AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Price Today: ಸತತ ಹದಿನೇಳನೇ ದಿನವೂ ಪೆಟ್ರೋಲ್​, ಡೀಸೆಲ್​ ಬೆಲೆ ಸ್ಥಿರ!

Petrol Rate Today, 21-11-2021: ಸತತ 17 ದಿನಗಳ ಕಾಲ ಪೆಟ್ರೋಲ್​, ಡೀಸೆಲ್​ ಬೆಲೆ ಸ್ಥಿರವಾಗಿದೆ. ಪ್ರಮುಖ ನಗರಗಳಲ್ಲಿ ಇಂಧನ ದರ ಎಷ್ಟಿದೆ ಎಂಬ ಮಾಹಿತಿ ಈ ಕೆಳಗಿನಂತಿದೆ ಪರಿಶೀಲಿಸಿ.

Petrol Price Today: ಸತತ ಹದಿನೇಳನೇ ದಿನವೂ ಪೆಟ್ರೋಲ್​, ಡೀಸೆಲ್​ ಬೆಲೆ ಸ್ಥಿರ!
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Nov 21, 2021 | 7:58 AM

Share

Petrol Diesel Price Today | ದೆಹಲಿ: ಈ ನವೆಂಬರ್​ ತಿಂಗಳಿನ ಪ್ರಾರಂಭದಿಂದ ಇಲ್ಲಿಯವರೆಗೆ ಗಮನಿಸಿದರೆ ಹೆಚ್ಚು ದಿನಗಳ ಕಾಲ ಪೆಟ್ರೋಲ್, ಡೀಸೆಲ್ ಬೆಲೆ ಸ್ಥಿರವಾಗಿಯೇ ಉಳಿದಿದೆ. ಸತತ 17 ದಿನಗಳ ಕಾಲ ಇಂಧನ ದರ (Fuel Price) ಯಥಾಸ್ಥಿತಿಯಲ್ಲಿದೆ. ಇಂದು ಸಹ ಭಾನುವಾರ (ನವೆಂಬರ್ 21) ಪೆಟ್ರೋಲ್ (Petrol Price), ಡೀಸೆಲ್ ಬೆಲೆ ಸ್ಥಿರತೆಯನ್ನು ಕಾಯ್ದುಕೊಂಡಿದೆ, ಬೆಲೆಗಳಲ್ಲಿ ಯಾವುದೇ ಏರಿಳಿತ ಕಂಡು ಬಂದಿಲ್ಲ. ಆ ಬಳಿಕ ರಾಷ್ಟ್ರ ರಾಜಧಾನಿಯಲ್ಲಿ ಇಂದು ಲೀಟರ್ ಪೆಟ್ರೋಲ್ 103.97 ರೂಪಾಯಿ ಹಾಗೂ ಲೀಟರ್ ಡೀಸೆಲ್ ಬೆಲೆ (Diesel Price) 86.67 ರೂಪಾಯಿ ನಿಗದಿಯಾಗಿದೆ. ಪ್ರಮುಖ ನಗರಗಳಲ್ಲಿ ಇಂಧನ ದರ ಎಷ್ಟಿದೆ ಎಂಬ ಮಾಹಿತಿ ಈ ಕೆಳಗಿನಂತಿದೆ ಪರಿಶೀಲಿಸಿ.

ವಾಣಿಜ್ಯ ನಗರಿ ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 109.98 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.14 ರೂಪಾಯಿ ಇದೆ. ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 101.40 ರೂಪಾಯಿ ಹಾಗೂ ಲೀಟರ್ ಡೀಸೆಲ್ ಬೆಲೆ 91.43 ರೂಪಾಯಿ ಇದೆ. ಇನ್ನು, ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ದರ 104.67 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 89.79 ರೂಪಾಯಿ ದಾಖಲಾಗಿದೆ.

ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 100.58 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 85.01 ರೂಪಾಯಿ ನಿಗದಿಯಾಗಿದೆ.  ಹೈದರಾಬಾದ್​ನಲ್ಲಿ ಲೀಟರ್ ಪೆಟ್ರೋಲ್ ದರ 108.20 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.62 ರೂಪಾಯಿ ನಿಗದಿಯಾಗಿದೆ. ಇನ್ನು. ಭೋಪಾಲ್​ನಲ್ಲಿ ಲೀಟರ್ ಪೆಟ್ರೋಲ್ ದರ 107.23 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 90.87 ರೂಪಾಯಿ ನಿಗದಿಯಾಗಿದೆ.

ತಿರುವನಂತಪುರಂನಲ್ಲಿ ಲೀಟರ್ ಪೆಟ್ರೋಲ್ ದರ 106.36 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 93.47 ರೂಪಾಯಿ ನಿಗದಿಯಾಗಿದೆ. ಲಕ್ನೋದಲ್ಲಿ ಲೀಟರ್ ಪೆಟ್ರೋಲ್ ದರ 95.28 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.80 ರೂಪಾಯಿ ನಿಗದಿಯಾಗಿದೆ. ಗುಹಾವಟಿಯಲ್ಲಿ ಲೀಟರ್ ಪೆಟ್ರೋಲ್ ದರ 94.58 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 81.29 ರೂಪಾಯಿ ನಿಗದಿಯಾಗಿದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ. ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ಇದನ್ನೂ ಓದಿ:

ವಿವಿಧ ನಗರದಲ್ಲಿ ಪೆಟ್ರೋಲ್ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/diesel-price-today.htm

Published On - 7:53 am, Sun, 21 November 21

ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ