AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Price Today: ಇಂದು ಪ್ರಮುಖ ನಗರಗಳಲ್ಲಿ ಲೀಟರ್​ ಪೆಟ್ರೋಲ್​, ಡೀಸೆಲ್​ ಬೆಲೆ ಎಷ್ಟಿದೆ ಗೊತ್ತಾ?

Petrol Rate Today, 07-12-2021: ಶ್ರೀಗಂಗಾನಗರದಲ್ಲಿ ಲೀಟರ್ ಪೆಟ್ರೋಲ್​ಗೆ 114.01 ರೂಪಾಯಿ ಹಾಗೂ ಲೀಟರ್ ಡೀಸೆಲ್​ಗೆ 98.39 ರೂಪಾಯಿ ದಾಖಲಾಗಿದೆ. ಭೋಪಾಲ್​ನಲ್ಲಿ ಲೀಟರ್ ಪೆಟ್ರೋಲ್ ದರ 107.23 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 90.87 ರೂಪಾಯಿ ಇದೆ.

Petrol Price Today: ಇಂದು ಪ್ರಮುಖ ನಗರಗಳಲ್ಲಿ ಲೀಟರ್​ ಪೆಟ್ರೋಲ್​, ಡೀಸೆಲ್​ ಬೆಲೆ ಎಷ್ಟಿದೆ ಗೊತ್ತಾ?
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Dec 07, 2021 | 7:52 AM

Share

Petrol Diesel Price Today | ದೆಹಲಿ:  ಅಕ್ಟೋಬರ್​ ತಿಂಗಳಲ್ಲಿ ನಿರಂತವಾಗಿ ದರ ಏರಿಕೆ ಕಂಡಿತ್ತು. ಆ ಬಳಿಕ ದೀಪಾವಳಿ ಮುನ್ನಾದಿನ ಅಂದರೆ ನವೆಂವರ್​ 4 ರಂದು ಪೆಟ್ರೋಲ್ (Petrol Price), ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಸರ್ಕಾರ ಕಡಿತ ಗೊಳಿಸಿತ್ತು. ಬಳಿಕ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ (Diesel Price) ಯಾವುದೇ ಏರಿಳಿತ ಕಂಡು ಬಂದಿಲ್ಲ. ಇಲ್ಲಿಯವರೆಗೂ ಸಹ ಇಂಧನ ದರ (Fuel price) ಸ್ಥಿರವಾಗಿದೆ. ಒಂದು ತಿಂಗಳಿಗೂ ಹೆಚ್ಚು  ದಿನಗಳ ಕಾಲ ನಿರಂತರವಾಗಿ ಯಥಾಸ್ಥಿತಿ ಕಾಯ್ದುಕೊಂಡಿದೆ. ಇಂದು ಮಂಗಳವಾರ ಸಹ (ಡಿಸೆಂಬರ್​ 07) ಇಂಧನ ದರದಲ್ಲಿ ಯಾವುದೇ ಬದಲಾವಣೆಗಳಾಗಿಲ್ಲ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇಂದು ಪೆಟ್ರೋಲ್ ದರ 95.41 ರೂಪಾಯಿಯಾಗಿದ್ದು, ಡೀಸೆಲೆ ಬೆಲೆ ಲೀಟರ್​ಗೆ 86.67 ರೂಪಾಯಿ ನಿಗದಿಯಾಗಿದೆ. ವಾಣಿಜ್ಯ ನಗರಿ ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 109.98 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.14 ರೂಪಾಯಿ ಇದೆ. ಅದೇ ರೀತಿ ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 101.40 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 89.79 ರಪಾಯಿ ಇದೆ. ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ಬೆಲೆ 104.67 ರೂಪಾಯಿ ಹಾಗೂ ಲೀಟರ್ ಡೀಸೆಲ್ ಡೀಸೆಲ್ ದರ 89.79 ರೂಪಾಯಿ ನಿಗದಿಯಾಗಿದೆ.

ಶ್ರೀಗಂಗಾನಗರದಲ್ಲಿ ಲೀಟರ್ ಪೆಟ್ರೋಲ್​ಗೆ 114.01 ರೂಪಾಯಿ ಹಾಗೂ ಲೀಟರ್ ಡೀಸೆಲ್​ಗೆ 98.39 ರೂಪಾಯಿ ದಾಖಲಾಗಿದೆ. ಭೋಪಾಲ್​ನಲ್ಲಿ ಲೀಟರ್ ಪೆಟ್ರೋಲ್ ದರ 107.23 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 90.87 ರೂಪಾಯಿ ಇದೆ. ಗುವಾಹಟಿಯಲ್ಲಿ ಲೀಟರ್ ಪೆಟ್ರೋಲ್ ದರ 94.58 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.80 ರೂಪಾಯಿ ನಿಗದಿಯಾಗಿದೆ.

ಹೈದರಾಬಾದ್​ನಲ್ಲಿ ಲೀಟರ್ ಪೆಟ್ರೋಲ್ ದರ 108.20 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.62 ರೂಪಾಯಿ ನಿಗದಿಯಾಗಿದೆ. ಗಾಂಧಿನಗರದಲ್ಲಿ ಲೀಟರ್ ಪೆಟ್ರೋಲ್ ದರ 95.35 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 89.33 ರೂಪಾಯಿ ನಿಗದಿಯಾಗಿದೆ. ತಿರುವನಂತಪುರಂನಲ್ಲಿ ಲೀಟರ್ ಪೆಟ್ರೋಲ್​ಗೆ 106.36 ರೂಪಾಯಿ ಇದ್ದು, ಲೀಟರ್ ಡೀಸೆಲ್ ಬೆಲೆ 93.47 ರೂಪಾಯಿ ನಿಗದಿಯಾಗಿದೆ. ಲಕ್ನೋದಲ್ಲಿ ಲೀಟರ್ ಪೆಟ್ರೋಲ್ ದರ 95.28 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.80 ರೂಪಾಯಿ ನಿಗದಿಯಾಗಿದೆ. ಇನ್ನು, ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 100.58 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 85.01 ರೂಪಾಯಿ ದಾಖಲಾಗಿದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ. ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ಇದನ್ನೂ ಓದಿ:

ವಿವಿಧ ನಗರದಲ್ಲಿ ಪೆಟ್ರೋಲ್ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/diesel-price-today.htm

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ