AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Price Today: ಸತತ 23 ದಿನಗಳಿಂದ ಪೆಟ್ರೋಲ್​, ಡೀಸೆಲ್​ ಬೆಲೆ ಸ್ಥಿರ!

Petrol Rate Today, 27-11-2021: ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 100.58 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 85.01 ರೂಪಾಯಿ ನಿಗದಿಯಾಗಿದೆ.  ಹೈದರಾಬಾದ್​ನಲ್ಲಿ ಲೀಟರ್ ಪೆಟ್ರೋಲ್ ದರ 108.20 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.62 ರೂಪಾಯಿ ನಿಗದಿಯಾಗಿದೆ.

Petrol Price Today: ಸತತ 23 ದಿನಗಳಿಂದ ಪೆಟ್ರೋಲ್​, ಡೀಸೆಲ್​ ಬೆಲೆ ಸ್ಥಿರ!
ಸಾಂದರ್ಭಿಕ ಚಿತ್ರ
TV9 Web
| Updated By: preethi shettigar|

Updated on:Nov 27, 2021 | 7:57 AM

Share

Petrol Diesel Price Today | ದೆಹಲಿ: ಈ ನವೆಂಬರ್​ ತಿಂಗಳಿನ ಪ್ರಾರಂಭದಿಂದ ಇಲ್ಲಿಯವರೆಗೆ ಗಮನಿಸಿದರೆ ಹೆಚ್ಚು ದಿನಗಳ ಕಾಲ ಪೆಟ್ರೋಲ್, ಡೀಸೆಲ್ ಬೆಲೆ ಸ್ಥಿರವಾಗಿಯೇ ಉಳಿದಿದೆ. ಸತತ 23 ದಿನಗಳ ಕಾಲ ಇಂಧನ ದರ (Fuel Price) ಯಥಾಸ್ಥಿತಿಯಲ್ಲಿದೆ. ಇಂದು ಸಹ ಶನಿವಾರ (ನವೆಂಬರ್ 27) ಪೆಟ್ರೋಲ್ (Petrol Price), ಡೀಸೆಲ್ ಬೆಲೆ ಸ್ಥಿರತೆಯನ್ನು ಕಾಯ್ದುಕೊಂಡಿದೆ. ಬೆಲೆಗಳಲ್ಲಿ ಯಾವುದೇ ಏರಿಳಿತ ಕಂಡು ಬಂದಿಲ್ಲ. ಆ ಬಳಿಕ ರಾಷ್ಟ್ರ ರಾಜಧಾನಿಯಲ್ಲಿ ಇಂದು ಲೀಟರ್ ಪೆಟ್ರೋಲ್ 103.97 ರೂಪಾಯಿ ಹಾಗೂ ಲೀಟರ್ ಡೀಸೆಲ್ ಬೆಲೆ (Diesel Price) 86.67 ರೂಪಾಯಿ ನಿಗದಿಯಾಗಿದೆ. ಪ್ರಮುಖ ನಗರಗಳಲ್ಲಿ ಇಂಧನ ದರ ಎಷ್ಟಿದೆ ಎಂಬ ಮಾಹಿತಿ ಈ ಕೆಳಗಿನಂತಿದೆ ಪರಿಶೀಲಿಸಿ.

ವಾಣಿಜ್ಯ ನಗರಿ ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 109.98 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.14 ರೂಪಾಯಿ ಇದೆ. ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 101.40 ರೂಪಾಯಿ ಹಾಗೂ ಲೀಟರ್ ಡೀಸೆಲ್ ಬೆಲೆ 91.43 ರೂಪಾಯಿ ಇದೆ. ಇನ್ನು, ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ದರ 104.67 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 89.79 ರೂಪಾಯಿ ದಾಖಲಾಗಿದೆ.

ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 100.65 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 85.08 ರೂಪಾಯಿ ನಿಗದಿಯಾಗಿದೆ.  ಹೈದರಾಬಾದ್​ನಲ್ಲಿ ಲೀಟರ್ ಪೆಟ್ರೋಲ್ ದರ 108.20 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.62 ರೂಪಾಯಿ ನಿಗದಿಯಾಗಿದೆ. ಇನ್ನು. ಭೋಪಾಲ್​ನಲ್ಲಿ ಲೀಟರ್ ಪೆಟ್ರೋಲ್ ದರ 107.23 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 90.87 ರೂಪಾಯಿ ನಿಗದಿಯಾಗಿದೆ.

ತಿರುವನಂತಪುರಂನಲ್ಲಿ ಲೀಟರ್ ಪೆಟ್ರೋಲ್ ದರ 106.36 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 93.47 ರೂಪಾಯಿ ನಿಗದಿಯಾಗಿದೆ. ಲಕ್ನೋದಲ್ಲಿ ಲೀಟರ್ ಪೆಟ್ರೋಲ್ ದರ 95.28 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.80 ರೂಪಾಯಿ ನಿಗದಿಯಾಗಿದೆ. ಗುಹಾವಟಿಯಲ್ಲಿ ಲೀಟರ್ ಪೆಟ್ರೋಲ್ ದರ 94.58 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 81.29 ರೂಪಾಯಿ ನಿಗದಿಯಾಗಿದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ. ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ಇದನ್ನೂ ಓದಿ:

ವಿವಿಧ ನಗರದಲ್ಲಿ ಪೆಟ್ರೋಲ್ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/diesel-price-today.htm

Published On - 7:55 am, Sat, 27 November 21

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!