AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Diesel Rate Today: ನಿಮ್ಮೂರಿನ ಪೆಟ್ರೋಲ್​, ಡೀಸೆಲ್​ ದರದ ಮಾಹಿತಿ; ದೂರ ಪ್ರಯಾಣದ ಮುನ್ನವೇ ಚೆಕ್​ ಮಾಡಿ

Petrol Diesel Price Today, 19-02-2022: ಕಳೆದ ಮೂರು ತಿಂಗಳುಗಳಿಂದಲೂ ತೈಲಗಳ ಬೆಲೆ ಸ್ಥಿರವಾಗಿಯೇ ಇದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯಲ್ಲಿ ಏರಿಳಿತವಾಗುತ್ತಿದ್ದರೂ, ಅದು ಪೆಟ್ರೋಲ್​-ಡೀಸೆಲ್​ ಬೆಲೆಯ ಮೇಲೆ ಯಾವುದೇ ಪ್ರಭಾವ ಬೀರುತ್ತಿಲ್ಲ.

Petrol Diesel Rate Today: ನಿಮ್ಮೂರಿನ ಪೆಟ್ರೋಲ್​, ಡೀಸೆಲ್​ ದರದ ಮಾಹಿತಿ; ದೂರ ಪ್ರಯಾಣದ ಮುನ್ನವೇ ಚೆಕ್​ ಮಾಡಿ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Feb 19, 2022 | 7:48 AM

Share

Petrol Diesel Price Today| ದೆಹಲಿ: ನವೆಂಬರ್​​ಗೂ ಮೊದಲು ದೇಶದಲ್ಲಿ ಪೆಟ್ರೋಲ್​-ಡೀಸೆಲ್​ ಬೆಲೆ ಏರಿಕೆಯಾಗುತ್ತಲೇ ಇತ್ತು. ಆದರೆ ದೀಪಾವಳಿಗೂ ಮುನ್ನಾದಿನ ಅಂದರೆ ನವೆಂಬರ್ 4ರಂದು ಕೇಂದ್ರ ಸರ್ಕಾರ ಪೆಟ್ರೋಲ್​-ಡೀಸೆಲ್ ಮೇಲಿನ ಅಬಕಾರಿ ಸುಂಕ ಕಡಿತಗೊಳಿಸಿತ್ತು. ಅದಾದ ಮೇಲೆ ಹಲವು ರಾಜ್ಯ ಸರ್ಕಾರಗಳೂ ಕೂಡ ವ್ಯಾಟ್​ (VAT) ಕಡಿತಗೊಳಿಸಿವೆ. ಹೀಗಾಗಿ ಅಂದಿನಿಂದಲೂ ಪೆಟ್ರೋಲ್ (Petrol Price), ಡೀಸೆಲ್​ ಬೆಲೆ (Diesel Price) ಮಹಾನಗರಗಳಲ್ಲಿ ಸ್ಥಿರವಾಗಿಯೇ ಇವೆ.  ಭಾರತದ ತೈಲ ಕಂಪನಿಗಳು ಇಂದು (ಫೆಬ್ರವರಿ 19, ಶನಿವಾರ) ಬೆಳಗ್ಗೆ ಪೆಟ್ರೋಲ್​-ಡೀಸೆಲ್​ ಬೆಲೆಯನ್ನು ಬಿಡುಗಡೆ ಮಾಡಿದ್ದು, ಇಂದು ಕೂಡ ಇಂಧನಗಳ ದರದಲ್ಲಿ(Fuel Price) ಯಾವುದೇ ಬದಲಾವಣೆಯಾಗಿಲ್ಲ. ಕಳೆದ ಮೂರು ತಿಂಗಳುಗಳಿಂದಲೂ ತೈಲಗಳ ಬೆಲೆ ಸ್ಥಿರವಾಗಿಯೇ ಇದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯಲ್ಲಿ ಏರಿಳಿತವಾಗುತ್ತಿದ್ದರೂ, ಅದು ಪೆಟ್ರೋಲ್​-ಡೀಸೆಲ್​ ಬೆಲೆಯ ಮೇಲೆ ಯಾವುದೇ ಪ್ರಭಾವ ಬೀರುತ್ತಿಲ್ಲ.

ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 100.58 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 85.01 ರೂಪಾಯಿ ದಾಖಲಾಗಿದೆ. ವಾಣಿಜ್ಯ ನಗರಿ ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 109.98 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.14 ರೂಪಾಯಿ ಇದೆ. ಅದೇ ರೀತಿ ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 101.40 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 91.53 ರೂಪಾಯಿ ಇದೆ. ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ಬೆಲೆ 104.67 ರೂಪಾಯಿ ಹಾಗೂ ಲೀಟರ್ ಡೀಸೆಲ್ ಡೀಸೆಲ್ ದರ 89.79 ರೂಪಾಯಿ ನಿಗದಿಯಾಗಿದೆ.

ಹೈದರಾಬಾದ್ನಲ್ಲಿ ಲೀಟರ್ ಪೆಟ್ರೋಲ್ ದರ 108.20 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.62 ರೂಪಾಯಿ ನಿಗದಿಯಾಗಿದೆ. ಗುಜರಾತ್​ನ ಗಾಂಧಿನಗರದಲ್ಲಿ ಲೀಟರ್ ಪೆಟ್ರೋಲ್ ದರ 95.35 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 89.33 ರೂಪಾಯಿ ನಿಗದಿಯಾಗಿದೆ. ಕೇರಳದ ತಿರುವನಂತಪುರಂನಲ್ಲಿ ಲೀಟರ್ ಪೆಟ್ರೋಲ್ಗೆ 106.36 ರೂಪಾಯಿ ಇದ್ದು, ಲೀಟರ್ ಡೀಸೆಲ್ ಬೆಲೆ 93.47 ರೂಪಾಯಿ ನಿಗದಿಯಾಗಿದೆ. ಲಕ್ನೋದಲ್ಲಿ ಲೀಟರ್ ಪೆಟ್ರೋಲ್ ದರ 95.28 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.80 ರೂಪಾಯಿ ನಿಗದಿಯಾಗಿದೆ.

ಶ್ರೀಗಂಗಾನಗರದಲ್ಲಿ ಲೀಟರ್ ಪೆಟ್ರೋಲ್​ಗೆ 114.01 ರೂಪಾಯಿ ಹಾಗೂ ಲೀಟರ್ ಡೀಸೆಲ್ಗೆ 98.39 ರೂಪಾಯಿ ದಾಖಲಾಗಿದೆ. ಭೋಪಾಲ್ನಲ್ಲಿ ಲೀಟರ್ ಪೆಟ್ರೋಲ್ ದರ 107.23 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 90.87 ರೂಪಾಯಿ ಇದೆ. ಗುವಾಹಟಿಯಲ್ಲಿ ಲೀಟರ್ ಪೆಟ್ರೋಲ್ ದರ 94.58 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.80 ರೂಪಾಯಿ ನಿಗದಿಯಾಗಿದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ:

ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ. ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ಇದನ್ನೂ ಓದಿ:

ವಿವಿಧ ನಗರದಲ್ಲಿ ಪೆಟ್ರೋಲ್ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/diesel-price-today.htm

Follow Us
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್