AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Price Today: ಕಚ್ಚಾ ತೈಲ ಬೆಲೆ ಏರಿಕೆ; ನಿಮ್ಮೂರಿನಲ್ಲಿ ಲೀಟರ್​ ಪೆಟ್ರೋಲ್, ಡಿಸೇಲ್​ ಬೆಲೆ ಎಷ್ಟಿದೆ ಗಮನಿಸಿ

Petrol Rate Today, 13-12-2021: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇಂದು ಪೆಟ್ರೋಲ್ ದರ 95.41 ರೂಪಾಯಿಯಾಗಿದ್ದು, ಡೀಸೆಲೆ ಬೆಲೆ ಲೀಟರ್​ಗೆ 86.67 ರೂಪಾಯಿ ನಿಗದಿಯಾಗಿದೆ. ವಾಣಿಜ್ಯ ನಗರಿ ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 109.98 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.14 ರೂಪಾಯಿ ಇದೆ.

Petrol Price Today: ಕಚ್ಚಾ ತೈಲ ಬೆಲೆ ಏರಿಕೆ; ನಿಮ್ಮೂರಿನಲ್ಲಿ ಲೀಟರ್​ ಪೆಟ್ರೋಲ್, ಡಿಸೇಲ್​ ಬೆಲೆ ಎಷ್ಟಿದೆ ಗಮನಿಸಿ
ಸಾಂದರ್ಭಿಕ ಚಿತ್ರ
Follow us
TV9 Web
| Updated By: preethi shettigar

Updated on:Dec 14, 2021 | 8:04 AM

Petrol Diesel Price Today | ದೆಹಲಿ: ದೀಪಾವಳಿಯ ಮುನ್ನಾದಿನದಂದು ಕೇಂದ್ರವು ಇಂಧನಗಳ (Fuel Price) ಮೇಲಿನ ಅಬಕಾರಿ ಸುಂಕ ಕಡಿತವನ್ನು ಘೋಷಿಸಿತು. ಆ ಬಳಿಕ ದೇಶಾದ್ಯಂತ ಪೆಟ್ರೋಲ್ (Petrol Price), ಡೀಸೆಲ್ ಬೆಲೆಯಲ್ಲಿ ಇಳಿಕೆ ಆಗಿತ್ತು. ಆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಸ್ಥಿರತೆಯನ್ನು ಕಾಯ್ದುಕೊಂಡಿದೆ. ಇಂದು (ಡಿಸೆಂಬರ್​ 13, ಸೋಮವಾರ) ಕೂಡ ಪೆಟ್ರೋಲ್, ಡೀಸೆಲ್ ಬೆಲೆ ಸ್ಥಿರವಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲೀಟರ್ ಪೆಟ್ರೋಲ್​ ದರ (Delhi Petrol Price) 95.41 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.67 ರೂಪಾಯಿ ನಿಗದಿಯಾಗಿದೆ. ವಾಣಿಜ್ಯ ನಗರಿ ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ (Mumbai Petrol Price) 109.98 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.14 ರೂಪಾಯಿ ದಾಖಲಾಗಿದೆ. 

ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 101.40 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 89.79 ರಪಾಯಿ ಇದೆ. ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ಬೆಲೆ 104.67 ರೂಪಾಯಿ ಹಾಗೂ ಲೀಟರ್ ಡೀಸೆಲ್ ಡೀಸೆಲ್ ದರ 89.79 ರೂಪಾಯಿ ನಿಗದಿಯಾಗಿದೆ. ಶ್ರೀಗಂಗಾನಗರದಲ್ಲಿ ಲೀಟರ್ ಪೆಟ್ರೋಲ್​ಗೆ 114.01 ರೂಪಾಯಿ ಹಾಗೂ ಲೀಟರ್ ಡೀಸೆಲ್​ಗೆ 98.39 ರೂಪಾಯಿ ದಾಖಲಾಗಿದೆ. ಭೋಪಾಲ್​ನಲ್ಲಿ ಲೀಟರ್ ಪೆಟ್ರೋಲ್ ದರ 107.23 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 90.87 ರೂಪಾಯಿ ಇದೆ. ಗುವಾಹಟಿಯಲ್ಲಿ ಲೀಟರ್ ಪೆಟ್ರೋಲ್ ದರ 94.58 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.80 ರೂಪಾಯಿ ನಿಗದಿಯಾಗಿದೆ.

ಹೈದರಾಬಾದ್​ನಲ್ಲಿ ಲೀಟರ್ ಪೆಟ್ರೋಲ್ ದರ 108.20 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.62 ರೂಪಾಯಿ ನಿಗದಿಯಾಗಿದೆ. ಗಾಂಧಿನಗರದಲ್ಲಿ ಲೀಟರ್ ಪೆಟ್ರೋಲ್ ದರ 95.35 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 89.33 ರೂಪಾಯಿ ನಿಗದಿಯಾಗಿದೆ. ತಿರುವನಂತಪುರಂನಲ್ಲಿ ಲೀಟರ್ ಪೆಟ್ರೋಲ್​ಗೆ 106.36 ರೂಪಾಯಿ ಇದ್ದು, ಲೀಟರ್ ಡೀಸೆಲ್ ಬೆಲೆ 93.47 ರೂಪಾಯಿ ನಿಗದಿಯಾಗಿದೆ. ಲಕ್ನೋದಲ್ಲಿ ಲೀಟರ್ ಪೆಟ್ರೋಲ್ ದರ 95.28 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.80 ರೂಪಾಯಿ ನಿಗದಿಯಾಗಿದೆ. ಇನ್ನು, ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 100.58 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 85.01 ರೂಪಾಯಿ ದಾಖಲಾಗಿದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ. ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ಇದನ್ನೂ ಓದಿ:

ವಿವಿಧ ನಗರದಲ್ಲಿ ಪೆಟ್ರೋಲ್ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/diesel-price-today.htm

Published On - 7:55 am, Mon, 13 December 21

ಲಂಡನ್​ಗೆ ಹೊರಟಿದ್ದ ವಿಮಾನಕ್ಕೆ ಅದರ ಸಾಮರ್ಥ್ಯದಷ್ಟು ಇಂಧನ ತುಂಬಲಾಗಿತ್ತು
ಲಂಡನ್​ಗೆ ಹೊರಟಿದ್ದ ವಿಮಾನಕ್ಕೆ ಅದರ ಸಾಮರ್ಥ್ಯದಷ್ಟು ಇಂಧನ ತುಂಬಲಾಗಿತ್ತು
ಜಾತಿಗಣತಿ ಸಮೀಕ್ಷೆಗೆ ₹200 ಕೋಟಿ ಖರ್ಚಾಗಿದೆ ಎಂದರೆ ಸಚಿವನಲ್ಲಿ ಉತ್ತರವಿಲ್ಲ
ಜಾತಿಗಣತಿ ಸಮೀಕ್ಷೆಗೆ ₹200 ಕೋಟಿ ಖರ್ಚಾಗಿದೆ ಎಂದರೆ ಸಚಿವನಲ್ಲಿ ಉತ್ತರವಿಲ್ಲ
Ahmedabad Plane Crash: ಅಹಮದಾಬಾದ್​​ನಲ್ಲಿ ಏರ್​ ಇಂಡಿಯಾ ವಿಮಾನ ಪತನ
Ahmedabad Plane Crash: ಅಹಮದಾಬಾದ್​​ನಲ್ಲಿ ಏರ್​ ಇಂಡಿಯಾ ವಿಮಾನ ಪತನ
ಗೃಹ ಸಚಿವ ಕೇವಲ ತಮ್ಮ ಗೃಹಕ್ಕೆ ಮಾತ್ರ ಸಚಿವರು: ಆರ್ ಅಶೋಕ
ಗೃಹ ಸಚಿವ ಕೇವಲ ತಮ್ಮ ಗೃಹಕ್ಕೆ ಮಾತ್ರ ಸಚಿವರು: ಆರ್ ಅಶೋಕ
ವಾಲ್ಮೀಕಿ ನಿಗಮ ಪ್ರಕರಣದಲ್ಲಿ ಸರ್ಕಾರ ಸಮಗ್ರ ತನಿಖೆ ಮಾಡಿಸಿದೆ: ಗೃಹ ಸಚಿವ
ವಾಲ್ಮೀಕಿ ನಿಗಮ ಪ್ರಕರಣದಲ್ಲಿ ಸರ್ಕಾರ ಸಮಗ್ರ ತನಿಖೆ ಮಾಡಿಸಿದೆ: ಗೃಹ ಸಚಿವ
ತುಂಬಿ ಹರಿಯುತ್ತಿರುವ ಗೊನ್ವಾರ ಗ್ರಾಮ ಹೊರವಲಯದಲ್ಲಿರುವ ಹೊಳೆ
ತುಂಬಿ ಹರಿಯುತ್ತಿರುವ ಗೊನ್ವಾರ ಗ್ರಾಮ ಹೊರವಲಯದಲ್ಲಿರುವ ಹೊಳೆ
ಹುಬ್ಬಳ್ಳಿ ಜನರ ಸಮಸ್ಯೆಗಳಿಗೆ ಜನಪ್ರತಿನಿಧಿಗಳಿಂದ ನೀರಸ ಪ್ರತಿಕ್ರಿಯೆ
ಹುಬ್ಬಳ್ಳಿ ಜನರ ಸಮಸ್ಯೆಗಳಿಗೆ ಜನಪ್ರತಿನಿಧಿಗಳಿಂದ ನೀರಸ ಪ್ರತಿಕ್ರಿಯೆ
ಬರ್ತ್​ಡೇ ಪಾರ್ಟಿಯಲ್ಲಿ ಡ್ರಗ್ಸ್, ಗಾಯಕಿ ಮಂಗ್ಲಿ ಸ್ಪಷ್ಟನೆ
ಬರ್ತ್​ಡೇ ಪಾರ್ಟಿಯಲ್ಲಿ ಡ್ರಗ್ಸ್, ಗಾಯಕಿ ಮಂಗ್ಲಿ ಸ್ಪಷ್ಟನೆ
ಮೋದಿ ಸರ್ಕಾರದ ಆಡಳಿತ ವೈಖರಿ, ಜನಾಭಿಪ್ರಾಯ ಸಂಗ್ರಹಕ್ಕೆ ಜನ್ ಮನ್ ಸಮೀಕ್ಷೆ
ಮೋದಿ ಸರ್ಕಾರದ ಆಡಳಿತ ವೈಖರಿ, ಜನಾಭಿಪ್ರಾಯ ಸಂಗ್ರಹಕ್ಕೆ ಜನ್ ಮನ್ ಸಮೀಕ್ಷೆ
ಜೆಕೆ ರಾಜುಗೆ ಎಂದೂ ಮರೆಯಲಾಗದ ಉಡುಗೊರೆ ನೀಡಿದ ವಿಜಯ್ ಪ್ರಕಾಶ್
ಜೆಕೆ ರಾಜುಗೆ ಎಂದೂ ಮರೆಯಲಾಗದ ಉಡುಗೊರೆ ನೀಡಿದ ವಿಜಯ್ ಪ್ರಕಾಶ್