AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Price Today: ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಏರಿಕೆ; ಇಂದಿನ ಪೆಟ್ರೋಲ್, ಡೀಸೆಲ್​ ದರ ಎಷ್ಟಿದೆ ನೋಡಿ

Petrol Rate Today, 08-12-2021: ನವೆಂಬರ್ 4 ರಂದು ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ(Diesel Price) ಬದಲಾವಣೆಯಾಗಿತ್ತು. ಪೆಟ್ರೋಲ್-ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಕೇಂದ್ರ ಸರ್ಕಾರ ಕಡಿಮೆ ಮಾಡಿದ ಹಿನ್ನೆಲೆಯಲ್ಲಿ ದೇಶದಲ್ಲಿ ಅದಾಗಲೇ ಗಗನಕ್ಕೇರಿದ್ದ ಇಂಧನಗಳ ಬೆಲೆ ತಗ್ಗಿತ್ತು. ಅಂದಿನಿಂದಲೂ ರಾಷ್ಟ್ರಾದ್ಯಂತ ತೈಲ ಬೆಲೆ ಸ್ಥಿರವಾಗಿಯೇ ಇದೆ.

Petrol Price Today: ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಏರಿಕೆ; ಇಂದಿನ ಪೆಟ್ರೋಲ್, ಡೀಸೆಲ್​ ದರ ಎಷ್ಟಿದೆ ನೋಡಿ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Dec 08, 2021 | 7:43 AM

Share

Petrol Diesel Price Today | ದೆಹಲಿ: ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಇಂದು (ಡಿಸೆಂಬರ್​ 08) ಏರಿಕೆಯಾಗಿದೆ. ಹಾಗಂತ ದೇಶಾದ್ಯಂತ ಇನ್ನೂ ಪೆಟ್ರೋಲ್ (Petrol Price), ಡೀಸೆಲ್ ದರ ಇಳಿಕೆಯಾಗಿಲ್ಲ. ಸತತ ಒಂದು ತಿಂಗಳಿಂದಲೂ ವಾಹನಗಳ ಇಂಧನ ದರ (Fuel price) ಸ್ಥಿರವಾಗಿಯೇ ಇದೆ. ಕಳೆದ ತಿಂಗಳು ಅಂದರೆ ನವೆಂಬರ್ 4 ರಂದು ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ(Diesel Price) ಬದಲಾವಣೆಯಾಗಿತ್ತು. ಪೆಟ್ರೋಲ್-ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಕೇಂದ್ರ ಸರ್ಕಾರ ಕಡಿಮೆ ಮಾಡಿದ ಹಿನ್ನೆಲೆಯಲ್ಲಿ ದೇಶದಲ್ಲಿ ಅದಾಗಲೇ ಗಗನಕ್ಕೇರಿದ್ದ ಇಂಧನಗಳ ಬೆಲೆ ತಗ್ಗಿತ್ತು. ಅಂದಿನಿಂದಲೂ ರಾಷ್ಟ್ರಾದ್ಯಂತ ತೈಲ ಬೆಲೆ ಸ್ಥಿರವಾಗಿಯೇ ಇದೆ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇಂದು ಪೆಟ್ರೋಲ್ ದರ 95.41 ರೂಪಾಯಿಯಾಗಿದ್ದು, ಡೀಸೆಲೆ ಬೆಲೆ ಲೀಟರ್​ಗೆ 86.67 ರೂಪಾಯಿ ನಿಗದಿಯಾಗಿದೆ. ವಾಣಿಜ್ಯ ನಗರಿ ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 109.98 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.14 ರೂಪಾಯಿ ಇದೆ. ಅದೇ ರೀತಿ ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 101.40 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 89.79 ರಪಾಯಿ ಇದೆ. ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ಬೆಲೆ 104.67 ರೂಪಾಯಿ ಹಾಗೂ ಲೀಟರ್ ಡೀಸೆಲ್ ಡೀಸೆಲ್ ದರ 89.79 ರೂಪಾಯಿ ನಿಗದಿಯಾಗಿದೆ.

ಶ್ರೀಗಂಗಾನಗರದಲ್ಲಿ ಲೀಟರ್ ಪೆಟ್ರೋಲ್​ಗೆ 114.01 ರೂಪಾಯಿ ಹಾಗೂ ಲೀಟರ್ ಡೀಸೆಲ್​ಗೆ 98.39 ರೂಪಾಯಿ ದಾಖಲಾಗಿದೆ. ಭೋಪಾಲ್​ನಲ್ಲಿ ಲೀಟರ್ ಪೆಟ್ರೋಲ್ ದರ 107.23 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 90.87 ರೂಪಾಯಿ ಇದೆ. ಗುವಾಹಟಿಯಲ್ಲಿ ಲೀಟರ್ ಪೆಟ್ರೋಲ್ ದರ 94.58 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.80 ರೂಪಾಯಿ ನಿಗದಿಯಾಗಿದೆ.

ಹೈದರಾಬಾದ್​ನಲ್ಲಿ ಲೀಟರ್ ಪೆಟ್ರೋಲ್ ದರ 108.20 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.62 ರೂಪಾಯಿ ನಿಗದಿಯಾಗಿದೆ. ಗಾಂಧಿನಗರದಲ್ಲಿ ಲೀಟರ್ ಪೆಟ್ರೋಲ್ ದರ 95.35 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 89.33 ರೂಪಾಯಿ ನಿಗದಿಯಾಗಿದೆ. ತಿರುವನಂತಪುರಂನಲ್ಲಿ ಲೀಟರ್ ಪೆಟ್ರೋಲ್​ಗೆ 106.36 ರೂಪಾಯಿ ಇದ್ದು, ಲೀಟರ್ ಡೀಸೆಲ್ ಬೆಲೆ 93.47 ರೂಪಾಯಿ ನಿಗದಿಯಾಗಿದೆ. ಲಕ್ನೋದಲ್ಲಿ ಲೀಟರ್ ಪೆಟ್ರೋಲ್ ದರ 95.28 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.80 ರೂಪಾಯಿ ನಿಗದಿಯಾಗಿದೆ. ಇನ್ನು, ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 100.58 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 85.01 ರೂಪಾಯಿ ದಾಖಲಾಗಿದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ. ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ಇದನ್ನೂ ಓದಿ:

ವಿವಿಧ ನಗರದಲ್ಲಿ ಪೆಟ್ರೋಲ್ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/diesel-price-today.htm

Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ