Petrol Price Today: ಸತತ ಏಳು ದಿನಗಳಿಂದ ಏರಿಕೆ ಕಂಡಿದ್ದ ಪೆಟ್ರೋಲ್​ ಡೀಸೆಲ್​ ದರದಲ್ಲಿ ಇಂದು ಯಾವುದೇ ಏರಿಳಿತಗಳಿಲ್ಲ!

Petrol Rate Today, 03-11-2021: ಸತತ ಏಳು ದಿನಗಳಿಂದ ಏರಿಕೆ ಕಾಣುತ್ತಿದ್ದ ಇಂಧನ ದರ ಇಂದು ಸ್ಥಿರತೆ ಕಾಯ್ದುಕೊಂಡಿದೆ. ಪ್ರಮುಖ ಎಲ್ಲಾ ಮಹಾ ನಗರಗಳಲ್ಲಿಯೂ ಸಹ ಇಂದು ಪೆಟ್ರೋಲ್​, ಡೀಸೆಲ್​ ದರ ಸ್ಥಿರವಾಗಿದೆ.

Petrol Price Today: ಸತತ ಏಳು ದಿನಗಳಿಂದ ಏರಿಕೆ ಕಂಡಿದ್ದ ಪೆಟ್ರೋಲ್​ ಡೀಸೆಲ್​ ದರದಲ್ಲಿ ಇಂದು ಯಾವುದೇ ಏರಿಳಿತಗಳಿಲ್ಲ!
ಸಾಂದರ್ಭಿಕ ಚಿತ್ರ
Follow us
| Updated By: shruti hegde

Updated on:Nov 03, 2021 | 7:55 AM

Petrol Diesel Price Today | ದೆಹಲಿ: ಸತತ ಏಳು ದಿನಗಳ ಕಾಲ ಏರಿಕೆ ಕಂಡಿದ್ದ ಪೆಟ್ರೋಲ್ ದರದಲ್ಲಿ (Petrol Price) ಇಂದು (ನವೆಂಬರ್ 3 ಬುಧವಾರ) ಯಾವುದೇ ಏರಿಳಿತ ಕಂಡು ಬಂದಿಲ್ಲ. ಪ್ರಮುಖ ಎಲ್ಲಾ ಮಹಾ ನಗರಗಳಲ್ಲಿಯೂ ಸಹ ಇಂದು ಪೆಟ್ರೋಲ್, ಡೀಸೆಲ್ ದರ (Diesel Price) ಸ್ಥಿರವಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 110.04 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 98.42 ರೂಪಾಯಿ ನಿಗದಿಯಾಗಿದೆ.

ವಾಣಿಜ್ಯ ನಗರಿ ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 115.85 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 106.62 ರೂಪಾಯಿ ನಿಗದಿಯಾಗಿದೆ. ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 106.66 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 102.59 ರೂಪಾಯಿ ನಿಗದಿಯಾಗಿದೆ. ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ದರ 110.49 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 101.56 ರೂಪಾಯಿ ಇದೆ.

ಹೈದಾರಾಬಾದ್​ನಲ್ಲಿ ಲೀಟರ್ ಪೆಟ್ರೋಲ್ ದರ 114.49 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 107.40 ರೂಪಾಯಿ ನಿಗದಿಯಾಗಿದೆ. ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 113.93 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 104.50 ರೂಪಾಯಿ ಇದೆ. ಸ್ಥಳೀಯ ತೆರಿಗೆಗಳು ಮತ್ತು ಸಾರಿಗೆ ವೆಚ್ಚಗಳನ್ನು ಅವಲಂಬಿಸಿ ಬೆಲೆಗಳು ರಾಜ್ಯದಿಂದ ರಾಜ್ಯಕ್ಕೆ ಭಿನ್ನವಾಗಿರುತ್ತದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ.

ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ಇದನ್ನೂ ಓದಿ:

ವಿವಿಧ ನಗರದಲ್ಲಿ ಪೆಟ್ರೋಲ್ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/diesel-price-today.htm

Published On - 7:49 am, Wed, 3 November 21

ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು