AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Price Today: ಇಂದು ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಪೆಟ್ರೋಲ್​-ಡೀಸೆಲ್​ ದರ ಹೀಗಿದೆ

Petrol Rate Today, 14-12-2021: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲೀಟರ್ ಪೆಟ್ರೋಲ್​ ದರ 95.41 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.67 ರೂಪಾಯಿ ನಿಗದಿಯಾಗಿದೆ. ವಾಣಿಜ್ಯ ನಗರಿ ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ  109.98 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.14 ರೂಪಾಯಿ ದಾಖಲಾಗಿದೆ.

Petrol Price Today: ಇಂದು ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಪೆಟ್ರೋಲ್​-ಡೀಸೆಲ್​ ದರ ಹೀಗಿದೆ
ಸಾಂಕೇತಿಕ ಚಿತ್ರ
TV9 Web
| Edited By: |

Updated on:Dec 14, 2021 | 8:02 AM

Share

Petrol Diesel Price Today | ದೆಹಲಿ: ಒಂದು ತಿಂಗಳಿಗೂ ಹೆಚ್ಚು ದಿನಗಳು ಕಳೆದರು ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆ ಕಂಡು ಬಂದಿಲ್ಲ. ಇಂದು ಮಂಗಳವಾರ (ಡಿಸೆಂಬರ್​ 14) ರಂದು ಸಹ ಇಂಧನ ದರದಲ್ಲಿ (Fuel Price) ಏರಿಳಿತ ಕಂಡು ಬಂದಿಲ್ಲ. ಪ್ರಮುಖ ಎಲ್ಲಾ ಮಹಾ ನಗರಗಳಲ್ಲಿಯೂ ಸಹ ಇಂಧನ ದರ ಸ್ಥಿರವಾಗಿದೆ. ಇದಕ್ಕೂ ಮುಂಚೆ ನವೆಂಬರ್ 4ರಂದು ಸರ್ಕಾರವು ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಕಡಿತಗೊಳಿಸಿತ್ತು, ಆಗ ಪೆಟ್ರೋಲ್ (Petrol Price), ಡೀಸೆಲ್ ದರದಲ್ಲಿ ಇಳಿಕೆಯಾಗಿತ್ತು. ಅದರ ನಂತರದ ದಿನಗಳಲ್ಲಿ ಯಾವುದೇ ಬದಲಾವಣೆಗಳಾಗಿಲ್ಲ. ಪ್ರಮುಖ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ (Diesel Price) ಎಷ್ಟಕ್ಕೆ ಮಾರಾಟವಾಗುತ್ತಿದೆ ಎಂಬ ಮಾಹಿತಿ ಈ ಕೆಳಗಿನಂತಿದೆ ಪರಿಶೀಲಿಸಿ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲೀಟರ್ ಪೆಟ್ರೋಲ್​ ದರ 95.41 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.67 ರೂಪಾಯಿ ನಿಗದಿಯಾಗಿದೆ. ವಾಣಿಜ್ಯ ನಗರಿ ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ  109.98 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.14 ರೂಪಾಯಿ ದಾಖಲಾಗಿದೆ. ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 101.40 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 89.79 ರಪಾಯಿ ಇದೆ. ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ಬೆಲೆ 104.67 ರೂಪಾಯಿ ಹಾಗೂ ಲೀಟರ್ ಡೀಸೆಲ್ ಡೀಸೆಲ್ ದರ 89.79 ರೂಪಾಯಿ ನಿಗದಿಯಾಗಿದೆ. ಶ್ರೀಗಂಗಾನಗರದಲ್ಲಿ ಲೀಟರ್ ಪೆಟ್ರೋಲ್​ಗೆ 114.01 ರೂಪಾಯಿ ಹಾಗೂ ಲೀಟರ್ ಡೀಸೆಲ್​ಗೆ 98.39 ರೂಪಾಯಿ ದಾಖಲಾಗಿದೆ. ಭೋಪಾಲ್​ನಲ್ಲಿ ಲೀಟರ್ ಪೆಟ್ರೋಲ್ ದರ 107.23 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 90.87 ರೂಪಾಯಿ ಇದೆ. ಗುವಾಹಟಿಯಲ್ಲಿ ಲೀಟರ್ ಪೆಟ್ರೋಲ್ ದರ 94.58 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.80 ರೂಪಾಯಿ ನಿಗದಿಯಾಗಿದೆ.

ಹೈದರಾಬಾದ್​ನಲ್ಲಿ ಲೀಟರ್ ಪೆಟ್ರೋಲ್ ದರ 108.20 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.62 ರೂಪಾಯಿ ನಿಗದಿಯಾಗಿದೆ. ಗಾಂಧಿನಗರದಲ್ಲಿ ಲೀಟರ್ ಪೆಟ್ರೋಲ್ ದರ 95.35 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 89.33 ರೂಪಾಯಿ ನಿಗದಿಯಾಗಿದೆ. ತಿರುವನಂತಪುರಂನಲ್ಲಿ ಲೀಟರ್ ಪೆಟ್ರೋಲ್​ಗೆ 106.36 ರೂಪಾಯಿ ಇದ್ದು, ಲೀಟರ್ ಡೀಸೆಲ್ ಬೆಲೆ 93.47 ರೂಪಾಯಿ ನಿಗದಿಯಾಗಿದೆ. ಲಕ್ನೋದಲ್ಲಿ ಲೀಟರ್ ಪೆಟ್ರೋಲ್ ದರ 95.28 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.80 ರೂಪಾಯಿ ನಿಗದಿಯಾಗಿದೆ. ಇನ್ನು, ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 100.58 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 85.01 ರೂಪಾಯಿ ದಾಖಲಾಗಿದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ. ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ಇದನ್ನೂ ಓದಿ:

ವಿವಿಧ ನಗರದಲ್ಲಿ ಪೆಟ್ರೋಲ್ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/diesel-price-today.htm

Published On - 8:01 am, Tue, 14 December 21

Follow Us
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಮೌಲ್ವಿ ಮೇಲೆ ಹಿಂದೂ ಯುವಕರ ಹಲ್ಲೆ: ಮುಸ್ಲಿಮರಿಂದ ಬೃಹತ್ ಪ್ರತಿಭಟನೆ
ಮೌಲ್ವಿ ಮೇಲೆ ಹಿಂದೂ ಯುವಕರ ಹಲ್ಲೆ: ಮುಸ್ಲಿಮರಿಂದ ಬೃಹತ್ ಪ್ರತಿಭಟನೆ
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ಬಣ್ಣ ತೊಳೆಯಲು ಕೆರೆಗೆ ಇಳಿದ ಯುವಕರು ನೀರುಪಾಲು
ಬಣ್ಣ ತೊಳೆಯಲು ಕೆರೆಗೆ ಇಳಿದ ಯುವಕರು ನೀರುಪಾಲು
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು