Petrol Price Today: ಬೆಂಗಳೂರಿನಲ್ಲಿ ಇಂದು ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟಿದೆ ಗೊತ್ತಾ?

| Updated By: sandhya thejappa

Updated on: Apr 23, 2022 | 9:07 AM

Petrol Price | Diesel Price Today, 23-04-2022: ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 111.09 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.79 ರೂಪಾಯಿ ದಾಖಲಾಗಿದೆ. ಕೇರಳದ ತಿರುವನಂತಪುರಂನಲ್ಲಿ ಲೀಟರ್ ಪೆಟ್ರೋಲ್​ಗೆ 116.92 ರೂಪಾಯಿ ಇದ್ದು, ಲೀಟರ್ ಡೀಸೆಲ್ ಬೆಲೆ 103.69 ರೂಪಾಯಿ ನಿಗದಿಯಾಗಿದೆ.

Petrol Price Today: ಬೆಂಗಳೂರಿನಲ್ಲಿ ಇಂದು ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟಿದೆ ಗೊತ್ತಾ?
ಪ್ರಾತಿನಿಧಿಕ ಚಿತ್ರ
Follow us on

Petrol Diesel Price Today |ದಿನ ನಿತ್ಯ ಜೀವನಕ್ಕೆ ಪೆಟ್ರೋಲ್ (Petrol), ಡೀಸೆಲ್ (Diesel) ಅತ್ಯಗತ್ಯ. ಹೀಗಾಗಿ ಜನರ ಗಮನ ಇಂಧನ ದರಗಳ ಮೇಲೆ ಇರುತ್ತೆ. ಇಂದು (ಏಪ್ರಿಲ್ 23) ಇಂಧನ ದರ ಎಷ್ಟಿದೆ ಅಂತ ಯೋಚಿಸುತ್ತಾ ಇರುತ್ತಾರೆ. ಕಳೆದ ಕೆಲ ದಿನಗಳಿಂದ ಪೆಟ್ರೋಲ್, ಡೀಸೆಲ್ ದರ ನಿರಂತರವಾಗಿ ಏರಿಕೆಯಾಗುತ್ತಿತ್ತು. ಮೊದಲ ನಾಲ್ಕು ದಿನಗಳಲ್ಲಿ ಇಂಧನ ಬೆಲೆಗಳನ್ನು ದಿನಕ್ಕೆ ಪ್ರತಿ ಲೀಟರ್​ಗೆ ತಲಾ 80 ಪೈಸೆಯಂತೆ ಹೆಚ್ಚಿಸಿದ್ದರೆ, ನಂತರದ ದಿನಗಳಲ್ಲಿ ಪೆಟ್ರೋಲ್ ಧಾರಣೆಯನ್ನು ಲೀಟರ್​ಗೆ 50 ಮತ್ತು 30, ಮತ್ತೆ 80 ಪೈಸೆಯಷ್ಟು ಹೆಚ್ಚಿಸಲಾಗಿತ್ತು. ಎರಡು ವಾರಗಳಿಂದ ಬೆಲೆ ನಿಗದಿಯಾಗಿದೆ. ಇಂದು ಕೂಡಾ ಇಂಧನ ಬೆಲೆಯಲ್ಲಿ ಯಾವುದೇ ಬದಲಾವಣೆ ಕಂಡುಬಂದಿಲ್ಲ.

ಬೆಂಗಳೂರಿನಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ?:
ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 111.09 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.79 ರೂಪಾಯಿ ದಾಖಲಾಗಿದೆ. ಕೇರಳದ ತಿರುವನಂತಪುರಂನಲ್ಲಿ ಲೀಟರ್ ಪೆಟ್ರೋಲ್​ಗೆ 116.92 ರೂಪಾಯಿ ಇದ್ದು, ಲೀಟರ್ ಡೀಸೆಲ್ ಬೆಲೆ 103.69 ರೂಪಾಯಿ ನಿಗದಿಯಾಗಿದೆ. ಹೈದರಾಬಾದ್​ನಲ್ಲಿ ಲೀಟರ್ ಪೆಟ್ರೋಲ್ ದರ 119.49 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 105.49 ರೂಪಾಯಿ ನಿಗದಿಯಾಗಿದೆ.

ಭಾರತದ ಪ್ರಮುಖ ನಗರಗಳಲ್ಲಿ ಇಂಧನ ದರ ಹೀಗಿದೆ:
ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಒಂದು ಲೀಟರ್​ಗೆ ₹ 105.41 ಇದ್ದು, ಲೀಟರ್ ಡೀಸೆಲ್ ಬೆಲೆ ₹ 96.67 ಇದೆ. ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 110.85 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 100.94 ರೂಪಾಯಿ ಇದೆ. ಅದೇ ರೀತಿ ಕೋಲ್ಕತ್ತಾದಲ್ಲಿ ಪೆಟ್ರೋಲ್ ಬೆಲೆ ಲೀಟರ್​ಗೆ 115.12 ರೂ. ಡೀಸೆಲ್ ಬೆಲೆ ಲೀಟರ್​ಗೆ 99.83 ರೂ. ಆಗಿದೆ. ಮುಂಬೈನಲ್ಲಿ ಲೀಟರ್ ಪೆಟ್ರೋಲ್ ₹ 120.51, ಡೀಸೆಲ್ ₹ 104.77ಕ್ಕೆ ಮಾರಾಟವಾಗುತ್ತಿದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ:
ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ. ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್​ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ಇದನ್ನೂ ಓದಿ

RCB vs SRH: ಐಪಿಎಲ್​ನಲ್ಲಿಂದು ಎರಡು ಪಂದ್ಯ: ಗೆಲುವಿನ ಓಟ ಮುಂದುವರೆಸುತ್ತಾ ಆರ್​​ಸಿಬಿ?

ಪಿಎಸ್​ಐ ಹುದ್ದೆಗಳ ನೇಮಕಾತಿ ಅಕ್ರಮ; ಕಿಂಗ್​ಪಿನ್​ ರುದ್ರಗೌಡ ಪಾಟೀಲ್​​ಗಾಗಿ ಸಿಐಡಿ ಹುಡುಕಾಟ, ಬಿಜೆಪಿ ನಾಯಕಿಯೂ ಪತ್ತೆಯಿಲ್ಲ