AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Price Today: ಬೆಂಗಳೂರು ಸೇರಿದಂತೆ ಇತರ ಪ್ರಮುಖ ನಗರಗಳಲ್ಲಿ ಇಂದಿನ ಪೆಟ್ರೋಲ್, ಡೀಸೆಲ್​ ದರ ಎಷ್ಟಿದೆ?

Petrol Rate Today, 18-12-2021: ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 100.58 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 85.01 ರೂಪಾಯಿ ದಾಖಲಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇಂದು ಪೆಟ್ರೋಲ್ ದರ 95.41 ರೂಪಾಯಿಯಾಗಿದ್ದು, ಡೀಸೆಲೆ ಬೆಲೆ ಲೀಟರ್​ಗೆ 86.67 ರೂಪಾಯಿ ನಿಗದಿಯಾಗಿದೆ.

Petrol Price Today: ಬೆಂಗಳೂರು ಸೇರಿದಂತೆ ಇತರ ಪ್ರಮುಖ ನಗರಗಳಲ್ಲಿ ಇಂದಿನ ಪೆಟ್ರೋಲ್, ಡೀಸೆಲ್​ ದರ ಎಷ್ಟಿದೆ?
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Dec 18, 2021 | 8:05 AM

Share

Petrol Diesel Price Today| ದೆಹಲಿ: ಸರ್ಕಾರಿ ತೈಲ ಕಂಪನಿಗಳು ಇಂದು ಶನಿವಾರ (ಡಿಸೆಂಬರ್​ 18) ಪೆಟ್ರೋಲ್ ಮತ್ತು ಡೀಸೆಲ್ ಹೊಸ ದರಗಳನ್ನು ಬಿಡುಗಡೆ ಮಾಡಿವೆ. ಆ ಮೂಲಕ ಇಂದು ಸಹ ಇಂಧನ ದರದಲ್ಲಿ (Fuel Price) ಯಾವುದೇ ಬದಲಾವಣೆಗಳು ಕಂಡು ಬಂದಿಲ್ಲ. ಪ್ರಮುಖ ಎಲ್ಲಾ ಮಹಾ ನಗರಗಳಲ್ಲಿಯೂ ಸಹ ನವೆಂಬರ್​ 4 ರಿಂದ ಇಂಧನ ದರ ಸ್ಥಿರವಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಾತ್ರ ಈ ಮಧ್ಯೆ ಪೆಟ್ರೋಲ್​ ಬೆಲೆ (Petrol Price) ಲೀಟರ್​ಗೆ​ ಶೇ.30ರಿಂದ ಶೇ.19.40ಕ್ಕೆ ಇಳಿಸಿದೆ. ಆದರೆ ಡೀಸೆಲ್​ ಬೆಲೆಯಲ್ಲಿ ಯಾವುದೇ ಬದಲಾವಣೆ ಇಲ್ಲ. ಹೀಗೆ ಪ್ರಮುಖ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ (Diesel Price) ಎಷ್ಟಿದೆ ಎಂಬ ಮಾಹಿತಿ ಈ ಕೆಳಗಿನಂತಿದೆ ಪರಿಶೀಲಿಸಿ.

ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 100.58 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 85.01 ರೂಪಾಯಿ ದಾಖಲಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇಂದು ಪೆಟ್ರೋಲ್ ದರ 95.41 ರೂಪಾಯಿಯಾಗಿದ್ದು, ಡೀಸೆಲೆ ಬೆಲೆ ಲೀಟರ್​ಗೆ 86.67 ರೂಪಾಯಿ ನಿಗದಿಯಾಗಿದೆ. ವಾಣಿಜ್ಯ ನಗರಿ ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 109.98 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.14 ರೂಪಾಯಿ ಇದೆ. ಅದೇ ರೀತಿ ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 101.40 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 91.43 ರೂಪಾಯಿ ಇದೆ. ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ಬೆಲೆ 104.67 ರೂಪಾಯಿ ಹಾಗೂ ಲೀಟರ್ ಡೀಸೆಲ್ ಡೀಸೆಲ್ ದರ 89.79 ರೂಪಾಯಿ ನಿಗದಿಯಾಗಿದೆ.

ಹೈದರಾಬಾದ್​ನಲ್ಲಿ ಲೀಟರ್ ಪೆಟ್ರೋಲ್ ದರ 108.20 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.62 ರೂಪಾಯಿ ನಿಗದಿಯಾಗಿದೆ. ಗುಜರಾತ್​ನ ಗಾಂಧಿನಗರದಲ್ಲಿ ಲೀಟರ್ ಪೆಟ್ರೋಲ್ ದರ 95.35 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 89.33 ರೂಪಾಯಿ ನಿಗದಿಯಾಗಿದೆ. ಕೇರಳದ ತಿರುವನಂತಪುರಂನಲ್ಲಿ ಲೀಟರ್ ಪೆಟ್ರೋಲ್​ಗೆ 106.36 ರೂಪಾಯಿ ಇದ್ದು, ಲೀಟರ್ ಡೀಸೆಲ್ ಬೆಲೆ 93.47 ರೂಪಾಯಿ ನಿಗದಿಯಾಗಿದೆ. ಲಕ್ನೋದಲ್ಲಿ ಲೀಟರ್ ಪೆಟ್ರೋಲ್ ದರ 95.28 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.80 ರೂಪಾಯಿ ನಿಗದಿಯಾಗಿದೆ.

ಶ್ರೀಗಂಗಾನಗರದಲ್ಲಿ ಲೀಟರ್ ಪೆಟ್ರೋಲ್​ಗೆ 114.01 ರೂಪಾಯಿ ಹಾಗೂ ಲೀಟರ್ ಡೀಸೆಲ್​ಗೆ 98.39 ರೂಪಾಯಿ ದಾಖಲಾಗಿದೆ. ಭೋಪಾಲ್​ನಲ್ಲಿ ಲೀಟರ್ ಪೆಟ್ರೋಲ್ ದರ 107.23 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 90.87 ರೂಪಾಯಿ ಇದೆ. ಗುವಾಹಟಿಯಲ್ಲಿ ಲೀಟರ್ ಪೆಟ್ರೋಲ್ ದರ 94.58 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.80 ರೂಪಾಯಿ ನಿಗದಿಯಾಗಿದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ. ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ಇದನ್ನೂ ಓದಿ: ವಿವಿಧ ನಗರದಲ್ಲಿ ಪೆಟ್ರೋಲ್ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/diesel-price-today.htm

Published On - 8:04 am, Sat, 18 December 21

Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು