AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Price Today: ಇಂದು ಪ್ರಮುಖ ನಗರಗಳಲ್ಲಿ ಲೀಟರ್​ ಪೆಟ್ರೋಲ್​, ಡೀಸೆಲ್​ ಬೆಲೆ ಎಷ್ಟಿದೆ ಗೊತ್ತಾ?

Petrol Rate Today, 06-12-2021: ಕೋಲ್ಕತ್ತಾದಲ್ಲಿ ಇಂದು ಪೆಟ್ರೋಲ್ ಲೀಟರ್‌ಗೆ 104.67 ರೂಪಾಯಿ ಮತ್ತು ಡೀಸೆಲ್ ಲೀಟರ್‌ಗೆ 89.79 ರೂಪಾಯಿ ನಿಗದಿಯಾಗಿದೆ. ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ಬೆಲೆ 100.58 ರೂಪಾಯಿ ಹಾಗೂ ಡೀಸೆಲ್ ಬೆಲೆ ಲೀಟರ್ಗೆ 85.1 ರೂಪಾಯಿ ನಿಗದಿಯಾಗಿದೆ.

Petrol Price Today: ಇಂದು ಪ್ರಮುಖ ನಗರಗಳಲ್ಲಿ ಲೀಟರ್​ ಪೆಟ್ರೋಲ್​, ಡೀಸೆಲ್​ ಬೆಲೆ ಎಷ್ಟಿದೆ ಗೊತ್ತಾ?
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Dec 06, 2021 | 7:55 AM

Share

Petrol Diesel Price Today | ದೆಹಲಿ: ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಡಿಸೆಂಬರ್​ 3 ರಂದು ಕಚ್ಚಾ ತೈಲದ ಬೆಲೆ ಪ್ರತಿ ಬ್ಯಾರೆಲ್‌ಗೆ 70 ಡಾಲರ್‌ಗಿಂತ ಹೆಚ್ಚು ಕಡಿಮೆಯಾಗಿದೆ. ಕಚ್ಚಾ ತೈಲದ ಬೆಲೆ ಇಳಿಕೆಯಿಂದಾಗಿ ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಕಡಿಮೆಯಾಗಬಹುದು ಎಂಬ ನಿರೀಕ್ಷೆ ಇತ್ತು. ಆದರೆ ಸದ್ಯಕ್ಕೆ ಯಾವುದೇ ಬದಲಾವಣೆ ಕಂಡು ಬಂದಿಲ್ಲ. ಇಂದು ಸೋಮವಾರ (ಡಿಸೆಂಬರ್ 6) ಸರ್ಕಾರಿ ತೈಲ ಕಂಪನಿಗಳು ಪೆಟ್ರೋಲ್ (Petrol Price) ಮತ್ತು ಡೀಸೆಲ್ ದರವನ್ನು ಬಿಡುಗಡೆ ಮಾಡಿದೆ. ಆ ಪ್ರಕಾರ ಇಂಧನ ಬೆಲೆಯಲ್ಲಿ (Fuel Price) ಯಾವುದೇ ಬದಲಾವಣೆಗಳಿಲ್ಲ. ನವೆಂಬರ್ 4 ರಂದು ಕೇಂದ್ರ ಸರ್ಕಾರ ಪೆಟ್ರೋಲ್- ಡೀಸೆಲ್ (Diesel Price) ಮೇಲಿನ ಅಬಕಾರಿ ಸುಂಕ ಕಡಿಮೆ ಮಾಡಿದೆ. ಅನಂತರ ಯಾವುದೇ ಬದಲಾವಣೆ ತಂದಿಲ್ಲ.

ದೆಹಲಿಯಲ್ಲಿ ಇಂದು ಪೆಟ್ರೋಲ್ ದರ 95.41 ರೂಪಾಯಿಯಾಗಿದ್ದು, ಡೀಸೆಲೆ ಬೆಲೆ ಲೀಟರ್​ಗೆ 86.67 ರೂಪಾಯಿ ನಿಗದಿಯಾಗಿದೆ. ಮುಂಬೈನಲ್ಲಿ ಇಂದು ಪ್ರತಿ ಲೀಟರ್ ಪೆಟ್ರೋಲ್ ಬೆಲೆ 109.98 ರೂ. ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 94.14 ರೂಪಾಯಿ ನಿಗದಿಯಾಗಿದೆ. ಚೆನ್ನೈನಲ್ಲಿ ಒಂದು ಲೀಟರ್ ಪೆಟ್ರೋಲ್ ಬೆಲೆ 101.40 ರೂಪಾಯಿ ಮತ್ತು ಒಂದು ಲೀಟರ್ ಡೀಸೆಲ್ ಬೆಲೆ 91.43 ರೂಪಾಯಿ ನಿಗದಿಯಾಗಿದೆ.

ಕೋಲ್ಕತ್ತಾದಲ್ಲಿ ಇಂದು ಪೆಟ್ರೋಲ್ ಲೀಟರ್‌ಗೆ 104.67 ರೂಪಾಯಿ ಮತ್ತು ಡೀಸೆಲ್ ಲೀಟರ್‌ಗೆ 89.79 ರೂಪಾಯಿ ನಿಗದಿಯಾಗಿದೆ. ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ಬೆಲೆ 100.58 ರೂಪಾಯಿ ಹಾಗೂ ಡೀಸೆಲ್ ಬೆಲೆ ಲೀಟರ್ಗೆ 85.1 ರೂಪಾಯಿ ನಿಗದಿಯಾಗಿದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ. ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ಇದನ್ನೂ ಓದಿ:

ವಿವಿಧ ನಗರದಲ್ಲಿ ಪೆಟ್ರೋಲ್ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/diesel-price-today.htm

Published On - 7:50 am, Mon, 6 December 21

Follow Us
TV9 Web
TV9 Web

TV9 Kannada

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್