Petrol Price Today: ಕಚ್ಚಾ ತೈಲದ ಬೆಲೆ ಇಳಿಕೆ; ನಿಮ್ಮೂರಿನಲ್ಲಿ ಪೆಟ್ರೋಲ್, ಡೀಸೆಲ್​​ ದರ ಎಷ್ಟಿದೆ ನೋಡಿ

Petrol Rate Today, 21-12-2021: ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 100.58 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 85.01 ರೂಪಾಯಿ ದಾಖಲಾಗಿದೆ.  ವಾಣಿಜ್ಯ ನಗರಿ ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 109.98 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.14 ರೂಪಾಯಿ ಇದೆ.

Petrol Price Today: ಕಚ್ಚಾ ತೈಲದ ಬೆಲೆ ಇಳಿಕೆ; ನಿಮ್ಮೂರಿನಲ್ಲಿ ಪೆಟ್ರೋಲ್, ಡೀಸೆಲ್​​ ದರ ಎಷ್ಟಿದೆ ನೋಡಿ
ಸಾಂದರ್ಭಿಕ ಚಿತ್ರ
Edited By:

Updated on: Dec 21, 2021 | 7:51 AM

Petrol Diesel Price Today | ಇಂದು (ಡಿಸೆಂಬರ್​ 21) ಕೂಡ ಪೆಟ್ರೋಲ್​-ಡೀಸೆಲ್​ ಬೆಲೆ (Diesel Price) ಸ್ಥಿರವಾಗಿದ್ದು, ಯಾವುದೇ ಪ್ರಮುಖ ನಗರಗಳಲ್ಲೂ ಬೆಲೆಯಲ್ಲಿ ಬದಲಾವಣೆಯಾಗಿಲ್ಲ. ಆದರೆ ಅಂತರಾಷ್ಟೀಯ ಮಾರುಕಟ್ಟೆಯಲ್ಲಿ ಇಂದು ಕಚ್ಚಾ ತೈಲದ ಬೆಲೆ ಇಳಿಕೆಯ ಹಾದಿ ಹಿಡಿದಿದೆ. ಕಳೆದ ನವೆಂಬರ್​ 4ರಂದು  ಕೇಂದ್ರ ಸರ್ಕಾರ ಪೆಟ್ರೋಲ್ (Petrol Price)​, ಡೀಸೆಲ್​​ ಮೇಲಿನ ಅಬಕಾರಿ ಸುಂಕ ಕಡಿಮೆ ಮಾಡಿದೆ. ಅಂದಿನಿಂದಲೂ ಭಾರತದ ತೈಲ ಕಂಪನಿಗಳು ಇಂಧನ ಬೆಲೆಯಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಆದರೆ ಕೆಲವೇ ದಿನಗಳ ಹಿಂದೆ ದೆಹಲಿಯ ಆಪ್​ ಸರ್ಕಾರ ಪೆಟ್ರೋಲ್​ ಮೇಲಿನ ವ್ಯಾಟ್​ (VAT-ಮೌಲ್ಯವರ್ಧಿತ ತೆರಿಗೆ)ನ್ನು ಶೇ.30ರಿಂದ ಶೇ.19.40ಕ್ಕೆ ಇಳಿಸಿದೆ. ಹಾಗಾಗಿ ಅಲ್ಲಿ ಪೆಟ್ರೋಲ್​ ಬೆಲೆ ಪ್ರತಿ ಲೀಟರ್​ಗೆ 8 ರೂ.ಕಡಿಮೆಯಾಗಿದೆ. ಆದರೆ ಡೀಸೆಲ್​ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲೀಟರ್​ ಪೆಟ್ರೋಲ್​ ದರ 95 ರೂಪಾಯಿ ಹಾಗೂ ಲೀಟರ್​ ಡೀಸೆಲ್​ ದರ 86.67 ರೂಪಾಯಿ ದಾಖಲಾಗಿದೆ. ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 100.58 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 85.01 ರೂಪಾಯಿ ದಾಖಲಾಗಿದೆ.  ವಾಣಿಜ್ಯ ನಗರಿ ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 109.98 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.14 ರೂಪಾಯಿ ಇದೆ. ಅದೇ ರೀತಿ ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 101.40 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 91.43 ರೂಪಾಯಿ ಇದೆ. ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ಬೆಲೆ 104.67 ರೂಪಾಯಿ ಹಾಗೂ ಲೀಟರ್ ಡೀಸೆಲ್ ಡೀಸೆಲ್ ದರ 89.79 ರೂಪಾಯಿ ನಿಗದಿಯಾಗಿದೆ.

ಹೈದರಾಬಾದ್​ನಲ್ಲಿ ಲೀಟರ್ ಪೆಟ್ರೋಲ್ ದರ 108.20 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.62 ರೂಪಾಯಿ ನಿಗದಿಯಾಗಿದೆ. ಗುಜರಾತ್​ನ ಗಾಂಧಿನಗರದಲ್ಲಿ ಲೀಟರ್ ಪೆಟ್ರೋಲ್ ದರ 95.35 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 89.33 ರೂಪಾಯಿ ನಿಗದಿಯಾಗಿದೆ. ಕೇರಳದ ತಿರುವನಂತಪುರಂನಲ್ಲಿ ಲೀಟರ್ ಪೆಟ್ರೋಲ್​ಗೆ 106.36 ರೂಪಾಯಿ ಇದ್ದು, ಲೀಟರ್ ಡೀಸೆಲ್ ಬೆಲೆ 93.47 ರೂಪಾಯಿ ನಿಗದಿಯಾಗಿದೆ. ಲಕ್ನೋದಲ್ಲಿ ಲೀಟರ್ ಪೆಟ್ರೋಲ್ ದರ 95.28 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.80 ರೂಪಾಯಿ ನಿಗದಿಯಾಗಿದೆ.

ಶ್ರೀಗಂಗಾನಗರದಲ್ಲಿ ಲೀಟರ್ ಪೆಟ್ರೋಲ್​ಗೆ 114.01 ರೂಪಾಯಿ ಹಾಗೂ ಲೀಟರ್ ಡೀಸೆಲ್​ಗೆ 98.39 ರೂಪಾಯಿ ದಾಖಲಾಗಿದೆ. ಭೋಪಾಲ್​ನಲ್ಲಿ ಲೀಟರ್ ಪೆಟ್ರೋಲ್ ದರ 107.23 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 90.87 ರೂಪಾಯಿ ಇದೆ. ಗುವಾಹಟಿಯಲ್ಲಿ ಲೀಟರ್ ಪೆಟ್ರೋಲ್ ದರ 94.58 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.80 ರೂಪಾಯಿ ನಿಗದಿಯಾಗಿದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ
ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ. ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ಇದನ್ನೂ ಓದಿ:
ವಿವಿಧ ನಗರದಲ್ಲಿ ಪೆಟ್ರೋಲ್ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ:
https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ:
https://tv9kannada.com/business/diesel-price-today.htm

 

Web contact

TV9 Kannada

Read More
Follow Us