Petrol Price Today: ಕಳೆದ ಐದು ದಿನಗಳ ನಿರಂತರ ಏರಿಕೆ ಬಳಿಕ ಇಂದು ಪೆಟ್ರೋಲ್​, ಡೀಸೆಲ್​ ಬೆಲೆ ಸ್ಥಿರ!

Petrol Rate Today: ಸತತ ಐದು ದಿನಗಳಿಂದ ನಿರಂತರ ಏರಿಕೆ ಕಂಡ ಪೆಟ್ರೋಲ್​, ಡೀಸೆಲ್​ ಬೆಲೆ ಇಂದು ಸ್ಥಿರವಾಗಿದೆ. ಪ್ರಮುಖ ನಗರಗಳಲ್ಲಿ ಪೆಟ್ರೋಲ್​, ಡೀಸೆಲ್​ ಬೆಲೆ ಎಷ್ಟಿದೆ? ಎಂಬ ಮಾಹಿತಿ ಈ ಕೆಳಗಿನಂತಿದೆ ಪರಿಶೀಲಿಸಿ.

Petrol Price Today: ಕಳೆದ ಐದು ದಿನಗಳ ನಿರಂತರ ಏರಿಕೆ ಬಳಿಕ ಇಂದು ಪೆಟ್ರೋಲ್​, ಡೀಸೆಲ್​ ಬೆಲೆ ಸ್ಥಿರ!
ಸಾಂದರ್ಭಿಕ ಚಿತ್ರ

Petrol Diesel Price Today | ದೆಹಲಿ: ಕಳೆದ ಎರಡು ತಿಂಗಳಿನಿಂದ ಏರುತ್ತಿರುವ ಕಚ್ಚಾ ತೈಲ ಬೆಲೆಗಳಿಂದ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಅನಿರೀಕ್ಷಿತ ಏರಿಕೆ ಕಂಡಿವೆ. ಕಳೆದ ಇಂದು ವರ್ಷದಿಂದ ಪೆಟ್ರೋಲ್, ಡೀಸೆಲ್ ಬೆಲೆಗಳು ಏರಿಕೆ ಕಾಣುತ್ತಲೇ ಇವೆ. ಆ ಮೂಲಕ ಪೆಟ್ರೋಲ್ (Petrol Price), ಡೀಸೆಲ್ ಬೆಲೆ ಗರಿಷ್ಠ ಮಟ್ಟ ತಲುಪಿದೆ. ನಿರಂತರ ಐದು ದಿನಗಳ ಏರಿಕೆಯ ಬಳಿಕ ಇಂದು ಸೋಮವಾರ (ಅ.25) ಪೆಟ್ರೊಲ್, ಡೀಸೆಲ್ ಬೆಲೆಯಲ್ಲಿ (Diesel Price) ಯಾವುದೇ ಬದಲಾವಣೆಗಳಿಲ್ಲ. ಪ್ರಮುಖ ಎಲ್ಲಾ ಮಹಾನಗರಗಳಲ್ಲಿಯೂ ಸಹ ಇಂದು ಪೆಟ್ರೋಲ್, ಡೀಸೆಲ್ ಬೆಲೆ ಸ್ಥಿರತೆ ಕಾಯ್ದುಕೊಂಡಿದೆ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 107.59 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 96.32 ರೂಪಾಯಿ ಇದೆ. ಅದೇ ರೀತಿ ವಾಣಿಜ್ಯ ನಗರಿ ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 113.46 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 104.38 ರೂಪಾಯಿ ಇದೆ. ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ದರ 108.11 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 99.43 ರೂಪಾಯಿ ಇದೆ.

ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 104.52 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 100.59 ರೂಪಾಯಿ ಇದೆ. ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 111.34 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 102.23 ರೂಪಾಯಿ ಇದೆ. ಭೋಪಾಲ್​ನಲ್ಲಿ ಲೀಟರ್ ಪೆಟ್ರೋಲ್​ಗೆ 116.26 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 105.64 ರೂಪಾಯಿ ನಿಗದಿಯಾಗಿದೆ.

ಲಕ್ನೋದಲ್ಲಿ ಲೀಟರ್ ಪೆಟ್ರೋಲ್ ದರ 104.54 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 96.78 ರೂಪಾಯಿ ಇದೆ. ಚಂಡೀಗಢದಲ್ಲಿ ಲೀಟರ್ ಪೆಟ್ರೋಲ್ ದರ 103.55 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 96.03 ರೂಪಾಯಿ ಇದೆ. ಅದೇ ರೀತಿ ಪಾಟ್ನಾದಲ್ಲಿ ಲೀಟರ್ ಪೆಟ್ರೋಲ್ ದರ 111.24 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 102.39 ರೂಪಾಯಿ ಇದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ
ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ.

ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ಇದನ್ನೂ ಓದಿ:

ವಿವಿಧ ನಗರದಲ್ಲಿ ಪೆಟ್ರೋಲ್ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ:
https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ:
https://tv9kannada.com/business/diesel-price-today.html

Click on your DTH Provider to Add TV9 Kannada