AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Diesel Rate Today:​ ಪೆಟ್ರೋಲ್​, ಡೀಸೆಲ್​ ದರದಲ್ಲಿ ವ್ಯತ್ಯಯವಾಗಿದೆಯೇ? ಇಲ್ಲಿದೆ ಇಂಧನ ದರ ವಿವರ

Petrol Diesel Price Today, 20-02-2022: ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 100.58 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 85.01 ರೂಪಾಯಿ ದಾಖಲಾಗಿದೆ. ವಾಣಿಜ್ಯ ನಗರಿ ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 109.98 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.14 ರೂಪಾಯಿ ಇದೆ.

Petrol Diesel Rate Today:​ ಪೆಟ್ರೋಲ್​, ಡೀಸೆಲ್​ ದರದಲ್ಲಿ ವ್ಯತ್ಯಯವಾಗಿದೆಯೇ? ಇಲ್ಲಿದೆ ಇಂಧನ ದರ ವಿವರ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Feb 20, 2022 | 7:57 AM

Share

Petrol Diesel Price Today|ದೆಹಲಿ: ನವೆಂಬರ್​​ಗೂ ಮೊದಲು ದೇಶದಲ್ಲಿ ಪೆಟ್ರೋಲ್​-ಡೀಸೆಲ್​ ಬೆಲೆ ಏರಿಕೆಯಾಗುತ್ತಲೇ ಇತ್ತು. ಅದರಿಂದಾಗಿ ಜನಸಾಮಾನ್ಯರು ರೋಸಿ ಹೋಗಿದ್ದರು. ಶತಕವನ್ನೂ ದಾಟಿ ಇಂಧನ ದರ ಮುನ್ನುಗ್ಗುತ್ತಿತ್ತು. ಆದರೆ ದೀಪಾವಳಿಗೂ ಮುನ್ನಾದಿನ ಅಂದರೆ ನವೆಂಬರ್ 4ರಂದು ಕೇಂದ್ರ ಸರ್ಕಾರ ಪೆಟ್ರೋಲ್​-ಡೀಸೆಲ್ ಮೇಲಿನ ಅಬಕಾರಿ ಸುಂಕ ಕಡಿತಗೊಳಿಸಿತ್ತು. ಅದಾದ ಮೇಲೆ ಹಲವು ರಾಜ್ಯ ಸರ್ಕಾರಗಳೂ ಕೂಡ ವ್ಯಾಟ್​ (VAT) ಕಡಿತಗೊಳಿಸಿವೆ. ಹೀಗಾಗಿ ಅಂದಿನಿಂದಲೂ ಪೆಟ್ರೋಲ್ (Petrol Price), ಡೀಸೆಲ್​ ಬೆಲೆ (Diesel Price) ಮಹಾನಗರಗಳಲ್ಲಿ ಸ್ಥಿರವಾಗಿಯೇ ಇವೆ.  ಭಾರತದ ತೈಲ ಕಂಪನಿಗಳು ಇಂದು (ಫೆಬ್ರವರಿ 20, ಭಾನುವಾರ) ಬೆಳಗ್ಗೆ ಪೆಟ್ರೋಲ್​-ಡೀಸೆಲ್​ ಬೆಲೆಯನ್ನು ಬಿಡುಗಡೆ ಮಾಡಿದ್ದು,ಇಂದು ಕೂಡ ಇಂಧನಗಳ ದರದಲ್ಲಿ(Fuel Price) ಯಾವುದೇ ಬದಲಾವಣೆಯಾಗಿಲ್ಲ. ಕಳೆದ ಎರಡೂವರೆ ತಿಂಗಳುಗಳಿಂದಲೂ ತೈಲಗಳ ಬೆಲೆ ಸ್ಥಿರವಾಗಿಯೇ ಇದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯಲ್ಲಿ ಏರಿಳಿತವಾಗುತ್ತಿದ್ದರೂ, ಅದು ಪೆಟ್ರೋಲ್​-ಡೀಸೆಲ್​ ಬೆಲೆಯ ಮೇಲೆ ಯಾವುದೇ ಪ್ರಭಾವ ಬೀರುತ್ತಿಲ್ಲ.

ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 100.58 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 85.01 ರೂಪಾಯಿ ದಾಖಲಾಗಿದೆ. ವಾಣಿಜ್ಯ ನಗರಿ ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 109.98 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.14 ರೂಪಾಯಿ ಇದೆ. ಅದೇ ರೀತಿ ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 101.40 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 91.53 ರೂಪಾಯಿ ಇದೆ. ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ಬೆಲೆ 104.67 ರೂಪಾಯಿ ಹಾಗೂ ಲೀಟರ್ ಡೀಸೆಲ್ ಡೀಸೆಲ್ ದರ 89.79 ರೂಪಾಯಿ ನಿಗದಿಯಾಗಿದೆ.

ಹೈದರಾಬಾದ್​ನಲ್ಲಿ ಲೀಟರ್ ಪೆಟ್ರೋಲ್ ದರ 108.20 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.62 ರೂಪಾಯಿ ನಿಗದಿಯಾಗಿದೆ. ಗುಜರಾತ್​ನ ಗಾಂಧಿನಗರದಲ್ಲಿ ಲೀಟರ್ ಪೆಟ್ರೋಲ್ ದರ 95.35 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 89.33 ರೂಪಾಯಿ ನಿಗದಿಯಾಗಿದೆ. ಕೇರಳದ ತಿರುವನಂತಪುರಂನಲ್ಲಿ ಲೀಟರ್ ಪೆಟ್ರೋಲ್ಗೆ 106.36 ರೂಪಾಯಿ ಇದ್ದು, ಲೀಟರ್ ಡೀಸೆಲ್ ಬೆಲೆ 93.47 ರೂಪಾಯಿ ನಿಗದಿಯಾಗಿದೆ. ಲಕ್ನೋದಲ್ಲಿ ಲೀಟರ್ ಪೆಟ್ರೋಲ್ ದರ 95.28 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.80 ರೂಪಾಯಿ ನಿಗದಿಯಾಗಿದೆ.

ಶ್ರೀಗಂಗಾನಗರದಲ್ಲಿ ಲೀಟರ್ ಪೆಟ್ರೋಲ್​ಗೆ 114.01 ರೂಪಾಯಿ ಹಾಗೂ ಲೀಟರ್ ಡೀಸೆಲ್ಗೆ 98.39 ರೂಪಾಯಿ ದಾಖಲಾಗಿದೆ. ಭೋಪಾಲ್ನಲ್ಲಿ ಲೀಟರ್ ಪೆಟ್ರೋಲ್ ದರ 107.23 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 90.87 ರೂಪಾಯಿ ಇದೆ. ಗುವಾಹಟಿಯಲ್ಲಿ ಲೀಟರ್ ಪೆಟ್ರೋಲ್ ದರ 94.58 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.80 ರೂಪಾಯಿ ನಿಗದಿಯಾಗಿದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ:

ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ. ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ಇದನ್ನೂ ಓದಿ:

ವಿವಿಧ ನಗರದಲ್ಲಿ ಪೆಟ್ರೋಲ್ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/diesel-price-today.htm

Follow Us
Web contact
Web contact

TV9 Kannada

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?