AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Price Today: ಸತತ 37 ದಿನಗಳಿಂದ ಪೆಟ್ರೋಲ್​, ಡೀಸೆಲ್​ ದರ ಸ್ಥಿರ!

ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಯಾವುದೇ ಏರಿಳಿತ ಕಂಡು ಬಂದಿಲ್ಲ. ಒಂದು ತಿಂಗಳಿಗೂ ಹೆಚ್ಚು ದಿನಗಳ ಕಾಲ ನಿರಂತರವಾಗಿ ಯಥಾಸ್ಥಿತಿ ಕಾಯ್ದುಕೊಂಡಿದೆ. ಇಂದು ಶುಕ್ರವಾರ ಸಹ (ಡಿಸೆಂಬರ್ 10) ಇಂಧನ ದರದಲ್ಲಿ ಯಾವುದೇ ಬದಲಾವಣೆಗಳಾಗಿಲ್ಲ

Petrol Price Today: ಸತತ 37 ದಿನಗಳಿಂದ ಪೆಟ್ರೋಲ್​, ಡೀಸೆಲ್​ ದರ ಸ್ಥಿರ!
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: preethi shettigar

Updated on:Dec 10, 2021 | 7:59 AM

Petrol Diesel Price Today | ದೆಹಲಿ: ಅಕ್ಟೋಬರ್ ತಿಂಗಳಲ್ಲಿ ನಿರಂತವಾಗಿ ದರ ಏರಿಕೆ ಕಂಡಿತ್ತು. ಆ ಬಳಿಕ ದೀಪಾವಳಿ ಮುನ್ನಾದಿನ ಅಂದರೆ ನವೆಂವರ್ 4 ರಂದು ಪೆಟ್ರೋಲ್ (Petrol Price), ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಸರ್ಕಾರ ಕಡಿತ ಗೊಳಿಸಿತ್ತು. ಬಳಿಕ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ (Diesel Price) ಯಾವುದೇ ಏರಿಳಿತ ಕಂಡು ಬಂದಿಲ್ಲ. ಇಲ್ಲಿಯವರೆಗೂ ಸಹ ಇಂಧನ ದರ (Fuel price) ಸ್ಥಿರವಾಗಿದೆ. ಒಂದು ತಿಂಗಳಿಗೂ ಹೆಚ್ಚು ದಿನಗಳ ಕಾಲ ನಿರಂತರವಾಗಿ ಯಥಾಸ್ಥಿತಿ ಕಾಯ್ದುಕೊಂಡಿದೆ. ಇಂದು ಶುಕ್ರವಾರ ಸಹ (ಡಿಸೆಂಬರ್ 10) ಇಂಧನ ದರದಲ್ಲಿ ಯಾವುದೇ ಬದಲಾವಣೆಗಳಾಗಿಲ್ಲ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇಂದು ಪೆಟ್ರೋಲ್ ದರ 95.41 ರೂಪಾಯಿಯಾಗಿದ್ದು, ಡೀಸೆಲೆ ಬೆಲೆ ಲೀಟರ್​ಗೆ 86.67 ರೂಪಾಯಿ ನಿಗದಿಯಾಗಿದೆ. ವಾಣಿಜ್ಯ ನಗರಿ ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 109.98 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.14 ರೂಪಾಯಿ ಇದೆ. ಅದೇ ರೀತಿ ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 101.40 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 89.79 ರಪಾಯಿ ಇದೆ. ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ಬೆಲೆ 104.67 ರೂಪಾಯಿ ಹಾಗೂ ಲೀಟರ್ ಡೀಸೆಲ್ ಡೀಸೆಲ್ ದರ 89.79 ರೂಪಾಯಿ ನಿಗದಿಯಾಗಿದೆ.

ಹೈದರಾಬಾದ್​ನಲ್ಲಿ ಲೀಟರ್ ಪೆಟ್ರೋಲ್ ದರ 108.20 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.62 ರೂಪಾಯಿ ನಿಗದಿಯಾಗಿದೆ. ಗಾಂಧಿನಗರದಲ್ಲಿ ಲೀಟರ್ ಪೆಟ್ರೋಲ್ ದರ 95.35 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 89.33 ರೂಪಾಯಿ ನಿಗದಿಯಾಗಿದೆ. ತಿರುವನಂತಪುರಂನಲ್ಲಿ ಲೀಟರ್ ಪೆಟ್ರೋಲ್​ಗೆ 106.36 ರೂಪಾಯಿ ಇದ್ದು, ಲೀಟರ್ ಡೀಸೆಲ್ ಬೆಲೆ 93.47 ರೂಪಾಯಿ ನಿಗದಿಯಾಗಿದೆ. ಲಕ್ನೋದಲ್ಲಿ ಲೀಟರ್ ಪೆಟ್ರೋಲ್ ದರ 95.28 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.80 ರೂಪಾಯಿ ನಿಗದಿಯಾಗಿದೆ. ಇನ್ನು, ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 100.58 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 85.01 ರೂಪಾಯಿ ದಾಖಲಾಗಿದೆ.

ಶ್ರೀಗಂಗಾನಗರದಲ್ಲಿ ಲೀಟರ್ ಪೆಟ್ರೋಲ್​ಗೆ 114.01 ರೂಪಾಯಿ ಹಾಗೂ ಲೀಟರ್ ಡೀಸೆಲ್​ಗೆ 98.39 ರೂಪಾಯಿ ದಾಖಲಾಗಿದೆ. ಭೋಪಾಲ್​ನಲ್ಲಿ ಲೀಟರ್ ಪೆಟ್ರೋಲ್ ದರ 107.23 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 90.87 ರೂಪಾಯಿ ಇದೆ. ಗುವಾಹಟಿಯಲ್ಲಿ ಲೀಟರ್ ಪೆಟ್ರೋಲ್ ದರ 94.58 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.80 ರೂಪಾಯಿ ನಿಗದಿಯಾಗಿದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ. ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ಇದನ್ನೂ ಓದಿ:

ವಿವಿಧ ನಗರದಲ್ಲಿ ಪೆಟ್ರೋಲ್ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/diesel-price-today.htm

Published On - 7:57 am, Fri, 10 December 21

ಕಾರ್ತಿಕ್ ಮಹೇಶ್​ಗೆ ನಾನು ಜೋಡಿ ಅಲ್ಲ: ಗಾಸಿಪ್​ಗಳಿಗೆ ತೆರೆ ಎಳೆದ ನಮ್ರತಾ
ಕಾರ್ತಿಕ್ ಮಹೇಶ್​ಗೆ ನಾನು ಜೋಡಿ ಅಲ್ಲ: ಗಾಸಿಪ್​ಗಳಿಗೆ ತೆರೆ ಎಳೆದ ನಮ್ರತಾ
ಕಾಮಗಾರಿಯನ್ನು ಸ್ಥಗಿತಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ: ಸೋಮಣ್ಣ
ಕಾಮಗಾರಿಯನ್ನು ಸ್ಥಗಿತಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ: ಸೋಮಣ್ಣ
ಬೆಂಗಳೂರು ನಗರದಲ್ಲೂ ನಿನ್ನೆ ರಾತ್ರಿ ಮತ್ತು ಇವತ್ತು ಭಾರೀ ಮಳೆ
ಬೆಂಗಳೂರು ನಗರದಲ್ಲೂ ನಿನ್ನೆ ರಾತ್ರಿ ಮತ್ತು ಇವತ್ತು ಭಾರೀ ಮಳೆ
ಹಿತಕರವಲ್ಲದ ವಿಷಯಗಳಿಗೆ ಸುದ್ದಿಯಾಗುವ ಪ್ರತಿಭಾವಂತ ಗಾಯಕಿ ಮಂಗ್ಲಿ
ಹಿತಕರವಲ್ಲದ ವಿಷಯಗಳಿಗೆ ಸುದ್ದಿಯಾಗುವ ಪ್ರತಿಭಾವಂತ ಗಾಯಕಿ ಮಂಗ್ಲಿ
‘ದೂರ ತೀರ ಯಾನ’ಕ್ಕೆ ನಟ ನವೀನ್ ಶಂಕರ್ ಶುಭ ಹಾರೈಕೆ
‘ದೂರ ತೀರ ಯಾನ’ಕ್ಕೆ ನಟ ನವೀನ್ ಶಂಕರ್ ಶುಭ ಹಾರೈಕೆ
ಹೈಕಮಾಂಡ್-ಸರ್ಕಾರ ಮರುಸಮೀಕ್ಷೆಯ ನಾಟಕ ಮಾಡುತ್ತಿವೆ: ಶ್ರೀರಾಮುಲು
ಹೈಕಮಾಂಡ್-ಸರ್ಕಾರ ಮರುಸಮೀಕ್ಷೆಯ ನಾಟಕ ಮಾಡುತ್ತಿವೆ: ಶ್ರೀರಾಮುಲು
RCB ಟೀಮ್ ಖರೀದಿ ಮಾಡ್ತಾರಾ ಡಿಕೆ ಶಿವಕುಮಾರ್? ಡಿಸಿಎಂ ಹೇಳಿದ್ದಿಷ್ಟು..!
RCB ಟೀಮ್ ಖರೀದಿ ಮಾಡ್ತಾರಾ ಡಿಕೆ ಶಿವಕುಮಾರ್? ಡಿಸಿಎಂ ಹೇಳಿದ್ದಿಷ್ಟು..!
ರಾಜಕೀಯ ವೈಷಮ್ಯ ಮರೆತು ಒಂದಾದ ಬಿಎಸ್​ ವೈ-ಈಶ್ವರಪ್ಪ, ವಿಡಿಯೋ ನೋಡಿ
ರಾಜಕೀಯ ವೈಷಮ್ಯ ಮರೆತು ಒಂದಾದ ಬಿಎಸ್​ ವೈ-ಈಶ್ವರಪ್ಪ, ವಿಡಿಯೋ ನೋಡಿ
RCB ವಿಜಯೋತ್ಸವಕ್ಕೆ ರಾಜ್ಯಪಾಲರಿಗೆ ಆಹ್ವಾನ ನೀಡಿದ್ಯಾರು? ಸತ್ಯಾಂಶ ಬಯಲು
RCB ವಿಜಯೋತ್ಸವಕ್ಕೆ ರಾಜ್ಯಪಾಲರಿಗೆ ಆಹ್ವಾನ ನೀಡಿದ್ಯಾರು? ಸತ್ಯಾಂಶ ಬಯಲು
ನಮ್ಮ ಆಚರಣೆ ನಮ್ಮ ಹಕ್ಕು, ಎಲ್ಲಿದ್ದರೂ ಹಿಂದೂಗಳೇ ಎಂದ ಪಾಕ್​ ಹಿಂದೂಗಳು
ನಮ್ಮ ಆಚರಣೆ ನಮ್ಮ ಹಕ್ಕು, ಎಲ್ಲಿದ್ದರೂ ಹಿಂದೂಗಳೇ ಎಂದ ಪಾಕ್​ ಹಿಂದೂಗಳು