AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Diesel Rate Today: ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಬದಲಾವಣೆಯಿಲ್ಲ; ಪ್ರಮುಖ ನಗರಗಳಲ್ಲಿ ಇಂಧನ ದರ ಹೀಗಿದೆ

Petrol Diesel Price Today, 03-02-2022: ಹೈದರಾಬಾದ್​ನಲ್ಲಿ ಲೀಟರ್ ಪೆಟ್ರೋಲ್ ದರ 108.20 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.62 ರೂಪಾಯಿ ನಿಗದಿಯಾಗಿದೆ. ಗುಜರಾತ್​ನ ಗಾಂಧಿನಗರದಲ್ಲಿ ಲೀಟರ್ ಪೆಟ್ರೋಲ್ ದರ 95.35 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 89.33 ರೂಪಾಯಿ ನಿಗದಿಯಾಗಿದೆ.

Petrol Diesel Rate Today: ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಬದಲಾವಣೆಯಿಲ್ಲ; ಪ್ರಮುಖ ನಗರಗಳಲ್ಲಿ ಇಂಧನ ದರ ಹೀಗಿದೆ
ಪ್ರಾತಿನಿಧಿಕ ಚಿತ್ರ
TV9 Web
| Edited By: sandhya thejappa|

Updated on: Feb 03, 2022 | 9:20 AM

Share

Petrol Diesel Price Today|ದೆಹಲಿ: ನಡೆದು ಹೋಗುವ ಕಾಲ ಮುಗಿದಿದೆ. ಇವಾಗ ಏನೇ ಇದ್ದರೂ ವಾಹನಗಳ ಮೇಲೆ ಸವಾರಿ. ಹೀಗಾಗಿ ಸಾಮಾನ್ಯವಾಗಿ ಜನರಿಗೆ ಪೆಟ್ರೋಲ್ (Petrol Price), ಡೀಸೆಲ್ ಬೆಲೆ (Diesel Price) ಎಷ್ಟಿದೆ ಅಂತ ನೋಡುವ ಕುತೂಹಲ. ಕೇಂದ್ರ ಸರ್ಕಾರ ಬಜೆಟ್ ಮಂಡಿಸಿದ ಮೇಲೆ ಇಂಧನ ಬೆಲೆಯಲ್ಲಿ (Fuel Price) ಬದಲಾವಣೆ ಆಗಿದೆಯಾ ಅಂತ ತಿಳಿಯಲು ಇಚ್ಚಿಸುತ್ತಾರೆ. ದೇಶಾದ್ಯಂತ ತೈಲ ಮಾರುಕಟ್ಟೆ ಕಂಪನಿಗಳು (OMC) ಇಂದು (ಫೆಬ್ರವರಿ 3) ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಬಿಡುಗಡೆ ಮಾಡಿವೆ. ಬೆಲೆ ಗಮನಿಸಿದಾಗ ಪೆಟ್ರೋಲ್ ಬೆಲೆ ಹಾಗೂ ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆ ಕಂಡುಬಂದಿಲ್ಲ. ಇಂದು ಕೂಡ ದರ ಸ್ಥಿರವಾಗಿದೆ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 95.41 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.67 ರೂಪಾಯಿ ದಾಖಲಾಗಿದೆ. ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 100.58 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 85.01 ರೂಪಾಯಿ ದಾಖಲಾಗಿದೆ. ವಾಣಿಜ್ಯ ನಗರಿ ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 109.98 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.14 ರೂಪಾಯಿ ಇದೆ. ಅದೇ ರೀತಿ ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 101.40 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 91.53 ರೂಪಾಯಿ ಇದೆ. ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ಬೆಲೆ 104.67 ರೂಪಾಯಿ ಹಾಗೂ ಲೀಟರ್ ಡೀಸೆಲ್ ಡೀಸೆಲ್ ದರ 89.79 ರೂಪಾಯಿ ನಿಗದಿಯಾಗಿದೆ.

ಹೈದರಾಬಾದ್​ನಲ್ಲಿ ಲೀಟರ್ ಪೆಟ್ರೋಲ್ ದರ 108.20 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.62 ರೂಪಾಯಿ ನಿಗದಿಯಾಗಿದೆ. ಗುಜರಾತ್​ನ ಗಾಂಧಿನಗರದಲ್ಲಿ ಲೀಟರ್ ಪೆಟ್ರೋಲ್ ದರ 95.35 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 89.33 ರೂಪಾಯಿ ನಿಗದಿಯಾಗಿದೆ. ಕೇರಳದ ತಿರುವನಂತಪುರಂನಲ್ಲಿ ಲೀಟರ್ ಪೆಟ್ರೋಲ್​ಗೆ 106.36 ರೂಪಾಯಿ ಇದ್ದು, ಲೀಟರ್ ಡೀಸೆಲ್ ಬೆಲೆ 93.47 ರೂಪಾಯಿ ನಿಗದಿಯಾಗಿದೆ. ಲಕ್ನೋದಲ್ಲಿ ಲೀಟರ್ ಪೆಟ್ರೋಲ್ ದರ 95.28 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.80 ರೂಪಾಯಿ ನಿಗದಿಯಾಗಿದೆ. ಶ್ರೀಗಂಗಾನಗರದಲ್ಲಿ ಲೀಟರ್ ಪೆಟ್ರೋಲ್​ಗೆ 114.01 ರೂಪಾಯಿ ಹಾಗೂ ಲೀಟರ್ ಡೀಸೆಲ್​ಗೆ 98.39 ರೂಪಾಯಿ ದಾಖಲಾಗಿದೆ. ಭೋಪಾಲ್​ನಲ್ಲಿ ಲೀಟರ್ ಪೆಟ್ರೋಲ್ ದರ 107.23 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 90.87 ರೂಪಾಯಿ ಇದೆ. ಗುವಾಹಟಿಯಲ್ಲಿ ಲೀಟರ್ ಪೆಟ್ರೋಲ್ ದರ 94.58 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.80 ರೂಪಾಯಿ ನಿಗದಿಯಾಗಿದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ. ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ಇದನ್ನೂ ಓದಿ

ಕಷ್ಟದ ಸಮಯದಲ್ಲಿ ಅಕ್ಕ-ಭಾವನನ್ನು ಬಿಟ್ಟು ಶಮಿತಾ ಶೆಟ್ಟಿ ಬಿಗ್​ ಬಾಸ್​ಗೆ ಹೋಗಿದ್ದು ಏಕೆ? ಕಾರಣ ತಿಳಿಸಿದ ನಟಿ

ಖ್ವಾಜಾ ಮೊಯಿನುದ್ದೀನ್ ಚಿಸ್ತಿ ಉರುಸ್​ಗೆ ಸಚಿವ ಮುಖ್ತರ್​ ಅಬ್ಬಾಸ್ ನಖ್ವಿ ಮೂಲಕ ಚಾದರ್​ ಕಳಿಸಿಕೊಟ್ಟ ಪ್ರಧಾನಿ ಮೋದಿ

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ