Petrol Price Today: ಸತತ ಹದಿನಾರು ದಿನಗಳಿಂದ ಪೆಟ್ರೋಲ್,​ ಡೀಸೆಲ್ ದರ ಸ್ಥಿರ!

Petrol Rate Today, 20-11-2021: ಸತತ 16 ದಿನಗಳ ಕಾಲ ಪೆಟ್ರೋಲ್, ಡೀಸೆಲ್ ಬೆಲೆ ಸ್ಥಿರವಾಗಿದ್ದು, ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 100.58 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 85.01 ರೂಪಾಯಿ ನಿಗದಿಯಾಗಿದೆ.

Petrol Price Today: ಸತತ ಹದಿನಾರು ದಿನಗಳಿಂದ ಪೆಟ್ರೋಲ್,​ ಡೀಸೆಲ್ ದರ ಸ್ಥಿರ!
ಸಾಂದರ್ಭಿಕ ಚಿತ್ರ
Edited By:

Updated on: Nov 20, 2021 | 7:48 AM

Petrol Diesel Price Today | ದೆಹಲಿ: ಕಳೆದ 16 ದಿನಗಳ ಹಿಂದೆ ಇಂಧನ ದರದಲ್ಲಿ (Fuel Price) ಇಳಿಕೆಯಾದ ನಂತರದಲ್ಲಿ ಇಲ್ಲಿಯವರೆಗೆ ಯಾವುದೇ ಬದಲಾವಣೆಗಳಾಗಿಲ್ಲ. ಸತತ 16 ದಿನಗಳ ಕಾಲ ಪೆಟ್ರೋಲ್ (Petrol Pride), ಡೀಸೆಲ್ ಬೆಲೆ (Diesel Price) ಸ್ಥಿರವಾಗಿದೆ. ನಿಮ್ಮೂರಿನಲ್ಲಿ ಲೀಟರ್ ಪೆಟ್ರೋಲ್ ಬೆಲೆ ಎಷ್ಟಿದೆ? ಎಂಬ ಪ್ರಶ್ನೆ ನಿಮ್ಮಲ್ಲಿದ್ದರೆ ಅದಕ್ಕೆ ಉತ್ತರ ಇಲ್ಲಿದೆ. ರಾಷ್ಟ್ರ ರಾಜಧಾನಿಯಲ್ಲಿ ಇಂದು (ನವೆಂಬರ್ 20) ಲೀಟರ್ ಪೆಟ್ರೋಲ್ ದರ (Delhi Petrol Price) 103.97 ರೂಪಾಯಿಗೆ ಮಾರಾಟವಾಗುತ್ತಿದೆ. ಲೀಟರ್ ಡೀಸೆಲ್ಗೆ 86.67 ರೂಪಾಯಿ ಕೊಟ್ಟು ಗ್ರಾಹಕರು ಕೊಳ್ಳುತ್ತಿದ್ದಾರೆ. ವಾಣಿಜ್ಯ ನಗರಿ ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ (Mumbai petrol Price) 109.98 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.14 ರೂಪಾಯಿ ನಿಗದಿಯಾಗಿದೆ.

ಬೆಲೆಗಳಲ್ಲಿ ಇಳಿಕೆಯ ಹೊರತಾಗಿಯೂ ಹಲವೆಡೆ ಲೀಟರ್ ಪೆಟ್ರೋಲ್ ದರ 100ರ ಗಡಿ ದಾಟಿದೆ. ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 101.40 ರೂಪಾಯಿ ಇದ್ದರೆ, ಲೀಟರ್ ಡೀಸೆಲ್ ಬೆಲೆ 91.43 ರೂಪಾಯಿ ಇದೆ. ಇನ್ನು, ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ದರ 104.67 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 89.79 ರೂಪಾಯಿ ನಿಗದಿಯಾಗಿದೆ.

ಭೋಪಾಲ್ನಲ್ಲಿ ಲೀಟರ್ ಪೆಟ್ರೋಲ್ ದರ 107.23 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 90.87 ರೂಪಾಯಿ ನಿಗದಿಯಾಗಿದೆ. ಹೈದರಾಬಾದ್ನಲ್ಲಿ ಲೀಟರ್ ಪೆಟ್ರೋಲ್ ದರ 108.20 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.62 ರೂಪಾಯಿ ನಿಗದಿಯಾಗಿದೆ. ಇನ್ನು, ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 100.58 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 85.01 ರೂಪಾಯಿ ನಿಗದಿಯಾಗಿದೆ.

ಗುಹಾವಟಿಯಲ್ಲಿ ಲೀಟರ್ ಪೆಟ್ರೋಲ್ ದರ 94.58 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 81.29 ರೂಪಾಯಿ ನಿಗದಿಯಾಗಿದೆ. ಲಕ್ನೋದಲ್ಲಿ ಲೀಟರ್ ಪೆಟ್ರೋಲ್ ದರ 95.28 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.80 ರೂಪಾಯಿ ನಿಗದಿಯಾಗಿದೆ. ತಿರುವನಂತಪುರಂನಲ್ಲಿ ಲೀಟರ್ ಪೆಟ್ರೋಲ್ ದರ 106.36 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 93.47 ರೂಪಾಯಿ ನಿಗದಿಯಾಗಿದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ
ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ. ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ಇದನ್ನೂ ಓದಿ:

ವಿವಿಧ ನಗರದಲ್ಲಿ ಪೆಟ್ರೋಲ್ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ:
https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ:
https://tv9kannada.com/business/diesel-price-today.htm

TV9 Web

TV9 Kannada

Read More
Loading...
Unable to load recommendations.
Follow Us