AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Price Today: ಬೆಂಗಳೂರಿನಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟಿದೆ? ಇಲ್ಲಿದೆ ನೋಡಿ

Petrol Price | Diesel Price Today, 30-04-2022: ಇಂದು ದೇಶದಲ್ಲಿ ಪೆಟ್ರೋಲ್, ಡೀಸೆಲ್ ದರ ಸ್ಥಿರವಾಗಿದೆ. ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 111.09 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.79 ರೂಪಾಯಿ ದಾಖಲಾಗಿದೆ. ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಒಂದು ಲೀಟರ್​ಗೆ ₹ 105.41 ಇದ್ದು, ಲೀಟರ್ ಡೀಸೆಲ್ ಬೆಲೆ ₹ 96.67 ಇದೆ.

Petrol Price Today: ಬೆಂಗಳೂರಿನಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟಿದೆ? ಇಲ್ಲಿದೆ ನೋಡಿ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Apr 30, 2022 | 8:39 AM

Share

Petrol Diesel Price Today: ದೇಶದಲ್ಲಿ ಕಳೆದ 24 ದಿನಗಳಿಂದ ಪೆಟ್ರೋಲ್, ಡೀಸೆಲ್ ದರ ಸ್ಥಿರವಾಗಿದೆ. ಕೆಲ ತಿಂಗಳ ಮೊದಲು ಇಳಿಕೆಯಾಗಿದ್ದ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯನ್ನು ಮಾರ್ಚ್ 22ರಿಂದ ಏರಿಸಲಾಗುತ್ತಿತ್ತು. ಇದರಿಂದ ಒಂದು ತಿಂಗಳ ಅವಧಿಯಲ್ಲಿ ಪೆಟ್ರೋಲ್ ಬೆಲೆ (Petrol Price) ಪ್ರತಿ ಲೀಟರ್​ಗೆ ಸರಾಸರಿ ₹ 10 ರಷ್ಟು ಹೆಚ್ಚಾಗಿತ್ತು. ಆದರೆ ಕಳೆದ 24 ದಿನಗಳಿಂದ ದರ ಸ್ಥಿರವಾಗಿದೆ. ಇಂದು (ಶನಿವಾರ, ಏಪ್ರಿಲ್ 30, 2022) ಪೆಟ್ರೋಲ್ ಹಾಗೂ ಡೀಸೆಲ್ ದರದಲ್ಲಿ ಯಾವುದೇ ಏರಿಕೆ ಕಂಡುಬಂದಿಲ್ಲ. ಬೆಂಗಳೂರು, ದೆಹಲಿ ಸೇರಿದಂತೆ ವಿವಿಧ ನಗರಗಳ ಇಂಧನ ದರ ಎಷ್ಟಿದೆ? ಈ ಕುರಿತ ಮಾಹಿತಿ ಇಲ್ಲಿದೆ. ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಒಂದು ಲೀಟರ್​ಗೆ ₹ 105.41 ಇದ್ದು, ಲೀಟರ್ ಡೀಸೆಲ್ ಬೆಲೆ ₹ 96.67 ಇದೆ. ಮುಂಬೈನಲ್ಲಿ ಲೀಟರ್ ಪೆಟ್ರೋಲ್ ₹ 120.51, ಡೀಸೆಲ್ ₹ 104.77ಕ್ಕೆ ಮಾರಾಟವಾಗುತ್ತಿದೆ. ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 110.85 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 100.94 ರೂಪಾಯಿ ಇದೆ. ಅದೇ ರೀತಿ ಕೋಲ್ಕತ್ತಾದಲ್ಲಿ ಪೆಟ್ರೋಲ್ ಬೆಲೆ ಲೀಟರ್​ಗೆ 115.12 ರೂ. ಡೀಸೆಲ್ ಬೆಲೆ ಲೀಟರ್​ಗೆ 99.83 ರೂ. ಆಗಿದೆ.

ಬೆಂಗಳೂರಿನಲ್ಲಿ ಇಂಧನ ದರ ಎಷ್ಟಿದೆ?

ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 111.09 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.79 ರೂಪಾಯಿ ದಾಖಲಾಗಿದೆ. ಕೇರಳದ ತಿರುವನಂತಪುರಂನಲ್ಲಿ ಲೀಟರ್ ಪೆಟ್ರೋಲ್​ಗೆ 116.92 ರೂಪಾಯಿ ಇದ್ದು, ಲೀಟರ್ ಡೀಸೆಲ್ ಬೆಲೆ 103.69 ರೂಪಾಯಿ ನಿಗದಿಯಾಗಿದೆ. ಹೈದರಾಬಾದ್​ನಲ್ಲಿ ಲೀಟರ್ ಪೆಟ್ರೋಲ್ ದರ 119.49 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 105.49 ರೂಪಾಯಿ ನಿಗದಿಯಾಗಿದೆ.

ವಿವಿಧ ನಗರದಲ್ಲಿ ಪೆಟ್ರೋಲ್ ದರ ಎಷ್ಟಿದೆ ಎಂಬುದನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ:

ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ. ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್​ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ಇದನ್ನೂ ಓದಿ: Gold Price Today: ಮತ್ತೆ ಏರಿಕೆಯತ್ತ ಸಾಗಿದ ಚಿನ್ನದ ಬೆಲೆ; ಬೆಳ್ಳಿ ಕೊಳ್ಳುವ ಮುನ್ನ ಯೋಚಿಸಿ

Follow Us
TV9 Web
TV9 Web

TV9 Kannada

Read More
ಬಿಗ್ ಬಾಸ್ ಕನ್ನಡ: ಯಶಸ್ ಜೊತೆ ಮದುವೆ ಮಾತುಕಥೆ ಮಾಡಿದ ಸೌಂದರ್ಯಾ ಶೆಟ್ಟಿ
ಬಿಗ್ ಬಾಸ್ ಕನ್ನಡ: ಯಶಸ್ ಜೊತೆ ಮದುವೆ ಮಾತುಕಥೆ ಮಾಡಿದ ಸೌಂದರ್ಯಾ ಶೆಟ್ಟಿ
‘ಸತ್ಯ ಇನ್ ಲವ್’, ‘ಜೋಗಯ್ಯ’ ವಿಗ್ ನನಗೆ ಇಷ್ಟ ಆಗಿರಲಿಲ್ಲ: ಶಿವರಾಜ್​ಕುಮಾರ್
‘ಸತ್ಯ ಇನ್ ಲವ್’, ‘ಜೋಗಯ್ಯ’ ವಿಗ್ ನನಗೆ ಇಷ್ಟ ಆಗಿರಲಿಲ್ಲ: ಶಿವರಾಜ್​ಕುಮಾರ್
ಬೆಂಗಳೂರಿನಲ್ಲಿ ಗುಂಡಿ ಮುಕ್ತ ರಸ್ತೆಗೆ ಕೃಷ್ಣಭೈರೇಗೌಡ ಪಣ
ಬೆಂಗಳೂರಿನಲ್ಲಿ ಗುಂಡಿ ಮುಕ್ತ ರಸ್ತೆಗೆ ಕೃಷ್ಣಭೈರೇಗೌಡ ಪಣ
ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ
ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ
ಮಂಗಳೂರು MRPL ಸ್ಪೋಟ: 2 ಕಿ.ಮೀ ದೂರದಲ್ಲಿರುವ ಚರ್ಚ್​​​ಗೆ ಹಾನಿ
ಮಂಗಳೂರು MRPL ಸ್ಪೋಟ: 2 ಕಿ.ಮೀ ದೂರದಲ್ಲಿರುವ ಚರ್ಚ್​​​ಗೆ ಹಾನಿ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ