Petrol Diesel Rate Today: ವಿವಿಧ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ? ಇಲ್ಲಿದೆ ಮಾಹಿತಿ
Petrol Diesel Price Today, 12-02-2022: ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 100.58 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 85.01 ರೂಪಾಯಿ ದಾಖಲಾಗಿದೆ. ವಾಣಿಜ್ಯ ನಗರಿ ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 109.98 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.14 ರೂಪಾಯಿ ಇದೆ.
Petrol Diesel Price Today|ದೆಹಲಿ: ನವೆಂಬರ್ಗೂ ಮೊದಲು ದೇಶದಲ್ಲಿ ಪೆಟ್ರೋಲ್-ಡೀಸೆಲ್ ಬೆಲೆ ಏರಿಳಿತವಾಗುತ್ತಿತ್ತು. ನವೆಂಬರ್ 4ರಂದು ಕೇಂದ್ರ ಸರ್ಕಾರ ಪೆಟ್ರೋಲ್-ಡೀಸೆಲ್ ಮೇಲಿನ ಅಬಕಾರಿ ಸುಂಕ ಕಡಿತಗೊಳಿಸಿತ್ತು. ಇದರ ನಂತರ ಹಲವು ರಾಜ್ಯ ಸರ್ಕಾರಗಳೂ ಕೂಡ ವ್ಯಾಟ್ (VAT) ಕಡಿತಗೊಳಿಸಿವೆ. ಅಂದಿನಿಂದ ಪೆಟ್ರೋಲ್ (Petrol Price), ಡೀಸೆಲ್ ಬೆಲೆ (Diesel Price) ಮಹಾನಗರಗಳಲ್ಲಿ ಸ್ಥಿರವಾಗಿದೆ. ಭಾರತದ ತೈಲ ಕಂಪನಿಗಳು ಇಂದು (ಫೆಬ್ರವರಿ 12, ಶನಿವಾರ) ಬೆಳಗ್ಗೆ ಪೆಟ್ರೋಲ್-ಡೀಸೆಲ್ ಬೆಲೆಯನ್ನು ಬಿಡುಗಡೆ ಮಾಡಿದ್ದು, ಇಂದು ಕೂಡ ಇಂಧನಗಳ ದರದಲ್ಲಿ(Fuel Price) ಯಾವುದೇ ಬದಲಾವಣೆಯಾಗಿಲ್ಲ. ಕಳೆದ ಮೂರು ತಿಂಗಳುಗಳಿಂದಲೂ ತೈಲಗಳ ಬೆಲೆ ಸ್ಥಿರವಾಗಿಯೇ ಇದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯಲ್ಲಿ ಏರಿಳಿತವಾಗುತ್ತಿದ್ದರೂ, ಅದು ಪೆಟ್ರೋಲ್-ಡೀಸೆಲ್ ಬೆಲೆಯ ಮೇಲೆ ಯಾವುದೇ ಪರಿಣಾಮ ಬೀರುತ್ತಿಲ್ಲ.
ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 100.58 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 85.01 ರೂಪಾಯಿ ದಾಖಲಾಗಿದೆ. ವಾಣಿಜ್ಯ ನಗರಿ ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 109.98 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.14 ರೂಪಾಯಿ ಇದೆ. ಅದೇ ರೀತಿ ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 101.50 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 91.52 ರೂಪಾಯಿ ಇದೆ. ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ಬೆಲೆ 104.67 ರೂಪಾಯಿ ಹಾಗೂ ಲೀಟರ್ ಡೀಸೆಲ್ ಡೀಸೆಲ್ ದರ 89.79 ರೂಪಾಯಿ ನಿಗದಿಯಾಗಿದೆ.
ಹೈದರಾಬಾದ್ನಲ್ಲಿ ಲೀಟರ್ ಪೆಟ್ರೋಲ್ ದರ 108.20 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.62 ರೂಪಾಯಿ ನಿಗದಿಯಾಗಿದೆ. ಗುಜರಾತ್ನ ಗಾಂಧಿನಗರದಲ್ಲಿ ಲೀಟರ್ ಪೆಟ್ರೋಲ್ ದರ 95.35 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 89.33 ರೂಪಾಯಿ ನಿಗದಿಯಾಗಿದೆ. ಕೇರಳದ ತಿರುವನಂತಪುರಂನಲ್ಲಿ ಲೀಟರ್ ಪೆಟ್ರೋಲ್ಗೆ 106.24 ರೂಪಾಯಿ ಇದ್ದು, ಲೀಟರ್ ಡೀಸೆಲ್ ಬೆಲೆ 93.37 ರೂಪಾಯಿ ನಿಗದಿಯಾಗಿದೆ.
ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ:
ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ. ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.
ಇದನ್ನೂ ಓದಿ:
ವಿವಿಧ ನಗರದಲ್ಲಿ ಪೆಟ್ರೋಲ್ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/petrol-price-today.html
ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/diesel-price-today.html