Petrol Rate: ಕಚ್ಚಾ ತೈಲ ಬೆಲೆಯಲ್ಲಿ ಮುಂದುವರಿದ ಏರಿಳಿತ; ನಿಮ್ಮೂರಿನಲ್ಲಿ ಇಂಧನದ ಬೆಲೆ ಎಷ್ಟಿದೆ ಪರಿಶೀಲಿಸಿ

Petrol Diesel Price Today, 27-12-2021: ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 100.58 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 85.01 ರೂಪಾಯಿ ದಾಖಲಾಗಿದೆ.  ವಾಣಿಜ್ಯ ನಗರಿ ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 109.98 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.14 ರೂಪಾಯಿ ಇದೆ.

Petrol Rate: ಕಚ್ಚಾ ತೈಲ ಬೆಲೆಯಲ್ಲಿ ಮುಂದುವರಿದ ಏರಿಳಿತ; ನಿಮ್ಮೂರಿನಲ್ಲಿ ಇಂಧನದ ಬೆಲೆ ಎಷ್ಟಿದೆ ಪರಿಶೀಲಿಸಿ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: preethi shettigar

Updated on: Dec 27, 2021 | 7:55 AM

Petrol Diesel Price Today | ಇಂದು (ಡಿಸೆಂಬರ್​ 27) ಕೂಡ ಪೆಟ್ರೋಲ್​-ಡೀಸೆಲ್​ ಬೆಲೆ (Diesel Price) ಸ್ಥಿರವಾಗಿದ್ದು, ಯಾವುದೇ ಪ್ರಮುಖ ನಗರಗಳಲ್ಲೂ ಬೆಲೆಯಲ್ಲಿ ಬದಲಾವಣೆಯಾಗಿಲ್ಲ. ಆದರೆ ಅಂತರಾಷ್ಟೀಯ ಮಾರುಕಟ್ಟೆಯಲ್ಲಿ ಇಂದು ಕಚ್ಚಾ ತೈಲದ ಬೆಲೆ ಇಳಿಕೆಯ ಹಾದಿ ಹಿಡಿದಿದೆ. ಕಳೆದ ನವೆಂಬರ್​ 4ರಂದು  ಕೇಂದ್ರ ಸರ್ಕಾರ ಪೆಟ್ರೋಲ್ (Petrol Price)​, ಡೀಸೆಲ್​​ ಮೇಲಿನ ಅಬಕಾರಿ ಸುಂಕ ಕಡಿಮೆ ಮಾಡಿದೆ. ಅಂದಿನಿಂದಲೂ ಭಾರತದ ತೈಲ ಕಂಪನಿಗಳು ಇಂಧನ ಬೆಲೆಯಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಆದರೆ ಕೆಲವೇ ದಿನಗಳ ಹಿಂದೆ ದೆಹಲಿಯ ಆಪ್​ ಸರ್ಕಾರ ಪೆಟ್ರೋಲ್​ ಮೇಲಿನ ವ್ಯಾಟ್​ (VAT-ಮೌಲ್ಯವರ್ಧಿತ ತೆರಿಗೆ)ನ್ನು ಶೇ.30ರಿಂದ ಶೇ.19.40ಕ್ಕೆ ಇಳಿಸಿದೆ. ಹಾಗಾಗಿ ಅಲ್ಲಿ ಪೆಟ್ರೋಲ್​ ಬೆಲೆ ಪ್ರತಿ ಲೀಟರ್​ಗೆ 8 ರೂ.ಕಡಿಮೆಯಾಗಿದೆ. ಆದರೆ ಡೀಸೆಲ್​ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲೀಟರ್​ ಪೆಟ್ರೋಲ್​ ದರ 95.41 ರೂಪಾಯಿ ಹಾಗೂ ಲೀಟರ್​ ಡೀಸೆಲ್​ ದರ 86.67 ರೂಪಾಯಿ ದಾಖಲಾಗಿದೆ. ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 100.58 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 85.01 ರೂಪಾಯಿ ದಾಖಲಾಗಿದೆ.  ವಾಣಿಜ್ಯ ನಗರಿ ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 109.98 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.14 ರೂಪಾಯಿ ಇದೆ. ಅದೇ ರೀತಿ ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 101.40 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 91.43 ರೂಪಾಯಿ ಇದೆ. ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ಬೆಲೆ 104.67 ರೂಪಾಯಿ ಹಾಗೂ ಲೀಟರ್ ಡೀಸೆಲ್ ಡೀಸೆಲ್ ದರ 89.79 ರೂಪಾಯಿ ನಿಗದಿಯಾಗಿದೆ.

ಹೈದರಾಬಾದ್​ನಲ್ಲಿ ಲೀಟರ್ ಪೆಟ್ರೋಲ್ ದರ 108.20 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.62 ರೂಪಾಯಿ ನಿಗದಿಯಾಗಿದೆ. ಗುಜರಾತ್​ನ ಗಾಂಧಿನಗರದಲ್ಲಿ ಲೀಟರ್ ಪೆಟ್ರೋಲ್ ದರ 95.35 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 89.33 ರೂಪಾಯಿ ನಿಗದಿಯಾಗಿದೆ. ಕೇರಳದ ತಿರುವನಂತಪುರಂನಲ್ಲಿ ಲೀಟರ್ ಪೆಟ್ರೋಲ್​ಗೆ 106.36 ರೂಪಾಯಿ ಇದ್ದು, ಲೀಟರ್ ಡೀಸೆಲ್ ಬೆಲೆ 93.47 ರೂಪಾಯಿ ನಿಗದಿಯಾಗಿದೆ. ಲಕ್ನೋದಲ್ಲಿ ಲೀಟರ್ ಪೆಟ್ರೋಲ್ ದರ 95.28 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.80 ರೂಪಾಯಿ ನಿಗದಿಯಾಗಿದೆ.

ಶ್ರೀಗಂಗಾನಗರದಲ್ಲಿ ಲೀಟರ್ ಪೆಟ್ರೋಲ್​ಗೆ 114.01 ರೂಪಾಯಿ ಹಾಗೂ ಲೀಟರ್ ಡೀಸೆಲ್​ಗೆ 98.39 ರೂಪಾಯಿ ದಾಖಲಾಗಿದೆ. ಭೋಪಾಲ್​ನಲ್ಲಿ ಲೀಟರ್ ಪೆಟ್ರೋಲ್ ದರ 107.23 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 90.87 ರೂಪಾಯಿ ಇದೆ. ಗುವಾಹಟಿಯಲ್ಲಿ ಲೀಟರ್ ಪೆಟ್ರೋಲ್ ದರ 94.58 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.80 ರೂಪಾಯಿ ನಿಗದಿಯಾಗಿದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ. ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ಇದನ್ನೂ ಓದಿ:

ವಿವಿಧ ನಗರದಲ್ಲಿ ಪೆಟ್ರೋಲ್ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/diesel-price-today.htm

ಹಾರ್ದಿಕ್ ಪಾಂಡ್ಯ ತೂಫಾನ್​ಗೆ ಎದುರಾಳಿ ತಂಡ ತತ್ತರ
ಹಾರ್ದಿಕ್ ಪಾಂಡ್ಯ ತೂಫಾನ್​ಗೆ ಎದುರಾಳಿ ತಂಡ ತತ್ತರ
ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ