AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Diesel Rate Today: ಇಂಧನ ದರ ಸ್ಥಿರ; ನಿಮ್ಮೂರಿನಲ್ಲಿ ಪೆಟ್ರೋಲ್, ಡೀಸೆಲ್​ ಬೆಲೆ ಎಷ್ಟಿದೆ ಪರಿಶೀಲಿಸಿ

Petrol Diesel Price Today, 04-02-2022: ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 100.58 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 85.01 ರೂಪಾಯಿ ದಾಖಲಾಗಿದೆ. ವಾಣಿಜ್ಯ ನಗರಿ ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 109.98 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.14 ರೂಪಾಯಿ ಇದೆ.

Petrol Diesel Rate Today: ಇಂಧನ ದರ ಸ್ಥಿರ; ನಿಮ್ಮೂರಿನಲ್ಲಿ ಪೆಟ್ರೋಲ್, ಡೀಸೆಲ್​ ಬೆಲೆ ಎಷ್ಟಿದೆ ಪರಿಶೀಲಿಸಿ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: preethi shettigar

Updated on: Feb 04, 2022 | 7:55 AM

Petrol Diesel Price Today |ದೆಹಲಿ: ಭಾರತದ ತೈಲ ಕಂಪನಿಗಳು ಇಂದು ಬೆಳಗ್ಗೆ ಪೆಟ್ರೋಲ್​-ಡೀಸೆಲ್​ ಬೆಲೆಯನ್ನು ಬಿಡುಗಡೆ ಮಾಡಿದ್ದು, ಇಂದು (ಜನವರಿ 04) ಕೂಡ ಇಂಧನಗಳ ದರದಲ್ಲಿ(Fuel rate) ಯಾವುದೇ ಬದಲಾವಣೆಯಾಗಿಲ್ಲ. ಕಳೆದ ಎರಡೂವರೆ ತಿಂಗಳುಗಳಿಂದಲೂ ತೈಲಗಳ ಬೆಲೆ ಸ್ಥಿರವಾಗಿಯೇ ಇದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯಲ್ಲಿ ಏರಿಳಿತವಾಗುತ್ತಿದ್ದರೂ, ಅದು ಪೆಟ್ರೋಲ್​-ಡೀಸೆಲ್(Diesel price)​ ಬೆಲೆಯ ಮೇಲೆ ಯಾವುದೇ ಪ್ರಭಾವ ಬೀರುತ್ತಿಲ್ಲ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್(Petrol Price)​ ಪ್ರತಿ ಲೀಟರ್​ಗೆ 95.41 ರೂಪಾಯಿಯೇ ಇದ್ದು, ಡೀಸೆಲ್​ ಪ್ರತಿ ಲೀಟರ್​ಗೆ 86.67 ರೂ.ಇದೆ. ತೈಲ ಕಂಪನಿಗಳು ಪ್ರತಿದಿನ ಬೆಳಗ್ಗೆಯೇ ವಿವಿಧ ಪ್ರಮುಖ ನಗರಗಳ ಪೆಟ್ರೋಲ್​-ಡೀಸೆಲ್​ ಬೆಲೆಯನ್ನು ಬಿಡುಗಡೆ ಮಾಡುತ್ತವೆ.  ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲಕ್ಕೆ ಇರುವ ಬೆಲೆ ಆಧಾರದಲ್ಲಿ ಪೆಟ್ರೋಲ್​-ಡೀಸೆಲ್​ ಬೆಲೆ ನಿರ್ಧರಿಸಲಾಗುತ್ತದೆ.

ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 100.58 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 85.01 ರೂಪಾಯಿ ದಾಖಲಾಗಿದೆ. ವಾಣಿಜ್ಯ ನಗರಿ ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 109.98 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.14 ರೂಪಾಯಿ ಇದೆ. ಅದೇ ರೀತಿ ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 101.40 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 91.53 ರೂಪಾಯಿ ಇದೆ. ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ಬೆಲೆ 104.67 ರೂಪಾಯಿ ಹಾಗೂ ಲೀಟರ್ ಡೀಸೆಲ್ ಡೀಸೆಲ್ ದರ 89.79 ರೂಪಾಯಿ ನಿಗದಿಯಾಗಿದೆ.

ಹೈದರಾಬಾದ್ನಲ್ಲಿ ಲೀಟರ್ ಪೆಟ್ರೋಲ್ ದರ 108.20 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.62 ರೂಪಾಯಿ ನಿಗದಿಯಾಗಿದೆ. ಗುಜರಾತ್​ನ ಗಾಂಧಿನಗರದಲ್ಲಿ ಲೀಟರ್ ಪೆಟ್ರೋಲ್ ದರ 95.35 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 89.33 ರೂಪಾಯಿ ನಿಗದಿಯಾಗಿದೆ. ಕೇರಳದ ತಿರುವನಂತಪುರಂನಲ್ಲಿ ಲೀಟರ್ ಪೆಟ್ರೋಲ್ಗೆ 106.36 ರೂಪಾಯಿ ಇದ್ದು, ಲೀಟರ್ ಡೀಸೆಲ್ ಬೆಲೆ 93.47 ರೂಪಾಯಿ ನಿಗದಿಯಾಗಿದೆ. ಲಕ್ನೋದಲ್ಲಿ ಲೀಟರ್ ಪೆಟ್ರೋಲ್ ದರ 95.28 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.80 ರೂಪಾಯಿ ನಿಗದಿಯಾಗಿದೆ.

ಶ್ರೀಗಂಗಾನಗರದಲ್ಲಿ ಲೀಟರ್ ಪೆಟ್ರೋಲ್​ಗೆ 114.01 ರೂಪಾಯಿ ಹಾಗೂ ಲೀಟರ್ ಡೀಸೆಲ್ಗೆ 98.39 ರೂಪಾಯಿ ದಾಖಲಾಗಿದೆ. ಭೋಪಾಲ್ನಲ್ಲಿ ಲೀಟರ್ ಪೆಟ್ರೋಲ್ ದರ 107.23 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 90.87 ರೂಪಾಯಿ ಇದೆ. ಗುವಾಹಟಿಯಲ್ಲಿ ಲೀಟರ್ ಪೆಟ್ರೋಲ್ ದರ 94.58 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.80 ರೂಪಾಯಿ ನಿಗದಿಯಾಗಿದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ:

ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ. ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ಇದನ್ನೂ ಓದಿ:

ವಿವಿಧ ನಗರದಲ್ಲಿ ಪೆಟ್ರೋಲ್ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/diesel-price-today.htm

ಮಕ್ಕಳಿದ್ರೂ 17ರ ಯುವತಿ ಜತೆ ಲವ್, ಮದ್ವೆಗೆ ಒಪ್ಪದಿದ್ದಕ್ಕೆ ಮಾಡಿದ್ದೇನು?
ಮಕ್ಕಳಿದ್ರೂ 17ರ ಯುವತಿ ಜತೆ ಲವ್, ಮದ್ವೆಗೆ ಒಪ್ಪದಿದ್ದಕ್ಕೆ ಮಾಡಿದ್ದೇನು?
ಕರಾವಳಿ ಭಾಗದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ವಿಜಯೇಂದ್ರ
ಕರಾವಳಿ ಭಾಗದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ವಿಜಯೇಂದ್ರ
ಕಾಂಗ್ರೆಸ್ ಶಾಸಕ ಲಕ್ಷ್ಮಣ್‌ ಸವದಿ ಕಾರು ಅಪಘಾತ, ವಿಡಿಯೋ ನೋಡಿ
ಕಾಂಗ್ರೆಸ್ ಶಾಸಕ ಲಕ್ಷ್ಮಣ್‌ ಸವದಿ ಕಾರು ಅಪಘಾತ, ವಿಡಿಯೋ ನೋಡಿ
ಮತದಾರರ ಪರಿಷ್ಕೃತ ಪಟ್ಟಿ ನೀಡಲು ತಡವಾಗಿದ್ದಕ್ಕೆ ಶಾಸಕನಿಗೆ ಅಸಮಾಧಾನ
ಮತದಾರರ ಪರಿಷ್ಕೃತ ಪಟ್ಟಿ ನೀಡಲು ತಡವಾಗಿದ್ದಕ್ಕೆ ಶಾಸಕನಿಗೆ ಅಸಮಾಧಾನ
ಡಾ. ರಾಜ್ ಬಗ್ಗೆ ಅವಹೇಳನಕಾರಿ ಮಾತು: ಆರ್​ಜಿವಿಗೆ ಸಾರಾ ಗೋವಿಂದು ಕ್ಲಾಸ್​
ಡಾ. ರಾಜ್ ಬಗ್ಗೆ ಅವಹೇಳನಕಾರಿ ಮಾತು: ಆರ್​ಜಿವಿಗೆ ಸಾರಾ ಗೋವಿಂದು ಕ್ಲಾಸ್​
ಕುಕ್ಕೆ ದೇಗುಲ ಸೇರಿ ಸರ್ಕಾರದ 3 ಸಾವಿರ ರೂಮ್​​​ ಆನ್​​ ಲೈನ್​ ಬುಕ್ಕಿಂಗ್
ಕುಕ್ಕೆ ದೇಗುಲ ಸೇರಿ ಸರ್ಕಾರದ 3 ಸಾವಿರ ರೂಮ್​​​ ಆನ್​​ ಲೈನ್​ ಬುಕ್ಕಿಂಗ್
ಬಿಜೆಪಿ ನಿಯೋಗದ ನಾಯಕತ್ವ ವಹಿಸಿದ್ದ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ
ಬಿಜೆಪಿ ನಿಯೋಗದ ನಾಯಕತ್ವ ವಹಿಸಿದ್ದ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ
ಸರ್ಕಾರವನ್ನು ದೂರಿ ಏನು ಪ್ರಯೋಜನ ಎಂದ ಅಶಯ್ ಅಂಬಲಿ ತಂದೆ
ಸರ್ಕಾರವನ್ನು ದೂರಿ ಏನು ಪ್ರಯೋಜನ ಎಂದ ಅಶಯ್ ಅಂಬಲಿ ತಂದೆ
ಯಾರು ಹೊಣೆ ಅಂತ ಗೊತ್ತಾಗಲು ಇನ್ನೂ 15 ದಿನ ಕಾಯಬೇಕು: ಜಾರಕಿಹೊಳಿ
ಯಾರು ಹೊಣೆ ಅಂತ ಗೊತ್ತಾಗಲು ಇನ್ನೂ 15 ದಿನ ಕಾಯಬೇಕು: ಜಾರಕಿಹೊಳಿ
ಅವನಿಗೆ 25, ಅವಳಿಗೆ 36..OYO ರೂಂಗೆ ಕರೆದೊಯ್ದು ಹತ್ಯೆ: ಅಸಲಿ ಕಾರಣವೇನು?
ಅವನಿಗೆ 25, ಅವಳಿಗೆ 36..OYO ರೂಂಗೆ ಕರೆದೊಯ್ದು ಹತ್ಯೆ: ಅಸಲಿ ಕಾರಣವೇನು?