AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Price Today: ಕಚ್ಚಾ ತೈಲದ ಬೆಲೆ ಇಳಿಕೆ; ಪ್ರಮುಖ ನಗರಗಳಲ್ಲಿ ಇಂದಿನ ಪೆಟ್ರೋಲ್, ಡೀಸೆಲ್​ ದರ ಎಷ್ಟಿದೆ ನೋಡಿ

Petrol Rate Today, 17-12-2021: ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 100.58 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 85.01 ರೂಪಾಯಿ ದಾಖಲಾಗಿದೆ. ವಾಣಿಜ್ಯ ನಗರಿ ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 109.98 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.14 ರೂಪಾಯಿ ಇದೆ.

Petrol Price Today: ಕಚ್ಚಾ ತೈಲದ ಬೆಲೆ ಇಳಿಕೆ; ಪ್ರಮುಖ ನಗರಗಳಲ್ಲಿ ಇಂದಿನ ಪೆಟ್ರೋಲ್, ಡೀಸೆಲ್​ ದರ ಎಷ್ಟಿದೆ ನೋಡಿ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Dec 17, 2021 | 7:59 AM

Share

Petrol Diesel Price Today | ಇಂದು (ಡಿಸೆಂಬರ್​ 17) ಕೂಡ ಪೆಟ್ರೋಲ್​-ಡೀಸೆಲ್​ ಬೆಲೆ (Diesel Price) ಸ್ಥಿರವಾಗಿದ್ದು, ಯಾವುದೇ ಪ್ರಮುಖ ನಗರಗಳಲ್ಲೂ ಬೆಲೆಯಲ್ಲಿ ಬದಲಾವಣೆಯಾಗಿಲ್ಲ. ಆದರೆ ಅಂತರಾಷ್ಟೀಯ ಮಾರುಕಟ್ಟೆಯಲ್ಲಿ ಇಂದು ಕಚ್ಚಾ ತೈಲದ ಬೆಲೆ ಇಳಿಕೆಯ ಹಾದಿ ಹಿಡಿದಿದೆ. ಕಳೆದ ನವೆಂಬರ್​ 4ರಂದು  ಕೇಂದ್ರ ಸರ್ಕಾರ ಪೆಟ್ರೋಲ್ (Petrol Price)​, ಡೀಸೆಲ್​​ ಮೇಲಿನ ಅಬಕಾರಿ ಸುಂಕ ಕಡಿಮೆ ಮಾಡಿದೆ. ಅಂದಿನಿಂದಲೂ ಭಾರತದ ತೈಲ ಕಂಪನಿಗಳು ಇಂಧನ ಬೆಲೆಯಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಆದರೆ ಕೆಲವೇ ದಿನಗಳ ಹಿಂದೆ ದೆಹಲಿಯ ಆಪ್​ ಸರ್ಕಾರ ಪೆಟ್ರೋಲ್​ ಮೇಲಿನ ವ್ಯಾಟ್​ (VAT-ಮೌಲ್ಯವರ್ಧಿತ ತೆರಿಗೆ)ನ್ನು ಶೇ.30ರಿಂದ ಶೇ.19.40ಕ್ಕೆ ಇಳಿಸಿದೆ. ಹಾಗಾಗಿ ಅಲ್ಲಿ ಪೆಟ್ರೋಲ್​ ಬೆಲೆ ಪ್ರತಿ ಲೀಟರ್​ಗೆ 8 ರೂ.ಕಡಿಮೆಯಾಗಿದೆ. ಆದರೆ ಡೀಸೆಲ್​ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ.

ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 100.58 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 85.01 ರೂಪಾಯಿ ದಾಖಲಾಗಿದೆ. ವಾಣಿಜ್ಯ ನಗರಿ ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 109.98 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.14 ರೂಪಾಯಿ ಇದೆ. ಅದೇ ರೀತಿ ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 101.40 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 91.43 ರೂಪಾಯಿ ಇದೆ. ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ಬೆಲೆ 104.67 ರೂಪಾಯಿ ಹಾಗೂ ಲೀಟರ್ ಡೀಸೆಲ್ ಡೀಸೆಲ್ ದರ 89.79 ರೂಪಾಯಿ ನಿಗದಿಯಾಗಿದೆ.

ಹೈದರಾಬಾದ್​ನಲ್ಲಿ ಲೀಟರ್ ಪೆಟ್ರೋಲ್ ದರ 108.20 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.62 ರೂಪಾಯಿ ನಿಗದಿಯಾಗಿದೆ. ಗುಜರಾತ್​ನ ಗಾಂಧಿನಗರದಲ್ಲಿ ಲೀಟರ್ ಪೆಟ್ರೋಲ್ ದರ 95.35 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 89.33 ರೂಪಾಯಿ ನಿಗದಿಯಾಗಿದೆ. ಕೇರಳದ ತಿರುವನಂತಪುರಂನಲ್ಲಿ ಲೀಟರ್ ಪೆಟ್ರೋಲ್​ಗೆ 106.36 ರೂಪಾಯಿ ಇದ್ದು, ಲೀಟರ್ ಡೀಸೆಲ್ ಬೆಲೆ 93.47 ರೂಪಾಯಿ ನಿಗದಿಯಾಗಿದೆ. ಲಕ್ನೋದಲ್ಲಿ ಲೀಟರ್ ಪೆಟ್ರೋಲ್ ದರ 95.28 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.80 ರೂಪಾಯಿ ನಿಗದಿಯಾಗಿದೆ.

ಶ್ರೀಗಂಗಾನಗರದಲ್ಲಿ ಲೀಟರ್ ಪೆಟ್ರೋಲ್​ಗೆ 114.01 ರೂಪಾಯಿ ಹಾಗೂ ಲೀಟರ್ ಡೀಸೆಲ್​ಗೆ 98.39 ರೂಪಾಯಿ ದಾಖಲಾಗಿದೆ. ಭೋಪಾಲ್​ನಲ್ಲಿ ಲೀಟರ್ ಪೆಟ್ರೋಲ್ ದರ 107.23 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 90.87 ರೂಪಾಯಿ ಇದೆ. ಗುವಾಹಟಿಯಲ್ಲಿ ಲೀಟರ್ ಪೆಟ್ರೋಲ್ ದರ 94.58 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.80 ರೂಪಾಯಿ ನಿಗದಿಯಾಗಿದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ. ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ಇದನ್ನೂ ಓದಿ: ವಿವಿಧ ನಗರದಲ್ಲಿ ಪೆಟ್ರೋಲ್ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/diesel-price-today.htm

Follow Us
TV9 Web
TV9 Web

TV9 Kannada

Read More
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ