AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Price Today: ಇಂದು ಸಹ ಪೆಟ್ರೋಲ್​ ಡೀಸೆಲ್​ ಬೆಲೆಯಲ್ಲಿ ಯಾವುದೇ ಏರಿಳಿತಗಳಿಲ್ಲ!

Petrol Rate Today, 17-11-2021: ಇಂದು ಸಹ ಪೆಟ್ರೋಲ್​ ಡೀಸೆಲ್​ ಬೆಲೆಯಲ್ಲಿ ಯಾವುದೇ ಬದಲಾವಣೆಗಳಾಗಿಲ್ಲ. ಪ್ರಮುಖ ನಗರಗಳಲ್ಲಿ ಲೀಟರ್​ ಪೆಟ್ರೋಲ್​ಗೆ ಎಷ್ಟಿದೆ? ಎಂಬ ಮಾಹಿತಿ ಈ ಕೆಳಗಿನಂತಿದೆ ಪರಿಶೀಲಿಸಿ.

Petrol Price Today: ಇಂದು ಸಹ ಪೆಟ್ರೋಲ್​ ಡೀಸೆಲ್​ ಬೆಲೆಯಲ್ಲಿ ಯಾವುದೇ ಏರಿಳಿತಗಳಿಲ್ಲ!
ಸಾಂದರ್ಭಿಕ ಚಿತ್ರ
Follow us
TV9 Web
| Updated By: shruti hegde

Updated on:Nov 17, 2021 | 7:39 AM

Petrol Diesel Price Today | ದೆಹಲಿ: ಸತತ 13ನೇ ದಿನವೂ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಯಾವುದೇ ಏರಿಳಿತ ಕಂಡು ಬಂದಿಲ್ಲ. ಪ್ರಮುಖ ಎಲ್ಲಾ ಮಹಾ ನಗರಗಳಲ್ಲಿಯೂ ಸಹ ಇಂಧನ ದರ ಇಂದು ಬುಧವಾರ (ನವೆಂಬರ್ 17) ಸ್ಥಿರತೆಯನ್ನು ಕಾಯ್ದುಕೊಂಡಿದೆ. ದೀಪಾವಳಿಯ ಹಿಂದಿನ ದಿನ ಪೆಟ್ರೋಲ್ (Petrol Price), ಡೀಸೆಲ್ ಬೆಲೆಯಲ್ಲಿ (Diesel Price) ಇಳಿಕೆಯಾದ ಬಳಿಕ ಯಾವುದೇ ನಗರಗಳಲ್ಲಿ ಇಂಧನ ದರದಲ್ಲಿ (Fuel Price) ಏರಿಳಿತಗಳಾಗಿಲ್ಲ. ಪ್ರಮುಖ ಎಲ್ಲಾ ಪಟ್ಟಣಗಳಲ್ಲಿ ಯಥಾಸ್ಥಿತಿಯಲ್ಲಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ (Delhi Petrol Price) ಲೀಟರ್ ಪೆಟ್ರೋಲ್ ದರ 103.97 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.67 ರೂಪಾಯಿ ನಿಗದಿಯಾಗಿದೆ. ವಾಣಿಜ್ಯ ನಗರಿ ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ (Mumbai Petrol Price) 109.98 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.14 ರೂಪಾಯಿ ನಿಗದಿಯಾಗಿದೆ. ಇನ್ನು ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ಬೆಲೆ 101.40 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 91.43 ರೂಪಾಯಿ ನಿಗದಿಯಾಗಿದೆ.

ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ದರ 104.67 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 89.79 ರೂಪಾಯಿ ಇದೆ. ಭೋಪಾಲ್​ನಲ್ಲಿ ಲೀಟರ್ ಪೆಟ್ರೋಲ್ ದರ 107.23 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 90.87 ರೂಪಾಯಿ ನಿಗದಿಯಾಗಿದೆ. ಇನ್ನು, ಹೈದರಾಬಾದ್​ನಲ್ಲಿ ಲೀಟರ್ ಪೆಟ್ರೋಲ್ ದರ 108.20 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.62 ರೂಪಾಯಿ ನಿಗದಿಯಾಗಿದೆ.

ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 100.58 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 85.01 ರೂಪಾಯಿ ಇದೆ. ಗುಹಾವಟಿಯಲ್ಲಿ ಲೀಟರ್ ಪೆಟ್ರೋಲ್ ದರ 94.58 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 81.29 ರೂಪಾಯಿ ನಿಗದಿಯಾಗಿದೆ. ಲಕ್ನೋದಲ್ಲಿ ಲೀಟರ್ ಪೆಟ್ರೋಲ್ ದರ 95.28 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.80 ರೂಪಾಯಿ ನಿಗದಿಯಾಗಿದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ. ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ಇದನ್ನೂ ಓದಿ:

ವಿವಿಧ ನಗರದಲ್ಲಿ ಪೆಟ್ರೋಲ್ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/diesel-price-today.htm

Published On - 7:36 am, Wed, 17 November 21

ಇಡಿ ದಾಳಿ ಅಂತ್ಯ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಂಸದ ತುಕಾರಾಂ
ಇಡಿ ದಾಳಿ ಅಂತ್ಯ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಂಸದ ತುಕಾರಾಂ
ನಿಧಿಮಾ ಪಾತ್ರದ ಜೊತೆ ಹೋಲಿಕೆ: ‘ಕರ್ಣ’ ಸೀರಿಯಲ್ ನಟಿ ಭವ್ಯಾಗೆ ಸಖತ್ ಖುಷಿ
ನಿಧಿಮಾ ಪಾತ್ರದ ಜೊತೆ ಹೋಲಿಕೆ: ‘ಕರ್ಣ’ ಸೀರಿಯಲ್ ನಟಿ ಭವ್ಯಾಗೆ ಸಖತ್ ಖುಷಿ
10 ಜನರ ಡೆತ್​ ಆಡಿಟ್ ಬಹಿರಂಗ: ಈಗಿರುವ ಕೊವಿಡ್ ಸೌಮ್ಯ ಸ್ವಭಾವದ್ದು: ಸಚಿವ
10 ಜನರ ಡೆತ್​ ಆಡಿಟ್ ಬಹಿರಂಗ: ಈಗಿರುವ ಕೊವಿಡ್ ಸೌಮ್ಯ ಸ್ವಭಾವದ್ದು: ಸಚಿವ
ಕಾರ್ತಿಕ್ ಮಹೇಶ್​ಗೆ ನಾನು ಜೋಡಿ ಅಲ್ಲ: ಗಾಸಿಪ್​ಗಳಿಗೆ ತೆರೆ ಎಳೆದ ನಮ್ರತಾ
ಕಾರ್ತಿಕ್ ಮಹೇಶ್​ಗೆ ನಾನು ಜೋಡಿ ಅಲ್ಲ: ಗಾಸಿಪ್​ಗಳಿಗೆ ತೆರೆ ಎಳೆದ ನಮ್ರತಾ
ಕಾಮಗಾರಿಯನ್ನು ಸ್ಥಗಿತಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ: ಸೋಮಣ್ಣ
ಕಾಮಗಾರಿಯನ್ನು ಸ್ಥಗಿತಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ: ಸೋಮಣ್ಣ
ಬೆಂಗಳೂರು ನಗರದಲ್ಲೂ ನಿನ್ನೆ ರಾತ್ರಿ ಮತ್ತು ಇವತ್ತು ಭಾರೀ ಮಳೆ
ಬೆಂಗಳೂರು ನಗರದಲ್ಲೂ ನಿನ್ನೆ ರಾತ್ರಿ ಮತ್ತು ಇವತ್ತು ಭಾರೀ ಮಳೆ
ಹಿತಕರವಲ್ಲದ ವಿಷಯಗಳಿಗೆ ಸುದ್ದಿಯಾಗುವ ಪ್ರತಿಭಾವಂತ ಗಾಯಕಿ ಮಂಗ್ಲಿ
ಹಿತಕರವಲ್ಲದ ವಿಷಯಗಳಿಗೆ ಸುದ್ದಿಯಾಗುವ ಪ್ರತಿಭಾವಂತ ಗಾಯಕಿ ಮಂಗ್ಲಿ
‘ದೂರ ತೀರ ಯಾನ’ಕ್ಕೆ ನಟ ನವೀನ್ ಶಂಕರ್ ಶುಭ ಹಾರೈಕೆ
‘ದೂರ ತೀರ ಯಾನ’ಕ್ಕೆ ನಟ ನವೀನ್ ಶಂಕರ್ ಶುಭ ಹಾರೈಕೆ
ಹೈಕಮಾಂಡ್-ಸರ್ಕಾರ ಮರುಸಮೀಕ್ಷೆಯ ನಾಟಕ ಮಾಡುತ್ತಿವೆ: ಶ್ರೀರಾಮುಲು
ಹೈಕಮಾಂಡ್-ಸರ್ಕಾರ ಮರುಸಮೀಕ್ಷೆಯ ನಾಟಕ ಮಾಡುತ್ತಿವೆ: ಶ್ರೀರಾಮುಲು
RCB ಟೀಮ್ ಖರೀದಿ ಮಾಡ್ತಾರಾ ಡಿಕೆ ಶಿವಕುಮಾರ್? ಡಿಸಿಎಂ ಹೇಳಿದ್ದಿಷ್ಟು..!
RCB ಟೀಮ್ ಖರೀದಿ ಮಾಡ್ತಾರಾ ಡಿಕೆ ಶಿವಕುಮಾರ್? ಡಿಸಿಎಂ ಹೇಳಿದ್ದಿಷ್ಟು..!