಟ್ರೋಲ್, ಡೀಸೆಲ್ ದರ ಸ್ಥಿರ!
Petrol Rate Today, 01-12-2021: ದೀಪಾವಳಿಯ ಮುನ್ನಾದಿನ ಕೇಂದ್ರ ಸರ್ಕಾರವು ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಕಡಿತಗೊಳಿಸಿತು. ಆ ನಂತರ ಲೀಟರ್ ಪೆಟ್ರೋಲ್ ಬೆಲೆಯಲ್ಲಿ 5 ರೂಪಾಯಿ ಹಾಗೂ ಲೀಟರ್ ಡೀಸೆಲ್ ಬೆಲೆಯಲ್ಲಿ 10 ರೂಪಾಯಿ ಇಳಿಕೆ ಆಯಿತು. ಆ ನಂತರದ ದಿನಗಳಿಂದ ಇಂಧನ ದರದಲ್ಲಿ ಯಾವುದೇ ಏರಿಳಿತ ಕಂಡು ಬಂದಿಲ್ಲ.
Petrol Diesel Price Today | ದೆಹಲಿ: ಸರ್ಕಾರಿ ತೈಲ ಕಂಪನಿಗಳು ಇಂದು ಬುಧವಾರ (ಡಿಸೆಂಬರ್ 01) ಪೆಟ್ರೋಲ್ ಮತ್ತು ಡೀಸೆಲ್ ಹೊಸ ದರಗಳನ್ನು ಬಿಡುಗಡೆ ಮಾಡಿವೆ. ಆ ಮೂಲಕ ಇಂದು ಸಹ ಇಂಧನ ದರದಲ್ಲಿ (Fuel Price) ಯಾವುದೇ ಬದಲಾವಣೆಗಳು ಕಂಡು ಬಂದಿಲ್ಲ. ಪ್ರಮುಖ ಎಲ್ಲಾ ಮಹಾ ನಗರಗಳಲ್ಲಿಯೂ ಇಂಧನ ದರ ಸ್ಥಿರವಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ (Petrol Price) 103.97 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.57 ರೂಪಾಯಿ ನಿಗದಿಯಾಗಿದೆ. ಹೀಗೆ ಪ್ರಮುಖ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ (Diesel Price) ಎಷ್ಟಿದೆ ಎಂಬ ಮಾಹಿತಿ ಈ ಕೆಳಗಿನಂತಿದೆ ಪರಿಶೀಲಿಸಿ.
ದೀಪಾವಳಿಯ ಮುನ್ನಾದಿನ ಕೇಂದ್ರ ಸರ್ಕಾರವು ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಕಡಿತಗೊಳಿಸಿತು. ಆ ನಂತರ ಲೀಟರ್ ಪೆಟ್ರೋಲ್ ಬೆಲೆಯಲ್ಲಿ 5 ರೂಪಾಯಿ ಹಾಗೂ ಲೀಟರ್ ಡೀಸೆಲ್ ಬೆಲೆಯಲ್ಲಿ 10 ರೂಪಾಯಿ ಇಳಿಕೆ ಆಯಿತು. ಆ ನಂತರದ ದಿನಗಳಿಂದ ಇಂಧನ ದರದಲ್ಲಿ ಯಾವುದೇ ಏರಿಳಿತ ಕಂಡು ಬಂದಿಲ್ಲ.
ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 109.98 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.14 ರೂಪಾಯಿ ಇದೆ. ಭೋಪಾಲ್ನಲ್ಲಿ ಲೀಟರ್ ಪೆಟ್ರೋಲ್ ದರ 107.23 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 90.87 ರೂಪಾಯಿ ನಿಗದಿಯಾಗಿದೆ. ಹೈದರಾಬಾದ್ನಲ್ಲಿ ಲೀಟರ್ ಪೆಟ್ರೋಲ್ ದರ 108.20 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.62 ರೂಪಾಯಿ ನಿಗದಿಯಾಗಿದೆ. ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 101.40 ರೂಪಾಯಿ ಹಾಗೂ ಲೀಟರ್ ಡೀಸೆಲ್ ಬೆಲೆ 91.43 ರೂಪಾಯಿ ಇದೆ.
ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ 100.65 ರೂಪಾಯಿ ಹಾಗೂ ಲೀಟರ್ ಡೀಸೆಲ್ 85.08 ರೂಪಾಯಿಗೆ ಮಾರಾಟವಾಗುತ್ತಿದೆ. ಲಕ್ನೋದಲ್ಲಿ ಲೀಟರ್ ಪೆಟ್ರೋಲ್ ದರ 95.28 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.80 ರೂಪಾಯಿ ನಿಗದಿಯಾಗಿದೆ. ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ದರ 104.67 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 89.79 ರೂಪಾಯಿ ದಾಖಲಾಗಿದೆ. ತಿರುವನಂತಪುರಂನಲ್ಲಿ ಲೀಟರ್ ಪೆಟ್ರೋಲ್ ದರ 106.36 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 93.47 ರೂಪಾಯಿ ನಿಗದಿಯಾಗಿದೆ.
ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ. ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.
ಇದನ್ನೂ ಓದಿ:
ವಿವಿಧ ನಗರದಲ್ಲಿ ಪೆಟ್ರೋಲ್ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/petrol-price-today.html
ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/diesel-price-today.htm