Petrol Price Today: ಇಂದು ಪೆಟ್ರೋಲ್​, ಡೀಸೆಲ್​ ಬೆಲೆ ಎಷ್ಟಿದೆ? ಮಾಹಿತಿ ಇಲ್ಲಿದೆ

Petrol Rate Today, 22-11-2021: ಸತತ 18 ದಿನಗಳ ಕಾಲ ಪೆಟ್ರೋಲ್​, ಡೀಸೆಲ್​ ಬೆಲೆ ಸ್ಥಿರವಾಗಿದೆ. ಪ್ರಮುಖ ನಗರಗಳಲ್ಲಿ ಇಂಧನ ದರ ಎಷ್ಟಿದೆ ಎಂಬ ಮಾಹಿತಿ ಈ ಕೆಳಗಿನಂತಿದೆ ಪರಿಶೀಲಿಸಿ.

Petrol Price Today: ಇಂದು ಪೆಟ್ರೋಲ್​, ಡೀಸೆಲ್​ ಬೆಲೆ ಎಷ್ಟಿದೆ? ಮಾಹಿತಿ ಇಲ್ಲಿದೆ
ಸಾಂದರ್ಭಿಕ ಚಿತ್ರ

Petrol Diesel Price Today | ದೆಹಲಿ: ಈ ನವೆಂಬರ್ ತಿಂಗಳಿನಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಸತತ 18 ದಿನಗಳ ಕಾಲ ಸ್ಥಿರತೆಯನ್ನು ಕಾಯ್ದುಕೊಂಡಿದೆ. ಇಂದು ಸೋಮವಾರ (ನವೆಂಬರ್ 22)ರಂದು ಇಂಧನ ದರದಲ್ಲಿ (Fuel Price) ಯಾವುದೇ ಏರಿಳಿತಗಳಾಗಿಲ್ಲ. ಪ್ರಮುಖ ಎಲ್ಲಾ ಮಹಾ ನಗರಗಳಲ್ಲಿಯೂ ಸಹ ಪೆಟ್ರೋಲ್, ಡೀಸೆಲ್ ಬೆಲೆ ಸ್ಥಿರವಾಗಿದೆ. ದೀಪಾವಳಿಗೂ ಮುನ್ನ ಕೇಂದ್ರ ಸರ್ಕಾರ ಪೆಟ್ರೋಲ್ (Petrol Price), ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಕಡಿತಗೊಳಿಸಿತ್ತು. ಇಂದರಿಂದ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ (Diesel Price) ಇಳಿಕೆಯಾಯಿತು. ಆ ಬಳಿಕ ಇಂಧನ ದರದಲ್ಲಿ ಯಾವುದೇ ಬದಲಾವಣೆ ಕಂಡು ಬಂದಿಲ್ಲ.

ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 103.97 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.67 ರೂಪಾಯಿ ನಿಗದಿಯಾಗಿದೆ. ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 109.98 ರೂಪಾಯಿ ಹಾಗೂ ಲೀಟರ್ ಡೀಸೆಲ್ ಬೆಲೆ 94.14 ರೂಪಾಯಿ ಇದೆ. ಇನ್ನು, ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ದರ 104.67 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 89.79 ರೂಪಾಯಿ ನಿಗದಿಯಾಗಿದೆ. ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 101.40 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 91.42 ರೂಪಾಯಿ ನಿಗದಿಯಾಗಿದೆ.

ಲಕ್ನೋದಲ್ಲಿ ಲೀಟರ್ ಪೆಟ್ರೋಲ್ ದರ 95.28 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.80 ರೂಪಾಯಿ ನಿಗದಿಯಾಗಿದೆ. ಗುಹಾವಟಿಯಲ್ಲಿ ಲೀಟರ್ ಪೆಟ್ರೋಲ್ ದರ 94.58 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 81.29 ರೂಪಾಯಿ ನಿಗದಿಯಾಗಿದೆ. ತಿರುವನಂತಪುರಂನಲ್ಲಿ ಲೀಟರ್ ಪೆಟ್ರೋಲ್ ದರ 106.36 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 93.47 ರೂಪಾಯಿ ನಿಗದಿಯಾಗಿದೆ.

ಭೋಪಾಲ್​ನಲ್ಲಿ ಲೀಟರ್ ಪೆಟ್ರೋಲ್ ದರ 107.23 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 90.87 ರೂಪಾಯಿ ನಿಗದಿಯಾಗಿದೆ. ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 100.58 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 85.01 ರೂಪಾಯಿ ನಿಗದಿಯಾಗಿದೆ. ಹೈದರಾಬಾದ್​ನಲ್ಲಿ ಲೀಟರ್ ಪೆಟ್ರೋಲ್ ದರ 108.20 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.62 ರೂಪಾಯಿ ನಿಗದಿಯಾಗಿದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ
ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ. ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ಇದನ್ನೂ ಓದಿ:

ವಿವಿಧ ನಗರದಲ್ಲಿ ಪೆಟ್ರೋಲ್ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ:
https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ:
https://tv9kannada.com/business/diesel-price-today.htm

Click on your DTH Provider to Add TV9 Kannada