Petrol Diesel Price Today | ದೆಹಲಿ: ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಪ್ರತಿ ಬ್ಯಾರೆಲ್‌ಗೆ 70 ಡಾಲರ್‌ಗಿಂತ ಹೆಚ್ಚು ಕಡಿಮೆಯಾಗಿದೆ. ಕಚ್ಚಾ ತೈಲದ ಬೆಲೆ ಇಳಿಕೆಯಿಂದಾಗಿ ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಕಡಿಮೆಯಾಗಬಹುದು ಎಂಬ ನಿರೀಕ್ಷೆ ಇದೆ. ಇಂದು ಶುಕ್ರವಾರ (ಡಿಸೆಂಬರ್ 3) ಸರ್ಕಾರಿ ತೈಲ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಬಿಡುಗಡೆ ಮಾಡಿದೆ. ಆ ಪ್ರಕಾರ ಇಂಧನ ಬೆಲೆಯಲ್ಲಿ(Fuel Price) ಯಾವುದೇ ಬದಲಾವಣೆಗಳಿಲ್ಲ. ಡಿಸೆಂಬರ್ 1 ರಂದು ದೆಹಲಿ ಸರ್ಕಾರ ಪೆಟ್ರೋಲ್ ಮೇಲಿನ ವ್ಯಾಟ್ ದರವನ್ನು ಶೇಕಡಾ 30 ರಿಂದ 19.4 ಕ್ಕೆ ಇಳಿಕೆ ಮಾಡಿದೆ. ಆ ಪ್ರಕಾರ ದೆಹಲಿಯಲ್ಲಿ ಇಂದು ಪೆಟ್ರೋಲ್ ದರ (Petrol Price) 95.41 ರೂಪಾಯಿಯಾಗಿದ್ದು, ಡೀಸೆಲೆ ಬೆಲೆ (Diesel Price) 86.67 ರೂಪಾಯಿ ನಿಗದಿಯಾಗಿದೆ.
ದೆಹಲಿಯ ಪಕ್ಕದಲ್ಲಿರುವ ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ಒಂದು ಲೀಟರ್ ಪೆಟ್ರೋಲ್ ಬೆಲೆ 95.29 ರೂಪಾಯಿ ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 86.80 ರೂಪಾಯಿ ನಿಗದಿಯಾಗಿದೆ. ಎನ್‌ಸಿಆರ್‌ನಲ್ಲಿರುವ ಗುರುಗ್ರಾಮ್‌ನಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಕಡಿಮೆಯಾಗಿದೆ. ಗುರುಗ್ರಾಮ್‌ನಲ್ಲಿ ಪ್ರತಿ ಲೀಟರ್ ಪೆಟ್ರೋಲ್ 95.90 ರೂಪಾಯಿ ಮತ್ತು ಡೀಸೆಲ್ ಲೀಟರ್‌ಗೆ 87.11 ರೂಪಾಯಿ ನಿಗದಿಯಾಗಿದೆ.
ಮುಂಬೈನಲ್ಲಿ ಇಂದು ಪ್ರತಿ ಲೀಟರ್ ಪೆಟ್ರೋಲ್ ಬೆಲೆ 109.98 ರೂ. ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 94.14 ರೂಪಾಯಿ ನಿಗದಿಯಾಗಿದೆ. ಚೆನ್ನೈನಲ್ಲಿ ಒಂದು ಲೀಟರ್ ಪೆಟ್ರೋಲ್ ಬೆಲೆ 101.40 ರೂಪಾಯಿ ಮತ್ತು ಒಂದು ಲೀಟರ್ ಡೀಸೆಲ್ ಬೆಲೆ 91.43 ರೂಪಾಯಿ ನಿಗದಿಯಾಗಿದೆ. ಕೋಲ್ಕತ್ತಾದಲ್ಲಿ ಇಂದು ಪೆಟ್ರೋಲ್ ಲೀಟರ್‌ಗೆ 104.67 ರೂಪಾಯಿ ಮತ್ತು ಡೀಸೆಲ್ ಲೀಟರ್‌ಗೆ 89.79 ರೂಪಾಯಿ ನಿಗದಿಯಾಗಿದೆ. ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ಬೆಲೆ 100.58 ರೂಪಾಯಿ ಹಾಗೂ ಡೀಸೆಲ್ ಬೆಲೆ ಲೀಟರ್‌ಗೆ 85.1 ರೂಪಾಯಿ ನಿಗದಿಯಾಗಿದೆ.
ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ
ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ. ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.
ಇದನ್ನೂ ಓದಿ:
ವಿವಿಧ ನಗರದಲ್ಲಿ ಪೆಟ್ರೋಲ್ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ:
https://tv9kannada.com/business/petrol-price-today.html
ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ:
https://tv9kannada.com/business/diesel-price-today.htm
Published On - 8:09 am, Fri, 3 December 21