AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Price Today: ಸತತ 22 ದಿನಗಳ ಕಾಲ ಇಂಧನ ದರ ಸ್ಥಿರ; ಲೀಟರ್ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟಿದೆ? ಇಲ್ಲಿದೆ ಮಾಹಿತಿ

Petrol Rate Today, 26-11-2021: ಕಳೆದ ತಿಂಗಳಿನಲ್ಲಿ ನಿರಂತರ ಏರಿಕೆ ಕಂಡಿದ್ದ ಪೆಟ್ರೋಲ್, ಡೀಸೆಲ್ ಬೆಲೆ ಈ ತಿಂಗಳಿನಲ್ಲಿ ನಿರಂತರವಾಗಿ ಸ್ಥಿರತೆಯಲ್ಲಿದೆ. ದೀಪಾವಳಿ ಮುನ್ನಾ ದಿನ ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ಸುಂಕ ಕಡಿತದ ಹೊರತಾಗಿ ಈ ತಿಂಗಳಿನಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ ಆಗಿಲ್ಲ.

Petrol Price Today: ಸತತ 22 ದಿನಗಳ ಕಾಲ ಇಂಧನ ದರ ಸ್ಥಿರ; ಲೀಟರ್ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟಿದೆ? ಇಲ್ಲಿದೆ ಮಾಹಿತಿ
ಸಾಂದರ್ಭಿಕ ಚಿತ್ರ
Follow us
TV9 Web
| Updated By: shruti hegde

Updated on:Nov 26, 2021 | 7:43 AM

Petrol Diesel Price Today | ದೆಹಲಿ: ಸತತ 22 ದಿನಗಳ ಕಾಲ ಇಂಧನ ದರದಲ್ಲಿ ಯವುದೇ ಬದಲಾವಣೆಗಳಾಗಿಲ್ಲ. ಪ್ರಮುಖ ಎಲ್ಲಾ ಮಹಾ ನಗರಗಳಲ್ಲಿಯೂ ಸಹ ಇಂದು ಶುಕ್ರವಾರ (ನವೆಂಬರ್ 26) ಪೆಟ್ರೋಲ್, ಡೀಸೆಲ್ ಬೆಲೆ ಸ್ಥಿರವಾಗಿದೆ. ನವೆಂಬರ್ 4ರಂದು ಸರ್ಕಾರವು ಪೆಟ್ರೋಲ್ (Petrol price), ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಕಡಿತಗೊಳಿಸಿದ್ದು, ಆಗ ಇಂಧನ ದರದಲ್ಲಿ (Fuel Price) ಇಳಿಕೆ ಕಂಡು ಬಂದಿತ್ತು. ಆ ನಂತರದ ದಿನಗಳಲ್ಲಿ ಬೆಲೆಯಲ್ಲಿ ಯಾವುದೇ ಇಳಿಕೆ ಬಂದಿಲ್ಲ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ಬೆಲೆ 103.97 ರೂಪಾಯಿ ಹಾಗೂ ಲೀಟರ್ ಡೀಸೆಲ್ ಬೆಲೆ (Diesel Price) 86.67 ರೂಪಾಯಿ ದಾಖಲಾಗಿದೆ.

ಕಳೆದ ತಿಂಗಳಿನಲ್ಲಿ ನಿರಂತರ ಏರಿಕೆ ಕಂಡಿದ್ದ ಪೆಟ್ರೋಲ್, ಡೀಸೆಲ್ ಬೆಲೆ ಈ ತಿಂಗಳಿನಲ್ಲಿ ನಿರಂತರವಾಗಿ ಸ್ಥಿರತೆಯಲ್ಲಿದೆ. ದೀಪಾವಳಿ ಮುನ್ನಾ ದಿನ ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ಸುಂಕ ಕಡಿತದ ಹೊರತಾಗಿ ಈ ತಿಂಗಳಿನಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ ಆಗಿಲ್ಲ. ವಾಣಿಜ್ಯ ನಗರಿ ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 109.98 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.14 ರೂಪಾಯಿಗೆ ಮಾರಾಟವಾಗುತ್ತಿದೆ. ಬೆಲೆಗಳಲ್ಲಿ ಇಳಿಕೆಯ ಹೊರತಾಗಿಯೂ ಪ್ರಮುಖ ನಗರಗಳಲ್ಲಿ ಲೀಟರ್ ಪೆಟ್ರೋಲ್, ಡೀಸೆಲ್ ಬೆಲೆ 100ರ ಗಡಿಯಾಚೆಗೇ ಇದೆ.

ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 101.40 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 89.79 ರಪಾಯಿ ಇದೆ. ಹೈದರಾಬಾದ್​ನಲ್ಲಿ ಲೀಟರ್ ಪೆಟ್ರೋಲ್ ದರ 108.20 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.62 ರೂಪಾಯಿ ನಿಗದಿಯಾಗಿದೆ. ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ಬೆಲೆ 104.67 ರೂಪಾಯಿ ಹಾಗೂ ಲೀಟರ್ ಡೀಸೆಲ್ ಡೀಸೆಲ್ ದರ 89.79 ರೂಪಾಯಿ ದಾಖಲಾಗಿದೆ.

ಗಾಂಧಿನಗರದಲ್ಲಿ ಲೀಟರ್ ಪೆಟ್ರೋಲ್ ದರ 95.35 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 89.33 ರೂಪಾಯಿ ನಿಗದಿಯಾಗಿದೆ. ಶ್ರೀಗಂಗಾನಗರದಲ್ಲಿ ಲೀಟರ್ ಪೆಟ್ರೋಲ್ಗೆ 114.01 ರೂಪಾಯಿ ಹಾಗೂ ಲೀಟರ್ ಡೀಸೆಲ್ಗೆ 98.39 ರೂಪಾಯಿ ದಾಖಲಾಗಿದೆ. ಲಕ್ನೋದಲ್ಲಿ ಲೀಟರ್ ಪೆಟ್ರೋಲ್ ದರ 95.28 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.80 ರೂಪಾಯಿ ನಿಗದಿಯಾಗಿದೆ.

ಗುವಾಹಟಿಯಲ್ಲಿ ಲೀಟರ್ ಪೆಟ್ರೋಲ್ ದರ 94.58 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.80 ರೂಪಾಯಿ ನಿಗದಿಯಾಗಿದೆ. ತಿರುವನಂತಪುರಂನಲ್ಲಿ ಲೀಟರ್ ಪೆಟ್ರೋಲ್​ಗೆ 106.36 ರೂಪಾಯಿ ಇದ್ದು, ಲೀಟರ್ ಡೀಸೆಲ್ ಬೆಲೆ 93.47 ರೂಪಾಯಿ ನಿಗದಿಯಾಗಿದೆ. ಭೋಪಾಲ್​ನಲ್ಲಿ ಲೀಟರ್ ಪೆಟ್ರೋಲ್ ದರ 107.23 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 90.87 ರೂಪಾಯಿ ಇದೆ. ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 100.58 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 85.01 ರೂಪಾಯಿ ದಾಖಲಾಗಿದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ. ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ಇದನ್ನೂ ಓದಿ:

ವಿವಿಧ ನಗರದಲ್ಲಿ ಪೆಟ್ರೋಲ್ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/diesel-price-today.htm

Published On - 7:37 am, Fri, 26 November 21

‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಡಿಫರೆಂಟ್ ಹೇಗೆ? ವಿವರಿಸಿದ ದಿಗಂತ್
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಡಿಫರೆಂಟ್ ಹೇಗೆ? ವಿವರಿಸಿದ ದಿಗಂತ್
ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು
ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ತಕ್ಷಣ ಆಸ್ಪತ್ರೆಗೆ ಕರೆದುಕೊಂಡ ಹೋದ್ರೂ ಕಾಂತಾರ ಸಿನಿಮಾದ ನಟ ಬದುಕಲಿಲ್ಲ
ತಕ್ಷಣ ಆಸ್ಪತ್ರೆಗೆ ಕರೆದುಕೊಂಡ ಹೋದ್ರೂ ಕಾಂತಾರ ಸಿನಿಮಾದ ನಟ ಬದುಕಲಿಲ್ಲ
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ಕಲ್ಯಾಣ ಕರ್ನಾಟಕಕ್ಕೆ ನಿಮ್ಮ ಕೊಡುಗೆಯೇನು ಅಂದಾಗ ಶೆಟ್ಟರ್ ಅವಕ್ಕಾದರು!
ಕಲ್ಯಾಣ ಕರ್ನಾಟಕಕ್ಕೆ ನಿಮ್ಮ ಕೊಡುಗೆಯೇನು ಅಂದಾಗ ಶೆಟ್ಟರ್ ಅವಕ್ಕಾದರು!
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಂಜನಾದ್ರಿ ಹನುಮನ ಕೃಪೆಯಿಂದ ಶಾಸಕ ಸ್ಥಾನ ಅಭಾದಿತವಾಗಿದೆ: ಜನಾರ್ಧನ ರೆಡ್ಡಿ
ಅಂಜನಾದ್ರಿ ಹನುಮನ ಕೃಪೆಯಿಂದ ಶಾಸಕ ಸ್ಥಾನ ಅಭಾದಿತವಾಗಿದೆ: ಜನಾರ್ಧನ ರೆಡ್ಡಿ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್