AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Diesel Rate Today:​ ಪೆಟ್ರೋಲ್​, ಡೀಸೆಲ್​ ಬೆಲೆ ಈಗ ಎಷ್ಟಿದೆ? ಇಲ್ಲಿದೆ ನಿಮ್ಮೂರಿನ ಇಂಧನ ದರದ ಮಾಹಿತಿ

Petrol Diesel Price Today, 24-02-2022: ಕಳೆದ ಎರಡೂವರೆ ತಿಂಗಳುಗಳಿಂದಲೂ ತೈಲಗಳ ಬೆಲೆ ಸ್ಥಿರವಾಗಿಯೇ ಇದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯಲ್ಲಿ ಏರಿಳಿತವಾಗುತ್ತಿದ್ದರೂ, ಅದು ಪೆಟ್ರೋಲ್​-ಡೀಸೆಲ್​ ಬೆಲೆಯ ಮೇಲೆ ಯಾವುದೇ ಪ್ರಭಾವ ಬೀರುತ್ತಿಲ್ಲ.

Petrol Diesel Rate Today:​ ಪೆಟ್ರೋಲ್​, ಡೀಸೆಲ್​ ಬೆಲೆ ಈಗ ಎಷ್ಟಿದೆ? ಇಲ್ಲಿದೆ ನಿಮ್ಮೂರಿನ ಇಂಧನ ದರದ ಮಾಹಿತಿ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Feb 24, 2022 | 7:31 AM

Share

Petrol Diesel Price Today|ದೆಹಲಿ: ನವೆಂಬರ್​​ಗೂ ಮೊದಲು ದೇಶದಲ್ಲಿ ಪೆಟ್ರೋಲ್​-ಡೀಸೆಲ್​ ಬೆಲೆ ಏರಿಕೆಯಾಗುತ್ತಲೇ ಇತ್ತು. ಅದರಿಂದಾಗಿ ಜನಸಾಮಾನ್ಯರು ರೋಸಿ ಹೋಗಿದ್ದರು. ಶತಕವನ್ನೂ ದಾಟಿ ಇಂಧನ ದರ ಮುನ್ನುಗ್ಗುತ್ತಿತ್ತು. ಆದರೆ ದೀಪಾವಳಿಗೂ ಮುನ್ನಾದಿನ ಅಂದರೆ ನವೆಂಬರ್ 4ರಂದು ಕೇಂದ್ರ ಸರ್ಕಾರ ಪೆಟ್ರೋಲ್​-ಡೀಸೆಲ್ ಮೇಲಿನ ಅಬಕಾರಿ ಸುಂಕ ಕಡಿತಗೊಳಿಸಿತ್ತು. ಅದಾದ ಮೇಲೆ ಹಲವು ರಾಜ್ಯ ಸರ್ಕಾರಗಳೂ ಕೂಡ ವ್ಯಾಟ್​ (VAT) ಕಡಿತಗೊಳಿಸಿವೆ. ಹೀಗಾಗಿ ಅಂದಿನಿಂದಲೂ ಪೆಟ್ರೋಲ್ (Petrol Price), ಡೀಸೆಲ್​ ಬೆಲೆ (Diesel Price) ಮಹಾನಗರಗಳಲ್ಲಿ ಸ್ಥಿರವಾಗಿಯೇ ಇವೆ.  ಭಾರತದ ತೈಲ ಕಂಪನಿಗಳು ಇಂದು (ಫೆಬ್ರವರಿ 24, ಗುರುವಾರ) ಬೆಳಗ್ಗೆ ಪೆಟ್ರೋಲ್​-ಡೀಸೆಲ್​ ಬೆಲೆಯನ್ನು ಬಿಡುಗಡೆ ಮಾಡಿದ್ದು,ಇಂದು ಕೂಡ ಇಂಧನಗಳ ದರದಲ್ಲಿ(Fuel Price) ಯಾವುದೇ ಬದಲಾವಣೆಯಾಗಿಲ್ಲ. ಕಳೆದ ಎರಡೂವರೆ ತಿಂಗಳುಗಳಿಂದಲೂ ತೈಲಗಳ ಬೆಲೆ ಸ್ಥಿರವಾಗಿಯೇ ಇದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯಲ್ಲಿ ಏರಿಳಿತವಾಗುತ್ತಿದ್ದರೂ, ಅದು ಪೆಟ್ರೋಲ್​-ಡೀಸೆಲ್​ ಬೆಲೆಯ ಮೇಲೆ ಯಾವುದೇ ಪ್ರಭಾವ ಬೀರುತ್ತಿಲ್ಲ.

ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 100.58 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 85.01 ರೂಪಾಯಿ ದಾಖಲಾಗಿದೆ. ವಾಣಿಜ್ಯ ನಗರಿ ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 109.98 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.14 ರೂಪಾಯಿ ಇದೆ. ಅದೇ ರೀತಿ ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 101.40 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 91.53 ರೂಪಾಯಿ ಇದೆ. ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ಬೆಲೆ 104.67 ರೂಪಾಯಿ ಹಾಗೂ ಲೀಟರ್ ಡೀಸೆಲ್ ಡೀಸೆಲ್ ದರ 89.79 ರೂಪಾಯಿ ನಿಗದಿಯಾಗಿದೆ.

ಹೈದರಾಬಾದ್ನಲ್ಲಿ ಲೀಟರ್ ಪೆಟ್ರೋಲ್ ದರ 108.20 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.62 ರೂಪಾಯಿ ನಿಗದಿಯಾಗಿದೆ. ಗುಜರಾತ್​ನ ಗಾಂಧಿನಗರದಲ್ಲಿ ಲೀಟರ್ ಪೆಟ್ರೋಲ್ ದರ 95.35 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 89.33 ರೂಪಾಯಿ ನಿಗದಿಯಾಗಿದೆ. ಕೇರಳದ ತಿರುವನಂತಪುರಂನಲ್ಲಿ ಲೀಟರ್ ಪೆಟ್ರೋಲ್ಗೆ 106.36 ರೂಪಾಯಿ ಇದ್ದು, ಲೀಟರ್ ಡೀಸೆಲ್ ಬೆಲೆ 93.47 ರೂಪಾಯಿ ನಿಗದಿಯಾಗಿದೆ. ಲಕ್ನೋದಲ್ಲಿ ಲೀಟರ್ ಪೆಟ್ರೋಲ್ ದರ 95.28 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.80 ರೂಪಾಯಿ ನಿಗದಿಯಾಗಿದೆ.

ಶ್ರೀಗಂಗಾನಗರದಲ್ಲಿ ಲೀಟರ್ ಪೆಟ್ರೋಲ್​ಗೆ 114.01 ರೂಪಾಯಿ ಹಾಗೂ ಲೀಟರ್ ಡೀಸೆಲ್ಗೆ 98.39 ರೂಪಾಯಿ ದಾಖಲಾಗಿದೆ. ಭೋಪಾಲ್ನಲ್ಲಿ ಲೀಟರ್ ಪೆಟ್ರೋಲ್ ದರ 107.23 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 90.87 ರೂಪಾಯಿ ಇದೆ. ಗುವಾಹಟಿಯಲ್ಲಿ ಲೀಟರ್ ಪೆಟ್ರೋಲ್ ದರ 94.58 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.80 ರೂಪಾಯಿ ನಿಗದಿಯಾಗಿದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ:

ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ. ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ಇದನ್ನೂ ಓದಿ:

ವಿವಿಧ ನಗರದಲ್ಲಿ ಪೆಟ್ರೋಲ್ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/diesel-price-today.htm

Follow Us
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ