AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Price Today: ಇಂದು ಲೀಟರ್​ ಪೆಟ್ರೋಲ್​, ಡೀಸೆಲ್​ ಬೆಲೆ ಎಷ್ಟಿದೆ ಗೊತ್ತಾ?

Petrol Rate Today, 16-11-2021: ಸತತ 13 ದಿನಗಳ ಕಾಲ ಪೆಟ್ರೋಲ್​, ಡೀಸೆಲ್​ ಬೆಲೆ ಸ್ಥಿರತೆಯನ್ನು ಕಾಯ್ದುಕೊಂಡಿದೆ. ಇಂದು ಸಹ ಇಂಧನ ದರದಲ್ಲಿ ಯಾವುದೇ ಏರಿಳಿತಗಳಿಲ್ಲ.

Petrol Price Today: ಇಂದು ಲೀಟರ್​ ಪೆಟ್ರೋಲ್​, ಡೀಸೆಲ್​ ಬೆಲೆ ಎಷ್ಟಿದೆ ಗೊತ್ತಾ?
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Nov 16, 2021 | 8:03 AM

Share

Petrol Diesel Price Today | ದೆಹಲಿ: ಸತತ 13 ದಿನಗಳ ಕಾಲ ಪೆಟ್ರೋಲ್, ಡೀಸೆಲ್ ಬೆಲೆ ಸ್ಥಿರತೆಯನ್ನು ಕಾಯ್ದುಕೊಂಡಿದೆ. ಅದೇ ರೀತಿ ಇಂದು ಮಂಗಳವಾರ (ನವೆಂಬರ್ 16)ರಂದು ಸಹ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ (Diesel Price) ಯಾವುದೇ ಏರಿಳಿತಗಳಿಲ್ಲ. ದೀಪಾವಳಿಯ ಮುನ್ನಾದಿನದಂದು ಕೇಂದ್ರವು ಇಂಧನಗಳ (Fuel Price) ಮೇಲಿನ ಅಬಕಾರಿ ಸುಂಕ ಕಡಿತವನ್ನು ಘೋಷಿಸಿತು. ಆ ಬಳಿಕ ದೇಶಾದ್ಯಂತ ಪೆಟ್ರೋಲ್ (Petrol Price), ಡೀಸೆಲ್ ಬೆಲೆಯಲ್ಲಿ ಇಳಿಕೆ ಆಗಿತ್ತು. ಆ ನಂತ ಸತತ 13 ದಿನಗಳವರೆಗೆ ಪೆಟ್ರೋಲ್, ಡೀಸೆಲ್ ಬೆಲೆ ಸ್ಥಿರತೆಯನ್ನು ಕಾಯ್ದುಕೊಂಡಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲೀಟರ್ ಪೆಟ್ರೋಲ್​ ದರ (Delhi Petrol Price) 103.97 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.67 ರೂಪಾಯಿ ನಿಗದಿಯಾಗಿದೆ. ವಾಣಿಜ್ಯ ನಗರಿ ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ (Mumbai Petrol Price) 109.98 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.14 ರೂಪಾಯಿ ದಾಖಲಾಗಿದೆ. ಸತತ 13 ದಿನಗಳಿಂದ ಇದೇ ದರದಲ್ಲಿ ಗ್ರಾಹಕರು ಖರೀದಿಸುತ್ತಿದ್ದಾರೆ.

ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 101.40 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 91.43 ರೂಪಾಯಿ ದಾಖಲಾಗಿದೆ. ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ದರ 104.67 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 101.56 ರೂಪಾಯಿ ನಿಗದಿಯಾಗಿದೆ. ಇನ್ನು, ಭೋಪಾಲ್​ನಲ್ಲಿ ಲೀಟರ್ ಪೆಟ್ರೋಲ್ ದರ 107.23 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 90.87 ರೂಪಾಯಿ ದಾಖಲಾಗಿದೆ.

ಹೈದರಾಬಾದ್​ನಲ್ಲಿ ಲೀಟರ್ ಪೆಟ್ರೋಲ್ ದರ 108.20 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.62 ರೂಪಾಯಿ ನಿಗದಿಯಾಗಿದೆ. ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 100.58 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 85.01 ರೂಪಾಯಿ ನಿಗದಿಯಾಗಿದೆ. ಗುಹಾವಟಿಯಲ್ಲಿ ಲೀಟರ್ ಪೆಟ್ರೋಲ್ ದರ 94.58 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 81.29 ರೂಪಾಯಿ ನಿಗದಿಯಾಗಿದೆ. ಲಕ್ನೋದಲ್ಲಿ ಲೀಟರ್ ಪೆಟ್ರೋಲ್ ಬೆಲೆ 95.28 ರೂಪಾಯಿ ಇದ್ದರೆ, ಲೀಟರ್ ಡೀಸೆಲ್ ದರ 86.80 ರೂಪಾಯಿ ದಾಖಲಾಗಿದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ. ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ಇದನ್ನೂ ಓದಿ:

ವಿವಿಧ ನಗರದಲ್ಲಿ ಪೆಟ್ರೋಲ್ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/diesel-price-today.htm

Published On - 7:59 am, Tue, 16 November 21

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ