AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Price Today: ಸತತ 20 ದಿನಗಳ ಕಾಲ ಪೆಟ್ರೋಲ್​, ಡೀಸೆಲ್ ಬೆಲೆ ಸ್ಥಿರ; ಇಲ್ಲಿದೆ ವಿವರ ಪರಿಶೀಲಿಸಿ

Petrol Rate Today, 24-11-2021: ಪ್ರಮುಖ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟಕ್ಕೆ ಮಾರಾಟವಾಗುತ್ತಿದೆ ಎಂಬ ಮಾಹಿತಿ ಈ ಕೆಳಗಿನಂತಿದೆ ಪರಿಶೀಲಿಸಿ.

Petrol Price Today: ಸತತ 20 ದಿನಗಳ ಕಾಲ ಪೆಟ್ರೋಲ್​, ಡೀಸೆಲ್ ಬೆಲೆ ಸ್ಥಿರ; ಇಲ್ಲಿದೆ ವಿವರ ಪರಿಶೀಲಿಸಿ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Nov 24, 2021 | 7:35 AM

Share

Petrol Diesel Price Today | ದೆಹಲಿ: ಸತತ 20 ದಿನಗಳ ಕಾಲ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆ ಕಂಡು ಬಂದಿಲ್ಲ. ಇಂದು ಬುಧವಾರ (ನವೆಂಬರ್ 24)ರಂದು ಸಹ ಇಂಧನ ದರದಲ್ಲಿ (Fuel Price) ಏರಿಳಿತ ಕಂಡು ಬಂದಿಲ್ಲ. ಪ್ರಮುಖ ಎಲ್ಲಾ ಮಹಾ ನಗರಗಳಲ್ಲಿಯೂ ಸಹ ಇಂಧನ ದರ ಸ್ಥಿರವಾಗಿದೆ. ಇದಕ್ಕೂ ಮುಂಚೆ ನವೆಂಬರ್ 4ರಂದು ಸರ್ಕಾರವು ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಕಡಿತಗೊಳಿಸಿತ್ತು, ಆಗ ಪೆಟ್ರೋಲ್ (Petrol Price), ಡೀಸೆಲ್ ದರದಲ್ಲಿ ಇಳಿಕೆಯಾಗಿತ್ತು. ಅದರ ನಂತರದ ದಿನಗಳಲ್ಲಿ ಯಾವುದೇ ಬದಲಾವಣೆಗಳಾಗಿಲ್ಲ. ಪ್ರಮುಖ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ (Diesel Price) ಎಷ್ಟಕ್ಕೆ ಮಾರಾಟವಾಗುತ್ತಿದೆ ಎಂಬ ಮಾಹಿತಿ ಈ ಕೆಳಗಿನಂತಿದೆ ಪರಿಶೀಲಿಸಿ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 103.97 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.67 ರೂಪಾಯಿ ಇದೆ. ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 109.98 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.14 ರೂಪಾಯಿ ನಿಗದಿಯಾಗಿದೆ. ಬೆಲೆಗಳಲ್ಲಿ ಇಳಿಕೆಯ ಹೊರತಾಗಿಯೂ ದೇಶದ ಪ್ರಮುಖ ನಗರಗಳಲ್ಲಿ ಲೀಟರ್ ಪೆಟ್ರೋಲ್ ದರ 100ರ ಗಡಿಯಾಚೆಗೇ ಇದೆ. ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 101.40 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 91.43 ರೂಪಾಯಿ ಇದೆ. ಇನ್ನು, ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ದರ 104.67 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 89.79 ರೂಪಾಯಿ ನಿಗದಿಯಾಗಿದೆ.

ಭೋಪಾಲ್​ನಲ್ಲಿ ಲೀಟರ್ ಪೆಟ್ರೋಲ್ ದರ 107.23 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 90.87 ರೂಪಾಯಿ ಇದೆ. ಹೈದರಾಬಾದ್​ನಲ್ಲಿ ಲೀಟರ್ ಪೆಟ್ರೋಲ್ ದರ 108.20 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.62 ರೂಪಾಯಿ ನಿಗದಿಯಾಗಿದೆ. ಬೆಂಗಳೂರಿನಲ್ಲಿ ಲೀಟರ್​ ಪೆಟ್ರೋಲ್ ದರ 100.58 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 85.01 ರೂಪಾಯಿ ದಾಖಲಾಗಿದೆ.

ಗುವಾಹಟಿಯಲ್ಲಿ ಲೀಟರ್ ಪೆಟ್ರೋಲ್ ದರ 94.58 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.80 ರೂಪಾಯಿ ನಿಗದಿಯಾಗಿದೆ. ಗಾಂಧಿನಗರದಲ್ಲಿ ಲೀಟರ್ ಪೆಟ್ರೋಲ್ ದರ 95.35 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 89.33 ರೂಪಾಯಿ ನಿಗದಿಯಾಗಿದೆ. ಇನ್ನು, ಲಕ್ನೋದಲ್ಲಿ ಲೀಟರ್ ಪೆಟ್ರೋಲ್ ದರ 95.28 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.80 ರೂಪಾಯಿ ನಿಗದಿಯಾಗಿದೆ. ತಿರುವನಂತಪುರಂನಲ್ಲಿ ಲೀಟರ್ ಪೆಟ್ರೋಲ್​ಗೆ 106.36 ರೂಪಾಯಿ ಇದ್ದು, ಲೀಟರ್ ಡೀಸೆಲ್ ಬೆಲೆ 93.47 ರೂಪಾಯಿ ನಿಗದಿಯಾಗಿದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ. ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ಇದನ್ನೂ ಓದಿ:

ವಿವಿಧ ನಗರದಲ್ಲಿ ಪೆಟ್ರೋಲ್ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/diesel-price-today.htm

Published On - 7:31 am, Wed, 24 November 21

Follow Us
TV9 Web
TV9 Web

TV9 Kannada

Read More
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ
ಟಾಸ್ಕ್​ ವಿಷಯಕ್ಕೆ ತಮ್ಮ ತಂಡದ ವೈರತ್ವ ಕಟ್ಟಿಕೊಂಡ ಗಾನವಿ; ಸುಸ್ತು?
ಟಾಸ್ಕ್​ ವಿಷಯಕ್ಕೆ ತಮ್ಮ ತಂಡದ ವೈರತ್ವ ಕಟ್ಟಿಕೊಂಡ ಗಾನವಿ; ಸುಸ್ತು?
ಬೆಂಗಳೂರಿನಲ್ಲಿ ಭಾರಿ ಮಳೆ, ಕೆಆರ್ ಮಾರುಕಟ್ಟೆಯಲ್ಲಿ ಭಾರಿ ಅವಾಂತರ
ಬೆಂಗಳೂರಿನಲ್ಲಿ ಭಾರಿ ಮಳೆ, ಕೆಆರ್ ಮಾರುಕಟ್ಟೆಯಲ್ಲಿ ಭಾರಿ ಅವಾಂತರ
ಮಳೆಗೆ ಕೆಸರು ಗದ್ದೆಯಂತಾದ ಶಿಡ್ಲಘಟ್ಟದ ರಸ್ತೆ: ಜನರ ಪರದಾಟ
ಮಳೆಗೆ ಕೆಸರು ಗದ್ದೆಯಂತಾದ ಶಿಡ್ಲಘಟ್ಟದ ರಸ್ತೆ: ಜನರ ಪರದಾಟ
ಲಷ್ಕರ್ ಟಾಪ್ ಕಮಾಂಡರ್ ಫೌಜಿ ಮೂಸಾ ಎನ್‌ಕೌಂಟರ್‌ನಲ್ಲಿ ಹತ
ಲಷ್ಕರ್ ಟಾಪ್ ಕಮಾಂಡರ್ ಫೌಜಿ ಮೂಸಾ ಎನ್‌ಕೌಂಟರ್‌ನಲ್ಲಿ ಹತ